ಬೇಡ್ತಿ-ವರದಾ ನದಿ ಜೋಡಣೆ ಯೋಜನೆ: ನೀರು ಶೇಖರಣಾ ಘಟಕ ಎಲ್ಲಿ? ಭೂಸ್ವಾಧೀನ ಪ್ರಕ್ರಿಯೆ

Published : Nov 18, 2026, 08:59 AM IST
Bedti Varada River Link

ಸಾರಾಂಶ

ಬೇಡ್ತಿ-ವರದಾ ನದಿ ಜೋಡಣೆ ಯೋಜನೆ: ಯೋಜನೆಯ ಸಮೀಕ್ಷೆ ಮತ್ತು ತನಿಖಾ ಕಾರ್ಯಗಳಿಗಾಗಿ ಅರಣ್ಯ ಇಲಾಖೆಯಿಂದ ಅಗತ್ಯವಿರುವ ಅನುಮತಿಗಳನ್ನು ಆದ್ಯತೆ ಮೇರೆಗೆ ಪಡೆಯಲು ಸಮನ್ವಯತೆಯಿಂದ ಕೆಲಸ ಮಾಡಬೇಕು . ಸಚಿವ ಚಲುವರಾಯಸ್ವಾಮಿ ಎಂದು ತಿಳಿಸಿದರು. ಯೋಜನೆಯ ವಿಳಂಬ ತಡೆಯಲು ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಲು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಬೇಡ್ತಿ-ವರದಾ (ಹಿರೇವಡ್ಡಟ್ಟಿ) ನದಿ ಜೋಡಣೆ ಯೋಜನೆಯ ಸಮೀಕ್ಷೆಗೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆಯಲ್ಲಿ ನೀರಿನ ಶೇಖರಣಾ ಘಟಕ ನಿರ್ಮಿಸಲು ಸೂಕ್ತ ಸ್ಥಳ ಶೀಘ್ರದಲ್ಲಿ ಗುರುತಿಸುವಂತೆ ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.

ಬೇಡ್ತಿ-ವರದಾ (ಹಿರೇವಡ್ಡಟ್ಟಿ) ನದಿ ಜೋಡಣೆ ಯೋಜನೆ ಅನುಷ್ಠಾನ

ಕೃಷ್ಣಾ ಭಾಗ್ಯ ಜಲ ನಿಗಮದ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಕೇಂದ್ರ ಜಲಶಕ್ತಿ ಸಚಿವಾಲಯದ ಅಧಿಕಾರಿಗಳು, ರಾಜ್ಯ ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಎನ್‌. ಚಲುವರಾಯಸ್ವಾಮಿ, ಬೇಡ್ತಿ-ವರದಾ (ಹಿರೇವಡ್ಡಟ್ಟಿ) ನದಿ ಜೋಡಣೆ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಕ್ರಮಗಳನ್ನು ಶೀಘ್ರದಲ್ಲಿ ಕೈಗೊಳ್ಳುವಂತೆ ನಿರ್ದೇಶಿಸಿದರು.

ಸಮನ್ವಯತೆಯಿಂದ ಕೆಲಸ ಮಾಡಲು ಸೂಚನೆ

ಯೋಜನೆಯ ಮಾರ್ಗಮಧ್ಯೆ ಹಾವೇರಿ ಜಿಲ್ಲೆಯಲ್ಲಿ ನೀರಿನ ಶೇಖರಣಾ ಘಟಕ ನಿರ್ಮಿಸಲು ಸೂಕ್ತ ಸ್ಥಳವನ್ನು ಶೀಘ್ರದಲ್ಲಿ ಗುರುತಿಸಬೇಕು. ಜತೆಗೆ ನೀರಾವರಿ ಅಚ್ಚುಕಟ್ಟು ಪ್ರದೇಶವನ್ನು ತ್ವರಿತವಾಗಿ ನಿಗದಿಪಡಿಸಬೇಕು. ಹಾಗೆಯೇ, ಯೋಜನೆಯ ಸಮೀಕ್ಷೆ ಮತ್ತು ತನಿಖಾ ಕಾರ್ಯಗಳಿಗಾಗಿ ಅರಣ್ಯ ಇಲಾಖೆಯಿಂದ ಅಗತ್ಯವಿರುವ ಅನುಮತಿಗಳನ್ನು ಆದ್ಯತೆ ಮೇರೆಗೆ ಪಡೆಯಲು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಟೊಪೋಗ್ರಾಫಿಕಲ್‌ ಮತ್ತು ಜಿಯೋಲಾಜಿಕಲ್‌ ಸಮೀಕ್ಷೆಗಳು ಸಹ ಪ್ರಗತಿಯಲ್ಲಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಜಂಟಿಯಾಗಿ ಕಾರ್ಯನಿರ್ವಹಿಸಿ ವಿಸ್ತೃತ ಯೋಜನಾ ವರದಿಯನ್ನ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆಯೂ ಹೇಳಿದರು.

ವ್ಯಾಜ್ಯ ಇತ್ಯರ್ಥವು ವಿಳಂಬ ಆದರೆ ಅಧಿಕಾರಿಗಳೇ ಹೊಣೆ

ರಾಜ್ಯ ನೀರಾವರಿ ಯೋಜನೆಗಳ ಭೂಸ್ವಾಧಿನ ಪ್ರಕ್ರಿಯೆ ವಿಳಂಬಕ್ಕೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿದ ಚಲುವರಾಯಸ್ವಾಮಿ, ಭೂಸ್ವಾಧಿನ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವ ಮತ್ತು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ನ್ಯಾಯಾಲಯದ ವ್ಯಾಜ್ಯಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಬೇಕು. ಒಂದು ವೇಳೆ ಪ್ರಕರಣ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಅಥವಾ ಮೇಲ್ಮನವಿ ಸಲ್ಲಿಸಲು ವಿಳಂಬ ಮಾಡಿದರೆ ಸಂಬಂಧಪಟ್ಟ ವಿಶೇಷ ಭೂಸ್ವಾಧೀನಾಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಚಲುವರಾಯಸ್ವಾಮಿ ತಿಳಿಸಿದರು.

PREV
Read more Articles on
click me!

Recommended Stories

Bengaluru: ಮುಸ್ಲಿಂ ಎಂಬ ಕಾರಣಕ್ಕೆ ಫ್ಲ್ಯಾಟ್ ಬಾಡಿಗೆ ನಿರಾಕರಣೆ: ಟೆಕ್ಕಿ ಪೋಸ್ಟ್
ಹಾವೇರಿಯ ಕೂಸನೂರಿನಲ್ಲಿ ಪತ್ತೆಯಾದ 12ನೇ ಶತಮಾನದ ಯಾದವರ ಆಳ್ವಿಕೆಯ ಮೂರು ರಹಸ್ಯ ದಾನ ಶಾಸನಗಳು!