ಬೆಂಗಳೂರಿನ ಡೆಂಘೀ ಹಾಟ್‌ಸ್ಪಾಟ್‌ಗಳಲ್ಲಿ ಸೊಳ್ಳೆ ಕಚ್ಚದಂತೆ ಡೀಟ್ ಕ್ರೀಮ್ ಹಾಗೂ ನೀಮ್ ಆಯಿಲ್ ವಿತರಣೆ!

By Sathish Kumar KH  |  First Published Jul 23, 2024, 1:34 PM IST

ಬೆಂಗಳೂರಿನಲ್ಲಿ ಡೆಂಘೀ ಕೇಸ್‌ಗಳು ಹೆಚ್ಚಾಗಿ ವರದಿಯಾಗುವ ಪ್ರದೇಶಗಳಲ್ಲಿ ಜನರಿಗೆ ಸೊಳ್ಳೆ ಕಚ್ಚದಂತೆ ಡೀಟ್ ಕ್ರೀಮ್ ಹಾಗೂ ನೀಮ್ ಆಯಿಲ್ ವಿತರಣೆ ಮಾಡಲಾಗುತ್ತದೆ.


ಬೆಂಗಳೂರು (ಜು.23): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಘೀ ಕೇಸ್‌ಗಳು ಹೆಚ್ಚಾಗಿ ವರದಿಯಾಗುವ ಪ್ರದೇಶಗಳಲ್ಲಿ ಬಿಬಿಎಂಪಿ ವತಿಯಿಂದ ನಾಗರೀಕರಿಗೆ ಸೊಳ್ಳೆ ಕಚ್ಚದಂತೆ ಡೀಟ್ ಕ್ರೀಮ್ ಹಾಗೂ ನೀಮ್ ಆಯಿಲ್ ವಿತರಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.

ಡೆಂಘಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ವಲಯ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆಯಾ ವಲಯಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ವಲಯ ಆಯುಕ್ತರು ಡೆಂಘೀ ನಿಯಂತ್ರಿಸುವ ಸಂಬಂಧ ಆರೋಗ್ಯ ವಿಭಾಗದ ಅಧಿಕಾರಿಗಳ ಜೊತೆ ಪ್ರತಿನಿತ್ಯ ಸಭೆ ನಡೆಸಿ ಮೇಲ್ವಿಚಾರಣೆ ಮಾಡಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಹೆಚ್ಚು ಡೆಂಘೀ ಪ್ರಕರಣಗಳು ಕಂಡುಬರುವ ಹಾಟ್ ಸ್ಪಾಟ್ ಸ್ಥಳಗಳಲ್ಲಿ ನಾಗರೀಕರಿಗೆ ಸೊಳ್ಳೆ ಕಚ್ಚದಂತೆ ಡೀಟ್ ಕ್ರೀಮ್ ಹಾಗೂ ನೀಮ್ ಆಯಿಲ್ ವಿತರಿಸಬೇಕು. ಜೊತೆಗೆ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಲು ಹೆಚ್ಚಾಗಿ ಫಾಂಗಿಂಗ್ ಹಾಗೂ ಔಷಧಿ ಸಿಂಪಡಣೆ ಮಾಡಬೇಕೆಂದು ಸೂಚಿಸಿದರು. 

Latest Videos

undefined

ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಮುಂದಾದ ಬಿಬಿಎಂಪಿ; ಶೀಘ್ರವೇ ಪಟ್ಟಿ ಪ್ರಕಟ

ನಗರದಲ್ಲಿ ಪ್ರತಿನಿತ್ಯ ಸರಾಸರಿ 150 ರಿಂದ 160 ಡೆಂಘೀ ಪ್ರಕರಣಗಳು ಕಂಡುಬರುತ್ತಿದ್ದು, ಜುಲೈ 1 ರಿಂದ ನಿನ್ನೆಯವರೆಗೆ 3304 ಪ್ರಕರಣಗಳು ವರದಿಯಾಗಿವೆ. ಈ ಸಂಬಂಧ ಎಲ್ಲಾ ವಲಯಗಳಲ್ಲಿ ಡೆಂಘೀ ನಿಯಂತ್ರಣಕ್ಕಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಆಯಾ ವಲಯ ಹಿರಿಯ ಅಧಿಕಾರಿಗಳು ಆಸ್ಪತ್ರೆಗಳಿಗೆ ಭೇಟಿ ನೀಡಿ ಎಷ್ಟು ದರ ವಿಧಿಸುತ್ತಿದ್ದಾರೆ, ಎಷ್ಟು ಪ್ರಕರಣಗಳು ಕಂಡುಬರುತ್ತಿವೆ ಎಂಬುದನ್ನು ಪರಿಶೀಲಿಸಬೇಕು. ಸರ್ಕಾರಿ ಆದೇಶವನ್ನು ಉಲ್ಲಂಘಿಸಿ ಹೆಚ್ಚು ದರ ವಿಧಿಸುವ ಆಸ್ಪತ್ರೆಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು. 

ರಸ್ತೆ ಗುಂಡಿಗಳನ್ನು ಕೂಡಲೆ ಮುಚ್ಚಲು ಕ್ರಮವಹಿಸಿ: ನಗರದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ಕೂಡಲೆ ಮುಚ್ಚಲು ಕ್ರಮ ಕೈಗೊಳ್ಳಬೇಕು. ಜೊತೆಗೆ ನಗರದಲ್ಲಿ ಪರಿಣಾಮಕಾರಿಯಾಗಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ಅಭಿವೃದ್ಧಿಪಡಿಸುತ್ತಿರುವ ತಂತ್ರಾಂಶವನ್ನು ಸಿದ್ದಪಡಿಸಲಾಗುತ್ತಿದ್ದು, ಅದನ್ನು ಅನಾವರಣಗೊಳಿಸಲು ಸಿದ್ದತೆ ಮಾಡಿಕೊಳ್ಳಬೇಕು. ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಮಾಡಬೇಕು. ಈ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸಿ ಆದಷ್ಟು ಬೇಗ ವರದಿಯನ್ನು ಸಲ್ಲಿಸುವಂತೆ ಸೂಚಿಸಿದರು.

ರೀಲ್ಸ್ ಪ್ರಿಯರಿಗೆ ಬಿಬಿಎಂಪಿ ಭರ್ಜರಿ ಆಫರ್: ಡೆಂಘೀ ಬಗ್ಗೆ ರೀಲ್ಸ್ ಮಾಡಿ ಲಕ್ಷ ಬಹುಮಾನ ಗೆಲ್ಲಿ!

ಆಸ್ತಿ ತೆರಿಗೆ ಸಂಗ್ರಹಕ್ಕೆ ಕ್ರಮ ಕೈಗೊಳ್ಳಿ: ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹದ ವಿಚಾರದಲ್ಲಿ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು ಪರಿಣಾಮಕಾರಿಯಾಗಿ ಕಾರ್ಯರ್ನಿಹಿಸಿ ಹೆಚ್ಚು ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು. ಒಂದು ಬಾರಿ ತೀರುವಳಿ ಯೋಜನೆಯಡಿ ಬರುವ ಬಾಕಿ ಆಸ್ತಿ ಸುಸ್ತಿದಾರರಿಗೆ ಕೂಡಲೆ ತೆರಿಗೆ ಪಾವತಿಸಲು ಸೂಚಿಸಬೇಕು. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ಆಸ್ತಿ ತೆರಿಗೆಯನ್ನು ಪಾವತಿಸಿಕೊಳ್ಳಬೇಕು ಎಂದು ಖಡಕ್ ಸೂಚನೆ ನೀಡದರು. 

click me!