Bengaluru: ರೇಬೀಸ್ ರೋಗ ತಡೆಗಟ್ಟಲು ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಮೀಕ್ಷೆ

By Gowthami K  |  First Published Jul 10, 2023, 6:56 PM IST

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಶುಪಾಲನಾ  ಜುಲೈ 11ರಿಂದ  ನಾಯಿಗಳ ಸಮೀಕ್ಷೆಯ ಕಾರ್ಯ ಪ್ರಾರಂಭಿಸಲಾಗುತ್ತಿದೆ.


ಬೆಂಗಳೂರು (ಜು.10): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಶುಪಾಲನಾ  ಜುಲೈ 11ರಿಂದ  ನಾಯಿಗಳ ಸಮೀಕ್ಷೆಯ ಕಾರ್ಯ ಪ್ರಾರಂಭಿಸಲಾಗುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣ ಹಾಗೂ ಪ್ರಾಣಿಜನ್ಯ ರೋಗವಾದ ರೇಬೀಸ್ ರೋಗವನ್ನು ತಡೆಗಟ್ಟಲು ಬೀದಿ ನಾಯಿಗಳಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಮತ್ತು ಆಂಟಿರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಪಾಲಿಕೆಯ ಪಶುಪಾಲನಾ ವಿಭಾಗದಿಂದ ಕೈಗೊಳ್ಳಲಾಗುತ್ತಿದೆ. ಈ ಪೈಕಿ 2019ನೇ ಸಾಲಿನಲ್ಲಿ ಬೀದಿ ನಾಯಿಗಳ ಸಮೀಕ್ಷೆಯನ್ನು ಮಾಡಿದ್ದು, 3.10 ಲಕ್ಷ ಬೀದಿ ನಾಯಿಗಳು ಇರುವುದಾಗಿ ಅಂದಾಜಿಸಲಾಗಿರುತ್ತದೆ. 

ಮುಂದುವರಿದು, ಪಾಲಿಕೆಯ 08 ವಲಯಗಳಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಮತ್ತು ಆಂಟಿರೇಬೀಸ್ ಲಸಿಕಾ ಕಾರ್ಯಕ್ರಮವನ್ನು 2019ನೇ ಸಾಲಿನಿಂದ ಇಲ್ಲಿಯವರೆಗೆ ನಿರಂತರವಾಗಿ ನಡೆಯುತ್ತಿದ್ದು, ಕಾರ್ಯಕ್ರಮದ ಯಶಸ್ವಿ ಅನುಷ್ಟಾನದ ಬಗ್ಗೆ ತಿಳಿಯುವ ಸಲುವಾಗಿ ಬೀದಿನಾಯಿಗಳ ಸಮೀಕ್ಷೆಯ ಕಾರ್ಯ ಪ್ರಾರಂಭಿಸಲಾಗುತ್ತಿದೆ.

Tap to resize

Latest Videos

undefined

Udupi: 11ನೇ ಫ್ಲೋರ್ ಮನೆಯ ಬಾಲ್ಕನಿಯಿಂದ ಜಾರಿದ ಮಗು, ಅಗ್ನಿಶಾಮಕ ದಳದ ರೋಚಕ

ಬೀದಿನಾಯಿಗಳ ಸಮೀಕ್ಷೆಯು ಡಾ.ಕೆ.ಪಿ.ಸುರೇಶ್, ಪ್ರಧಾನ ವಿಜ್ಞಾನಿಗಳು(Biostatistics), ICAR-NIVEDI, ಡಾ.ಹೇಮಾದ್ರಿ ದಿವಾಕರ್, ಪ್ರಧಾನ ವಿಜ್ಞಾನಿಗಳು(Virology),ICAR-NIVEDI, ಡಾ.ಶ್ರೀಕೃಷ್ಣ ಇಸ್ಲೂರು, ಪ್ರಾಧ್ಯಾಪಕರು, ಸೂಕ್ಷ್ಮಾಣುಜೀವಿ ಶಾಸ್ತ್ರ ವಿಭಾಗ, ವೆಟರಿನರಿ ಕಾಲೇಜು, ಬೆಂಗಳೂರು, ಡಾ.ಬಾಲಾಜಿ ಚಂದ್ರಶೇಖರ್, ಮ್ಯಾನೇಜರ್ ಆಪರೇಷನ್, WVS ಸಂಸ್ಥೆ ಮತ್ತು ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆ, ಬೆಂಗಳೂರು ನಗರ ಜಿಲ್ಲೆಯ ಅರೆತಾಂತ್ರಿಕ ಸಿಬ್ಬಂದಿಯ ಸಹಯೋಗದೊಂದಿಗೆ ನಡೆಯಲಿದೆ.
 
