ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಿ : ಜಿಲ್ಲಾಧಿಕಾರಿ

By Kannadaprabha News  |  First Published Mar 31, 2023, 5:37 AM IST

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಮಾದರಿ ನೀತಿ ಸಂಹಿತೆ ಸಮರ್ಪಕ ಅನುಷ್ಠಾನಕ್ಕಾಗಿ ಮುಂದಿನ 45 ದಿನಗಳು ಎಲ್ಲಿಯೂ ಯಾವುದೇ ರೀತಿ ಚುನಾವಣಾ ಆಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.


  ತುಮಕೂರು :  ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಮಾದರಿ ನೀತಿ ಸಂಹಿತೆ ಸಮರ್ಪಕ ಅನುಷ್ಠಾನಕ್ಕಾಗಿ ಮುಂದಿನ 45 ದಿನಗಳು ಎಲ್ಲಿಯೂ ಯಾವುದೇ ರೀತಿ ಚುನಾವಣಾ ಆಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಮಾದರಿ ನೀತಿ ಸಂಹಿತೆಯ ಸಮರ್ಪಕ ಅನುಷ್ಠಾನಕ್ಕಾಗಿ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯದ ಸಭಾಂಗಣದಲ್ಲಿ ಇಂದು ಕರೆಯಲಾಗಿದ್ದ ಲೀಡ್‌ ಬ್ಯಾಂಕ್‌ ಮ್ಯಾನೇಜರ್‌, ಸಹಕಾರ ಸಂಘಗಳ ಉಪ ನಿಬಂಧಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮತ್ತು ಆಹಾರ ಇಲಾಖೆಯ ಜಂಟಿ ನಿರ್ದೇಶಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Tap to resize

Latest Videos

ಪಾನ್‌ ಬ್ರೋಕರ್‌ಗಳು ಮತ್ತು ಇತರೆ ಲೇವಾದೇವಿದಾರರಿಗೆ ಚುನಾವಣಾ ನೀತಿ ಸಂಹಿತೆ ಕುರಿತು ಮಾಹಿತಿ ನೀಡುವುದು. ಅವರ ದಿನನಿತ್ಯದ ವಹಿವಾಟುಗಳ ಬಗ್ಗೆ ಗಮನವಹಿಸಿ ಅಕ್ರಮ ಹಣ ವರ್ಗಾವಣೆ ಯಾಗದಂತೆ ತಡೆಯುವುದು ಎಂದು ತಿಳಿಸಿದರು.

ಪೆಟ್ರೋಲ್‌ ಬಂಕ್‌ಗಳಲ್ಲಿ ಜಮೆಯಾಗಿರುವ ಹಣ ಹಾಗೂ ಪ್ರತಿ ದಿನ ಲಭ್ಯವಿರುವ ದಾಸ್ತಾನಿನ ಮಾಹಿತಿಯನ್ನು ಪ್ರತಿ ದಿನ ಸಲ್ಲಿಸುವುದು. ಪೆಟ್ರೋಲ್‌ ಬಂಕ್‌ಗಳಲ್ಲಿ ಯಾವುದೇ ಟೋಕನ್‌ ಆಧರಿಸಿ ಪೆಟ್ರೋಲ್‌ ನೀಡುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂದು ಪೆಟ್ರೋಲ್‌ ಬಂಕ್‌ ಮಾಲೀಕರಿಗೆ ತಿಳಿಸಿ ಹೇಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿ ದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ

