ಬೆಂಗಳೂರಲ್ಲಿ ಸೋಂಕಿನ ನಿಯಂತ್ರಣಕ್ಕೆ 2 ಸಾವಿರ ಗೃಹ ರಕ್ಷಕ ಸಿಬ್ಬಂದಿಗೆ BBMP ಮನವಿ

By Kannadaprabha News  |  First Published Jul 21, 2020, 7:41 AM IST

ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕಿನ ನಿಯಂತ್ರಣ ಹಾಗೂ ಸರ್ಕಾರ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲನೆಗೆ 2 ಸಾವಿರ ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ನೀಡುವಂತೆ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಮನವಿ ಮಾಡಿದ್ದಾರೆ.


ಬೆಂಗಳೂರು(ಜು.21): ನಗರದಲ್ಲಿ ಕೊರೋನಾ ಸೋಂಕಿನ ನಿಯಂತ್ರಣ ಹಾಗೂ ಸರ್ಕಾರ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲನೆಗೆ 2 ಸಾವಿರ ಗೃಹÜ ರಕ್ಷಕ ದಳದ ಸಿಬ್ಬಂದಿಯನ್ನು ನೀಡುವಂತೆ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಮನವಿ ಮಾಡಿದ್ದಾರೆ.

ಈ ಕುರಿತು ಪೊಲೀಸ್‌ ಮಹಾ ನಿರ್ದೇಶಕರು ಹಾಗೂ ಕಮಾಂಡೆಂಟ್‌ ಜನರಲ್‌ ಗೃಹರಕ್ಷಕ ದಳ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ನಗರದಲ್ಲಿ ರಾರ‍ಯಪಿಡ್‌ ಆ್ಯಂಟಿಜನ್‌ ಸೋಂಕು ಪರೀಕ್ಷೆಗೆ ನೂರು ಮೊಬೈಲ್‌ ವಾಹನಗಳನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದೆ.

Tap to resize

Latest Videos

ಆಸ್ಪತ್ರೆಗಳ ಅಮಾನವೀಯತೆಗೆ ಮಗು ಬಲಿ! ಪ್ರಪಂಚ ನೋಡುವ ಮುನ್ನ ಕಣ್ಮುಚ್ಚಿತು ಪುಟ್ಟ ಹಸುಗೂಸು

ಈ ವಾಹನಗಳಿಗೆ ತಲಾ ಇಬ್ಬರು ಸಿಬ್ಬಂದಿಯಂತೆ ಒಟ್ಟು 200 ಸಿಬ್ಬಂದಿಯ ಅವಶ್ಯಕತೆ ಇದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸೋಂಕು ಪರೀಕ್ಷಾ ಕೇಂದ್ರಗಳು ಸೇರಿದಂತೆ ವಿವಿಧೆಡೆ ರಕ್ಷಣಾ ಸಿಬ್ಬಂದಿ ಕೊರತೆ ಇದೆ. ಹಾಗಾಗಿ, 2 ಸಾವಿರ ಗೃಹ ರಕ್ಷಕ ದಳದ ಸಿಬ್ಬಂದಿ ನಿಯೋಜಿಸುವಂತೆ ಮನವಿ ಮಾಡಿದ್ದಾರೆ. 720ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಗೆ ಸೋಂಕು ದೃಢಪಟ್ಟಿರುವುದರಿಂದ ಸಿಬ್ಬಂದಿ ಕೊರತೆಯಾಗಿದೆ ಎಂದಿದ್ದಾರೆ.

click me!