ಬೆಂಗಳೂರು 43 ರಸ್ತೆಗಳಲ್ಲಿ ಬಿಬಿಎಂಪಿ ವೈಟ್ ಟಾಪಿಂಗ್ ಕಾಮಗಾರಿ ಆರಂಭ; ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

By Sathish Kumar KH  |  First Published Jul 2, 2024, 6:25 PM IST

ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 15 ಪ್ಯಾಕೇಜುಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಭೂಮಿ ಪೂಜೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯ ಆಯುಕ್ತ ತುಷರ್ ಗಿರಿನಾಥ್ ಸೂಚನೆ ನೀಡಿದರು.


ಬೆಂಗಳೂರು (ಜು.02): ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪುನಃ 15 ಪ್ಯಾಕೇಜುಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಕಾಮಗಾರಿ ಭೂಮಿ ಪೂಜೆಗಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯ ಆಯುಕ್ತ ತುಷರ್ ಗಿರಿನಾಥ್ ಸೂಚನೆ ನೀಡಿದರು.

ನಗರದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಅನುಷ್ಠಾನಗೊಳಿಸುವ ಸಂಬಂಧ ಬಿ.ಎಸ್.ಡಬ್ಲ್ಯೂ.ಎಂ.ಎಲ್ ಕಛೇರಿಯಲ್ಲಿ ನಡೆದ ಅಂತರ್ ಇಲಾಖೆ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವೈಟ್ ಟಾಪಿಂಗ್ ಕಾಮಗಾರಿಯನ್ನು 15 ಪ್ಯಾಕೇಜ್‌ಗಳಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಪೈಕಿ 13 ಪ್ಯಾಕೇಜ್‌ಗಳು ಈಗಾಗಲೇ ಅಂತಿಮಗೊಂಡಿದ್ದು, ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದೆ. ಇನ್ನೆರಡು ಪ್ಯಾಕೇಜ್‌ಗಳು ಸರ್ಕಾರದ ಹಂತದಲ್ಲಿದ್ದು, ಶೀಘ್ರ ಭೂಮಿ ಪೂಜೆ ನೆರವೇರಿಸಲು ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧೀನ ಅಧಿಕಾರಿಗಳಿಗೆ ತಿಳಿಸಿದರು.

Tap to resize

Latest Videos

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನನ್ನ ಹೆಂಡ್ತಿಗೆ ಕಾನೂನುಬದ್ಧವಾಗಿ ಸೈಟು ಕೊಟ್ಟಿದೆ; ಸಿಎಂ ಸಿದ್ದರಾಮಯ್ಯ

ನಗರದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಸಂಬಂಧ ಜಲಂಡಳಿಯ ನೀರಿನ ಹಾಗೂ ಒಳಚರಂಡಿ ಕೊಳವೆ, ಬೆಸ್ಕಾಂ ಹಾಗೂ ಕೆ.ಪಿ.ಟಿ.ಸಿ.ಎಲ್ ಸಂಸ್ಥೆಯ ಕೇಬಲ್‌ಗಳು, ಗೇಲ್ ಗ್ಯಾಸ್ ಪೈಪ್ ಲೈನ್ ಗಳ ಬದಲವಾಣೆ ಸೇರಿದಂತೆ ಇನ್ನಿತರೆ ಇಲಾಖೆಗಳು ಸ್ಥಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು. ಯಾವುದೇ ಇಲಾಖೆಯಾಗಲಿ ಈಗಲೇ ಸಮೀಕ್ಷೆ ನಡೆಸಿಕೊಂಡು ವೈಟ್ ಟಾಪಿಂಗ್ ಕಾಮಗಾರಿ ನಡೆಸುವ ವೇಳೆ ಏನಾದರು ಬದಲಾವಣೆಗಳಿದ್ದಲ್ಲಿ ಮಾಡಿಕೊಳ್ಳಬೇಕು. ಜಲಮಂಡಳಿಯಿಂದ ರಸ್ತೆಯ ಮೂಲಕ ಕೊಳವೆ ಅಳವಡಿಸದೆ ಎರಡೂ ಬದಿ ಕೊಳವೆಗಳನ್ನು ಅಳವಡಿಸಿಕೊಳ್ಳಬೇಕು. ಕಾಮಗಾರಿ ಪೂರ್ಣಗೊಂಡ ಬಳಿಕ ಯಾವುದೇ ಕಾರಣಕ್ಕೂ ರಸ್ತೆ ಕತ್ತರಿಸಲು ಅನುಮತಿ ನೀಡುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು.