ಕೆ.ವಿದ್ಯಾಕುಮಾರಿ ಅವರು ಮಾತನಾಡಿ, ಸ್ತ್ರೀಶಕ್ತಿ ಅಥವಾ ಸ್ವಸಹಾಯ ಸಂಘಗಳ ಖಾತೆಗೆ ಅನಾಮಧೇಯ ವ್ಯಕ್ತಿಗಳಿಂದ ಜಮೆಯಾದ ಮೊತ್ತದ ಬಗ್ಗೆ ಮಾಹಿತಿ ನೀಡುವುದು. ಸ್ತ್ರೀಶಕ್ತಿ ಸಂಘಗಳಿಗೆ ರಾಜಕೀಯ ವ್ಯಕ್ತಿಗಳಿಂದ ತಮ್ಮ ಖಾತೆಗಳಿಗೆ ಹಣ ಜಮೆ ಮಾಡುವುದು ಚುನಾವಣಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ತಿಳುವಳಿಕೆ ನೀಡುವುದು. ಎಟಿಎಂಗಳಿಗೆ ಹಣ ವರ್ಗಾವಣೆಗೆ ಸಂಬಂಧಿಸಿದಂತೆ (ಏಇಇಒ ಂPP) ಉಪಯೋಗಿಸುವುದು ಎಂದು ತಿಳಿಸಿದರು.

ನ್ಯಾಯಬೆಲೆ ಅಂಗಡಿಗಳಲ್ಲಿ ಪಕ್ಷಗಳಿಂದ ಅಥವಾ ಅಭ್ಯರ್ಥಿಗಳಿಂದ ಉಚಿತವಾಗಿ ಯಾವುದೇ ವಸ್ತುಗಳು ವಿತರಣೆಯಾಗದಂತೆ ನೋಡಿಕೊಳ್ಳತಕ್ಕದ್ದು. ಸರ್ಕಾರದಿಂದ ವಿತರಣೆಯಾಗುವ ವಸ್ತುಗಳಲ್ಲಿ ಯಾವುದೇ ರಾಜಕೀಯ ವ್ಯಕ್ತಿಗಳ ಭಾವಚಿತ್ರ ಇರದ ಹಾಗೆ ನೋಡಿಕೊಳ್ಳುವುದು. ನ್ಯಾಯಬೆಲೆ ಅಂಗಡಿಗಳಲ್ಲಿ ಸಂಗ್ರಹಿಸುವ ಹಣ ವಿಪರೀತ ಹೆಚ್ಚಾದಲ್ಲಿ ಅಥವಾ ಕಡಿಮೆಯಾದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮಾಹಿತಿ ನೀಡುವಂತೆ ಸೂಚಿಸಿದರು.

ಅಭ್ಯರ್ಥಿಗಳಿಗೆ ಸಂಬಂಧಿಸಿದ ಹಾಗೆ ಅವರ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತ ಖರ್ಚು ಆದಲ್ಲಿ, . 10 ಲಕ್ಷಕ್ಕಿಂತ ಹೆಚ್ಚಿನ ಮೊತ್ತದ ವಹಿವಾಟುಗಳು ನಡೆದಲ್ಲಿ ಅದನ್ನು ಚುನಾವಣಾಧಿಕಾರಿಗಳ ಗಮನಕ್ಕೆ ತರುವಂತೆ ಬ್ಯಾಂಕ​ರ್‍ಸ್ಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪಕ್ಷಗಳ ಬಲಾಬಲ

ಬೆಂಗಳೂರು (ಮಾ.29): ರಾಜ್ಯವೇ ಎದುರು ನೋಡುತ್ತಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ- 2023ರ ದಿನಾಂಕ ಘೋಷಣೆಯಾಗಿದೆ. ಮೇ 10 ಚುನಾವಣೆಗೆ ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ಮಾಡುವ ಮೂಲಕ ಫಲಿತಾಂಶ ಪ್ರಕಟವಾಗಲಿದೆ. ಆದರೆ, 2018ರಲ್ಲಿ ಯಾವ ಪಕ್ಷಗಳ ಬಲಾಬಲ ಎಷ್ಟಿತ್ತು ಇಲ್ಲಿದೆ ನೋಡಿ ಮಾಹಿತಿ.

