ಮಾಜಿ ಸಿಎಂಗೂ ಕಾಡಿದೆ ಕರಾಳ ಗ್ರಹಣ ಭೀತಿ..!

By Web DeskFirst Published Jul 18, 2018, 1:21 PM IST
Highlights

 ಇದೇ ಜುಲೈ 27 ರಂದು ಸಂಭವಿಸಲಿರುವ ಚಂದ್ರಗ್ರಹಣವು ಅತ್ಯಂತ ಕರಾಳವಾಗಿದ್ದು ಈ ಬಗ್ಗೆ ಮುನ್ನೆಚ್ಚರಿಕೆ ಕೈಗೊಳ್ಳುವುದು ಅತ್ಯವಶ್ಯಕ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು :  ಜುಲೈ 27 ರಂದು ಸಂಭವಿಸಲಿರುವ ಗ್ರಹಣ ಅತ್ಯಂತ ಕೆಟ್ಟದ್ದು ಎಂದು ಹೇಳಲಾಗುತ್ತಿದ್ದು, ಗ್ರಹಣದ ಸಮಯದಲ್ಲಿ ಯಾವುದೇ ಅವಘಡಗಳು ಸಂಭವಿಸದಿರಲಿ ಎಂದು ದೇವರಲ್ಲಿ ಪ್ರಾರ್ಥಿಸುವುದೊಂದನ್ನು ಬಿಟ್ಟು ಬೇರೆ ದಾರಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. 

ಈ ಸಮಯದಲ್ಲಿ ಯಾವುದೇ ಶುಭಕಾರ್ಯ ಮಾಡಬೇಡಿ ಎಂದು ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ತರಿಗೆ ಸೂಚನೆ ನೀಡಿದರು. 

ರಾಜ್ಯದ ಜನರೂ ಸಹ ಗ್ರಹಣದ ಬಗ್ಗೆ ಎಚ್ಚರ ವಹಿಸಬೇಕು. ಗ್ರಹಣ ಕಳೆದ ಬಳಿಕ ರಾಜ್ಯ ಪ್ರವಾಸ ಮಾಡುತ್ತೇನೆಂದು ಯಡಿಯೂರಪ್ಪ ಹೇಳಿದರು. ಅಲ್ಲದೇ ಶಿವಮೊಗ್ಗ ಜಿಲ್ಲೆಯಾದ್ಯಂತ ಪ್ರವಾಹದಿಂದ ಉಂಟಾದ ಹಾನಿಯ ಬಗ್ಗೆ ಕೂಡ ಪ್ರವಾಸ ನಡೆಸುವುದಾಗಿ ತಿಳಿಸಿದರು. 

ಲೋಕಸಭೆ ಚುನಾವಣೆಯ ಹಿನ್ನಲೆಯಲ್ಲಿ ಇದೇ ತಿಂಗಳ 28 ರ ನಂತರ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದಲ್ಲಿ 1 ದಿನದ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರಧಾನಿಯವರ ಬಹಿರಂಗ ಸಭೆಯನ್ನು ಹಾವೇರಿ ಅಥವಾ ಚಿಕ್ಕೋಡಿಯಲ್ಲಿ ಆಯೋಜಿಸುವ ಅಲೋಚನೆ ಇದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆಂದರು.

click me!