ನಗರದಲ್ಲಿ ಎಲ್ಲೆಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯಲಿದೆಯೇ ಆ ಪಟ್ಟಿಯನ್ನು ಈಗಾಗಲೇ ಎಲ್ಲಾ ಇಲಾಖೆಗಳಿಗೆ ನೀಡಲಾಗಿದೆ. ಅದರ ಪ್ರಕಾರ ಈಗಾಗಲೇ ಜಂಟಿ ಪರಿಶೀಲನೆ ನಡೆಸಲಾಗಿದ್ದು, ಅಂತಿಮ ಹಂತದ ಸಿದ್ದತೆಗಳನ್ನು ಮಾಡಿಕೊಂಡು ಕಾಮಗಾರಿಯನ್ನು ಪ್ರಾರಂಭಿಸಬೇಕು. ನಗರದಲ್ಲಿ ಸುಮಾರು 150 ಕಿ.ಮೀ ಉದ್ದದ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಸಂಬಂಧ ಸಂಚಾರಿ ಪೊಲೀಸ್ ಅಧಿಕಾರಿಗಳು ಕಾಮಗಾರಿ ನಡೆಯುವ ಪ್ರದೇಶದಲ್ಲಿ ಪರ್ಯಾಯ ರಸ್ತೆ ಗುರುರಿತಿಸಿ ಕೊಡಬೇಕೆಂದು ಮನವಿ ಮಾಡಿದರು. ಜೊತೆಗೆ ಕಾಮಗಾರಿಯನ್ನು ಹಗಲು-ರಾತ್ರಿ ನಡೆಸಿ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು. 

ಜವಾಹರಲಾಲ್ ನೆಹರೂ ತನ್ನನ್ನು ಕತ್ತೆ ಎನ್ನಿ, ಆದ್ರೆ ಹಿಂದೂ ಎನ್ನಬೇಡಿ ಎಂದಿದ್ದರು; ಸಿ.ಟಿ. ರವಿ

ಯುಟಿಲಿಟಿಗೆ ಸಮಗ್ರ ವ್ಯವಸ್ಥೆ:
ವೈಟ್ ಟಾಪಿಂಗ್ ಕಾಮಗಾರಿ ನಡೆಸುವ ರಸ್ತೆಗಳ ಎರಡೂ ಬದಿ ಪಾದಚಾರಿ ಮಾರ್ಗದಲ್ಲಿ ಯುಟಿಲಿಟಿಗಾಗಿ ಡಕ್ಟ್ಸ್ ಗಳ ಅಳವಡಿಕೆಗೆ ಸಮಗ್ರ ವ್ಯವಸ್ಥೆ ಮಾಡಿಕೊಳ್ಳಬೇಕು. ಈ ಸಂಬಂಧ ಆಯಾ ಸಂಬಂಧಪಟ್ಟ ಇಲಾಖೆಗಳ ಜೊತೆ ಸಮನ್ವಯ ಸಾಧಿಸಿಕೊಂಡು ಕಾರ್ಯನಿರ್ವಹಿಸಬೇಕು. ಇನ್ನು ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳುವ ಕಡೆ ಸಂಚಾರ ಪೊಲೀಸ್ ವಿಭಾಗದ ಜೊತೆ ಸಮನ್ವಯ ಸಾಧಿಸಿ ಮಾರ್ಗ ಬದಲಾವಣೆ ಮಾಡಿಕೊಂಡು ಕಾಲಮಿತಿಯೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಕಾಮಗಾರಿಯ ವೇಳೆ ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಹಂತ-ಹಂತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

 

click me!