ಕೇಂದ್ರ ಚುನಾವಣಾ ಆಯೋಗದಿಂದ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುವ ಮೂಲಕ ರಾಜಕೀಯ ಪಕ್ಷಗಳ ಚುನಾವಣಾ ಅಖಾಡ ಗರಿಗೆದರಿದೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಮೈಕೊಡವಿಕೊಂಡು ಸ್ಪರ್ಧೆಗೆ ಸಿದ್ಧವಾಗುತ್ತಿವೆ. ಆದರೆ, ಕಳೆದ ಚುನಾವಣೆಯಲ್ಲಿ 2018ರಲ್ಲಿ ರಾಜ್ಯದಲ್ಲಿ ಇದ್ದ ವಿಧಾನಸಭಾ ಬಲಾಬಲ ಎಂಬುದರ ಬಗ್ಗೆ ಒಮ್ಮೆ ಮೆಲುಕು ಹಾಕೋಣ, ಯಾವ ಪಕ್ಷದಿಂದ ಎಷ್ಟು ಜನ ಮಸದಸ್ಯರಿದ್ದಾರೆ ಎಂಬ ಮಾಹಿತಿ ಇಲ್ಲಿದೆ ನೋಡಿ. 

ಪ್ರಸ್ತುತ ರಾಜ್ಯದಲ್ಲಿ ಪಕ್ಷಗಳ ಬಲಾಬಲ:  ರಾಜ್ಯದಲ್ಲಿ ಒಟ್ಟು 224 ವಿಧಾನಸಭಾ ಕ್ಷೇತ್ರಗಳಿವೆ. ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿಯನ್ನು ಹಿಡಿಯಲು 113 ಶಾಸಕರ ಬೆಂಬಲ ಬೇಕಾಗುತ್ತದೆ. ಇನ್ನು ಪ್ರಸ್ತುತ ರಾಜ್ಯದಲ್ಲಿ ಪಕ್ಷಗಳವಾರು ಶಾಸಕರ ಸಂಕ್ಯಾಬಲವನ್ನು ನೋಡಿದರೆ, ಅಧಿಕಾರದಲ್ಲಿರುವ ಬಿಜೆಪಿ 118 ಸ್ಥಾನಗಳನ್ನು ಹೊಂದಿದೆ. ವಿರೋಧ ಪಕ್ಷವಾಗಿರುವ ಕಾಂಗ್ರೆಸ್ 69, ಪರಾಜ್ಯದ ಪ್ರಭಲ ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ 32 ಹಾಗೂ ಬಹುಜನ ಸಮಾಜ ಪಕ್ಷ (ಬಿಎಸ್ಪಿ) 1 (ಈಗ ಬಿಜೆಪಿ ಸೇರ್ಪಡೆ) ಹಾಗೂ ಪಕ್ಷೇತರರು 2 ಶಾಸಕರಾಗಿದ್ದಾರೆ. ಉಳಿದಂತೆ 2 ಸ್ಥಾನಗಳು ತೆರವಾಗಿವೆ.

ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ, 13ಕ್ಕೆ ಮತ ಎಣಿಕೆ: ಚುನಾವಣಾ ಆಯೋಗ ಘೋಷಣೆ

2018ರಲ್ಲಿ ನಡೆದ ಚುನಾವಣಾ ಫಲಿತಾಂಶ: 2018 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಗಳಿಗೂ ಬಹುಮತ ಸಿಕ್ಕಿರಲಿಲ್ಲ. ಬಿಜೆಪಿ ಏಕಮಾತ್ರ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿತ್ತು. ಮೇ 12, 2018ರಲ್ಲಿ ಒಟ್ಟು 222 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಎರಡು ಕ್ಷೇತ್ರಗಳಾ ದ ರಾಜರಾಜೇಶ್ವರಿ ನಗರ ಹಾಗೂ ಜಯನಗರ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿತ್ತು. ಮತ ಚೀಟಿ ಅಕ್ರಮ ಆರೋಪ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ಹಾಗೂ ಬಿಜೆಪಿ ಅಭ್ಯರ್ಥಿ ವಿಜಯಕುಮಾರ್ ನಿಧನದಿಂದ ಜಯನಗರ ಕ್ಷೇತ್ರದ ಚುನಾವಣೆ ಮೇ 28 ರಂದು ನಡೆದಿತ್ತು.

click me!