ಬಿಬಿಎಂಪಿಯನ್ನು ಯಾವುದೇ ಕಾರಣಕ್ಕೂ ವಿಭಜಿಸಲ್ಲ: ಡಿ.ಕೆ.ಶಿವಕುಮಾರ್

By Kannadaprabha NewsFirst Published Jul 5, 2024, 12:23 PM IST
Highlights

ಬಿಬಿಎಂಪಿಯನ್ನು ಯಾವುದೇ ಕಾರಣಕ್ಕೂ ವಿಭಜನೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 

ಬೆಂಗಳೂರು(ಜು.05):  ಬಿಬಿಎಂಪಿಯನ್ನು ಯಾವುದೇ ಕಾರಣಕ್ಕೂ ವಿಭಜನೆ ಮಾಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. 

ಬೆಂಗಳೂರಲ್ಲಿ ಸೈಡೆಕ್ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಗುರುವಾರ ಪಾಲಿಕೆಯ ಐಪಿಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜನೆ ಮಾಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನು ಗ್ರೇಟರ್ ಬೆಂಗಳೂರು  ವಿಚಾರವಾಗಿ ಸಭೆ ನಡೆಸಿಲ್ಲ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ನಾಲ್ಕು ತಿಂಗಳು ಬಿಬಿಎಂಪಿ ಮತ್ತು ಬಿಡಿಎಯಲ್ಲಿ ಹಲವು ಯೋಜನೆಗಳು ಸ್ಥಗಿತಗೊಂ ಡಿದ್ದವು. ವಿಧಾನಸಭೆ ಅಧಿವೇಶನ ಬರುತ್ತಿದೆ. 

Latest Videos

ಬಿಬಿಎಂಪಿ ವಿಭಜನೆಯಿಂದ ಕನ್ನಡಿಗರ ಹಿತಾಸಕ್ತಿಗೆ ಧಕ್ಕೆ: ಕರವೇ ನಾರಾಯಣಗೌಡ ಆತಂಕ

ಸದ್ಯದಲ್ಲಿ ಜಿಲ್ಲಾಧಿಕಾರಿಗಳ ಸಭೆ ಇದೆ. ಹಾಗಾಗಿ, ಸ್ಥಗಿತಗೊಂಡ ಯೋಜನೆಗಳ ಬಗ್ಗೆ ಚರ್ಚೆ ನಡೆಸುವುದಕ್ಕೆ ಸಭೆ ನಡೆಸಲಾಗಿದೆ. ಬಹುತೇಕ ಯೋಜನೆಗಳು ಅಂತಿಮಗೊಂಡಿವೆ. ತಾವೇ ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ಪ್ರಾತ್ಯಕ್ಷಿಕೆ ನೀಡಲಿದ್ದೇನೆ ಎಂದು ತಿಳಿಸಿದರು. 

ಸಭೆಯಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ ಮುನೀಶ್ ಮೌದ್ಗೀಲ್, ಡಿಸಿಎಂ ಕಾರ್ಯದರ್ಶಿ, ಬಿಎಂಆರ್‌ಡಿಎ ಆಯುಕ್ತ ರಾಜೇಂದ್ರ ಚೋಳನ್ ಇದ್ದರು.

ಕನಕಪುರ, ರಾಮನಗರ, ಚನ್ನಪಟ್ಟಣ. ಮಾಗಡಿ ಯಾವುದನ್ನೂ ಬೆಂಗಳೂರಿಗೆ ಸೇರಿಸುವುದಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. 

click me!