840 ಚ.ಕಿ.ಮೀ ವ್ಯಾಪ್ತಿಯುಳ್ಳ ಬಿಬಿಎಂಪಿಯನ್ನು(ವಸತಿ ಪ್ರದೇಶ, ಕೊಳಚೆ ಪ್ರದೇಶ, ವಾಣಿಜ್ಯ ಪ್ರದೇಶ ಹಾಗೂ ಕೆರೆಗಳು) 0.5 ಚ.ಕಿ.ಮೀ ವ್ಯಾಪ್ತಿಯ 6,850 ಮೈಕ್ರೋ ಜೋನ್ ಗಳನ್ನಾಗಿ ವಿಂಗಡಿಸಲಾಗಿದ್ದು, ಅದರಲ್ಲಿ ಶೇ. 20ರಷ್ಟು ರ‍್ಯಾಂಡಂ ಸ್ಯಾಂಪಲ್‌ಗಳನ್ನು ಅಂದರೆ 1,360 ಮೈಕ್ರೋ ಜೋನ್ ಗಳಲ್ಲಿ ಸಮೀಕ್ಷೆ ಮಾಡಲು ಆಯ್ಕೆ ಮಾಡಲಾಗಿರುತ್ತದೆ. ಅದರಂತೆ, ಬೆಂಗಳೂರು ನಗರ ಜಿಲ್ಲೆಯ ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆಯ 70 ಅರೆತಾಂತ್ರಿಕ ಸಿಬ್ಬಂದಿ ಹಾಗೂ ಪಾಲಿಕೆಯ ಪಶುಪಾಲನಾ ವಿಭಾಗದ 30 ಸಿಬ್ಬಂದಿ ಸೇರಿದಂತೆ 100 ಮಂದಿಯ ಮೂಲಕ ಈ ಸಮೀಕ್ಷೆಯನ್ನು ಮಾಡಲಾಗುತ್ತಿದೆ. ಬೀದಿ ನಾಯಿ ಸಮೀಕ್ಷೆಯನ್ನು ಕ್ರಮಬದ್ಧವಾಗಿ ವ್ಯವಸ್ಥಿತವಾಗಿ ವಾರ್ಡ್ವಾರು ನಿರ್ವಹಿಸಲು 1 ತಂಡದಲ್ಲಿ ಇಬ್ಬರು ಸಮೀಕ್ಷಾದಾರರಂತೆ ಒಟ್ಟು 50 ತಂಡಗಳನ್ನು ರಚಿಸಲಾಗಿದ್ದು, ಇದರ ಮೇಲ್ವಿಚಾರಣೆಗಾಗಿ 15 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ.

ಪುನೀತ್ ರಾಜ್ ಕುಮಾರ್ ಪೋಟೊ ತೆಗೆಸಿದ್ದೆ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಗೆ

ಬೀದಿ ನಾಯಿಗಳ ಸಮೀಕ್ಷೆಯು ಒಟ್ಟು 14 ದಿನಗಳಲ್ಲಿ ಕೈಗೊಳ್ಳಲಾಗುತ್ತಿದ್ದು, ಸದರಿ ಸಮೀಕ್ಷೆಯು ಪ್ರತಿನಿತ್ಯ ಬೆಳಗ್ಗೆ 06.00 ರಿಂದ ಬೆಳಗ್ಗೆ 08.30 ಗಂಟೆಯೊಳಗೆ ನಡೆಯಲಿದೆ. ಮೈಕ್ರೋಜೋನ್‌ನಲ್ಲಿ ಕಂಡು ಬರುವ ಬೀದಿ ನಾಯಿಗಳ ಭಾವಚಿತ್ರದೊಂದಿಗೆ ಪ್ರತಿ ನಾಯಿಯ ಮಾಹಿತಿಯನ್ನು WVS ಡೇಟಾ ಕಲೆಕ್ಷನ್ ಆ್ಯಪ್‌ನಲ್ಲಿ ನಮೂದಿಸಬೇಕು. ಆ್ಯಪ್‌ನಲ್ಲಿ ದಾಖಲಾದ ಮಾಹಿತಿಯನ್ನು ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರ ವೀಕ್ಷಿಸಬಹುದಾಗಿದ್ದು, ಸಾರ್ವಜನಿಕರ ವೀಕ್ಷಣೆಗೆ ಅವಕಾಶವಿರುವುದಿಲ್ಲ. ಒಟ್ಟು 14ದಿನಗಳ ಸಮೀಕ್ಷೆಯ ನಂತರ ಡಾ.ಕೆ.ಪಿ.ಸುರೇಶ್, ಪ್ರಧಾನ ವಿಜ್ಞಾನಿಗಳು (Biostatistics), ICAR-NIVEDI, ರವರು ಮಾಹಿತಿಯನ್ನು ಕ್ರೋಢೀಕರಿಸಿ ಪಾಲಿಕೆಗೆ ವರದಿ ನೀಡಲಿದ್ದಾರೆ. 

ಬೀದಿನಾಯಿಗಳ ಸಮೀಕ್ಷೆಯ ಪ್ರಮುಖ ಉದ್ದೇಶ:
• ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಒಟ್ಟು ಬೀದಿನಾಯಿಗಳ ಸಂಖ್ಯೆ(ಹೆಣ್ಣು-ಗಂಡು ನಾಯಿಗಳ ಸಂಖ್ಯೆ) ಲಭ್ಯವಾಗಲಿದೆ.
• ಸಂತಾನಹರಣ ಶಸ್ತ್ರ ಚಿಕಿತ್ಸೆಗೆ ಒಳಪಟ್ಟಿರುವ ಶೇಕಡವಾರು ಬೀದಿನಾಯಿಗಳ ಸಂಖ್ಯೆ(ಹೆಣ್ಣು-ಗಂಡು ನಾಯಿಗಳ ಸಂಖ್ಯೆ) ಲಭ್ಯವಾಗಲಿದೆ.
• ಮಾನವ-ಬೀದಿನಾಯಿಗಳ ಅನುಪಾತ ಲಭ್ಯವಾಗಲಿದೆ.
• ವಾರ್ಡ್-ವಲಯವಾರು ಬೀದಿನಾಯಿಗಳ ಸಂಖ್ಯೆ ಲಭ್ಯವಾಗಲಿದೆ.

click me!