ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳಿಗೆ ಕನ್ನಡ ನಾಮಫಲಕ ಖಡ್ಡಾಯಕ್ಕೆ ಸೂಚನೆ

Published : Jan 30, 2024, 08:13 PM IST
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳಿಗೆ ಕನ್ನಡ ನಾಮಫಲಕ ಖಡ್ಡಾಯಕ್ಕೆ ಸೂಚನೆ

ಸಾರಾಂಶ

 ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ತ್ವರಿತಗತಿಯಲ್ಲಿ ಕನ್ನಡ ಅಳವಡಿಸಲು ಮುಖ್ಯ ಆಯುಕ್ತರಿಂದ ಅಧಿಕಾರಿಗಳಿಗೆ ಸೂಚನೆ 

ಬೆಂಗಳೂರು (ಜ.30): ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಅಳವಡಿಸುವ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ತ್ವರಿತಗತಿಯಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬಿಬಿಎಂಪಿ ಚೀಫ್ ಕಮಿಷನರ್ ತುಷಾರ್ ಗಿರಿ ನಾಥ್  ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಅಳವಡಿಕೆ ಹಾಗೂ ಸಹಾಯ 2.0ರಲ್ಲಿ ಬಂದಂತಹ ದೂರುಗಳಿಗೆ ಸಂಬಂಧಿಸಿದಂತೆ ವರ್ಚ್ಯುವಲ್ ಸಭೆಯನ್ನು ನಡೆಸಿದ ತುಷಾರ್ ಗಿರಿನಾಥ್, ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 49,241 ಮಳಿಗೆಗಳಿಗೆ ನೋಟಿಸ್ ನೀಡಲಾಗಿದ್ದು, 16813 ಮಳಿಗೆಗಳು ಶೇ. 60 ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲಾಗಿದ್ದು, 32428 ಮಳಿಗೆಗಳಲ್ಲಿ ನಾಮಫಲಕಗಳನ್ನು ಅಳವಡಿಸಬೇಕಿದೆ. ಪೆಬ್ರವರಿ ಅಂತ್ಯದೊಳಗಾಗಿ ಎಲ್ಲಾ ಮಳಿಗೆಗಳಲ್ಲಿ ಕನ್ನಡ ನಾಮಫಲಕವನ್ನು ಅಳವಡಿಸಿಕೊಂಡಿರಬೇಕು. ಅದಕ್ಕಾಗಿ ಆಯಾ ವಲಯಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ನಗರದ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳಲ್ಲಿ ಆದ್ಯತೆ ಮೇರೆಗೆ ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು. ಮಳಿಗೆಗಳಿಗೆ ತಿಳುವಳಿಕೆ ಪತ್ರ ನೀಡಿದ ಬಳಿಕ 7 ದಿನ ಕಾಲಾವಕಾಶ ನೀಡಿದ ಬಳಿಕವೂ ಕನ್ನಡ ನಾಮಫಲಕ‌ ಅಳವಡಿಸದಿದ್ದಲ್ಲಿ ಅಂತಹ ಮಳಿಗೆಯ ಮೇಲೆ ಶಿಸ್ತು ಕ್ರಮ ಜರುಗಿಸಿ ಕೂಡಲೆ ನಾಮಫಲಕ ಅಳವಡಿಸುವಂತೆ ಮಾಡಬೇಕೆಂದು ಆದೇಶಿಸಿದ್ದಾರೆ. 

ಸಹಾಯ 2.0ರಲ್ಲಿ ಬರುವ ದೂರುಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಿ: 
ಪಾಲಿಕೆಯ ಸಹಾಯ 2.0ರಲ್ಲಿ ಬರುವ ದೂರುಗಳನ್ನು ನಿಗದಿತ ಸಮಯದಲ್ಲಿ ಇತ್ಯರ್ಥಪಡಿಸಬೇಕು. ದೂರುಗಳು ಬಂದ ತಕ್ಷಣ ಬಗೆಹರಿಸಬಹುದಾದ ಸಮಸ್ಯೆಗಳನ್ನು ಕೂಡಲೆ ಬಗೆಹರಿಸಬೇಕೆಂದು ವಲಯ ಆಯುಕ್ತರಿಗೆ ಸೂಚನೆ ನೀಡಿದ್ದು, 

ಆಯಾ ವಲಯ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಕಸದ ಸಮಸ್ಯೆ, ಬೀದಿ ದೀಪಗಳ ಅಳವಡಿಕೆ ಹಾಗೂ ರಸ್ತೆ ಗುಂಡಿ ಸಮಸ್ಯೆಗಳ ಕುರಿತು ದೂರುಗಳು ಬರುತ್ತವೆ. ಬರುವಂತಹ ದೂರುಗಳನ್ನು ಆದ್ಯತೆ ಮೇರೆಗೆ ತ್ವರಿತಗತಿಯಲ್ಲಿ ಇತ್ಯರ್ಥಪಡಿಸಬೇಕೆಂದು ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಕಂದಾಯ ವಿಭಾಗದ ಜಂಟಿ ಆಯುಕ್ತರಾದ ಲಕ್ಷ್ಮಿದೇವಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

PREV
Read more Articles on
click me!

Recommended Stories

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ರೆನಾಲ್ಟ್ ಡಸ್ಟರ್ ಕಾರು!
ಕೇಂದ್ರ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ: ಸಂಸದ ಯದುವೀರ್