ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳನ್ನು ಸಮೀಕ್ಷೆ ಮಾಡಲು ಮುಂದಾಗಿರುವ ಬಿಬಿಎಂಪಿ ಶೀಘ್ರ ಅರ್ಹ ವ್ಯಾಪಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.
ಬೆಂಗಳೂರು (ಜು.22): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 8 ವಲಯಗಳಲ್ಲಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳ ವಲಯ ಗುರುತಿಸುವುದು ಹಾಗೂ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ಮಾಡಲು ಬಿಬಿಎಂಪಿ ಮುಂದಾಗಿದೆ. ಶೀಘ್ರದಲ್ಲಿಯೇ ಬೀದಿ ಬದಿ ವ್ಯಾಪಾರಿಗಳ ಪಟ್ಟಿಯನ್ನು ಸಿದ್ಧಪಡಿಸಿ ಬಿಡುಗಡೆ ಮಾಡಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ವ್ಯಾಪಾರಿಗಳ ಸಮೀಕ್ಷೆ ಹಾಗೂ ಮಾರಾಟ ವಲಯಗಳನ್ನು ಗುರುತಿಸುವ ಸಂಬಂಧ ಬಿ.ಎಸ್.ಡಬ್ಲ್ಯೂ.ಎಂ.ಎಲ್ ನಲ್ಲಿ ಸಭೆ ನಡೆಸಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ವ್ಯಾಪಾರಿಗಳ ಸಮೀಕ್ಷೆಗಾಗಿ ಈಗಾಗಲೇ ಪ್ರಮಾಣಿತ ಕಾರ್ಯಾಚರಣೆಯ ವಿಧಾನ (ಎಸ್.ಒ.ಪಿ) ಬಿಡುಗಡೆಗೊಳಿಸಲಾಗಿದೆ. ಇದರ ಅನುಸಾರ ಆಯಾ ವಲಯಗಳಲ್ಲಿ ಬೀದಿ ವ್ಯಾಪಾರಿಗಳ ವ್ಯಾಪಾರ ವಲಯಗಳನ್ನು ಗುರುತಿಸಬೇಕು. ನಗರದಲ್ಲಿ ಎಷ್ಟು ಮಂದಿ ಬೀದಿ ವ್ಯಾಪಾರಿಗಳಿದ್ದಾರೆ ಎಂಬುದರ ನಿಖರವಾದ ಮಾಹಿತಿಯನ್ನು ಪಡೆಯುವ ನಿಟ್ಟಿನಲ್ಲಿ, ಬೀದಿ ವ್ಯಾಪಾರಿಗಳ ಸಮಿಕ್ಷೆ ಆಗಬೇಕಿದೆ. ಈ ಸಂಬಂಧ ಬೀದಿ ವ್ಯಾಪಾರಿಗಳ ಸಮೀಕ್ಷೆಗಾಗಿ ಕೂಡಲೆ ಅಗತ್ಯ ಸಿಬ್ಬಂದಿ ನಿಯೋಜಿಸಿ ನಿಗದಿತ ಸಮಯದಲ್ಲಿ ಸಮೀಕ್ಷೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
undefined
ನಟ ದರ್ಶನ್ ಜೈಲಲ್ಲಿ ಪ್ರತಿದಿನ ಬಿರಿಯಾನಿ ತಿನ್ನೋಕಾಗಲ್ಲ, ಬೇಧಿ ಆಗಿದ್ರೆ ಸಪ್ಪೆ ಊಟ ಕೊಡಿ; ಎಸ್‌ಪಿಪಿ ಪ್ರಸನ್ನಕುಮಾರ
ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಮಾತನಾಡಿ, ಬೀದಿ ಬದಿ ವ್ಯಾಪಾರಿಗಳ(ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ವ್ಯಾಪಾರ ನಿಯಂತ್ರಣ) ಅಧಿನಿಯಮ, 2014 ಮತ್ತು ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ(ಜೀವನೋಪಾಯ ಸಂರಕ್ಷಣೆ, ಬೀದಿ ಬದಿ ವ್ಯಾಪಾರದ ನಿಯಂತ್ರಣ ಮತ್ತು ಪರವಾನಗಿ) ಯೋಜನೆ, 2020 ರಂತೆ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ನಡೆಸಬೇಕಾಗಿದೆ. ಈ ಸಂಬಂಧ ಆಯಾ ವಲಯಗಳಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಗಾಗಿ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿಕೊಂಡು ಬೀದಿ ವ್ಯಾಪಾರಿಗಳನ್ನು ಗುರುತಿಸಬೇಕೆಂದು ತಿಳಿಸಿದರು.
ಬೆಂಗಳೂರಿನ ವೀಕೆಂಡ್ ಒಂಟಿತನ ಕಳೆಯಲು ಆಟೋ ಡ್ರೈವರ್ ಆದ ಟೆಕ್ಕಿ!
ಆಯಾ ವಲಯದ ಜನಸಂಖ್ಯೆಗೆ ಅನುಗುಣವಾಗಿ ಶೇ. 2.5 ರಷ್ಟು ಮಾರಾಟ ವಲಯ ಗುರುತಿಸಬೇಕು. ಬೀದಿ ವ್ಯಾಪಾರಿಗಳ ಸಮೀಕ್ಷೆ ಮಾಡಲು ವೆಬ್ ಅಫ್ಲಿಕೇಷನ್ ಹಾಗೂ ಮೊಬೈಲ್ ಅಫ್ಲಿಕೇಷನ್ ಸಿದ್ದಪಡಿಸಿದ್ದು, ಅದರ ಮೂಲಕ ಬೀದಿ ವ್ಯಾಪಾರ ಮಾಡುತ್ತಿರುವ ಸ್ಥಳದಲ್ಲಿ ಜಿಯೋ ಟ್ಯಾಗಿಂಗ್ ಮೂಲಕ ಸಮೀಕ್ಷೆ ಮಾಡಲಾಗುತ್ತದೆ. ಆಯಾ ವಲಯಗಳಲ್ಲಿ ಸಮೀಕ್ಷೆ ನಡೆದ ನಂತರ ಪೂರ್ಣ ವಿವರಗಳುಳ್ಳ ಪಟ್ಟಿಯನ್ನು ಪಟ್ಟಣ ಮಾರಾಟ ಸಮಿತಿಯ ಮುಂದಿರಿಸಿ ಆಕ್ಷೇಪಣೆಗಳಿದ್ದಲ್ಲಿ ಸ್ವೀಕರಿಸಲು ಕಾಲಾವಕಾಶ ನೀಡಲಾಗುವುದು. ನಂತರ, ಪಾಲಿಕೆಯ ಅಧಿಕೃತ ವೆಬ್‌ಸೈಟ್ ನಲ್ಲಿ ಅಪ್ಲೋಡ್ ಮಾಡಲಾಗುತ್ತದೆ ಎಂದು ತಿಳಿಸಿದರು.