ಚಿಕ್ಕಬಳ್ಳಾಪುರ (ಆ.16): ಡಿಸೆಂಬರ್ ವೇಳೆಗೆ 18 ವರ್ಷ ಮೇಲ್ಪಟ್ಟಎಲ್ಲರಿಗೂ ಕೋವಿಡ್ ಲಸಿಕೆ ಹಾಕುವ ಗುರಿ ಹೊಂದಿಲಾಗಿದೆ.
ಅದಕ್ಕಾಗಿ ರಾಜ್ಯಕ್ಕೆ ಒಂದೂವರೆ ಕೋಟಿ ಡೋಸ್ ಲಸಿಕೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಮುಂದಿನ ವಾರ ಮುಖ್ಯಮಂತ್ರಿಗಳು ಮತ್ತು ನಾನು ದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವರ ಜೊತೆ ಮಾತುಕತೆ ನಡೆಸುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
2 ಲಸಿಕೆ ಪಡೆದರೆ ಸೋಂಕು ತಗಲುವ ಸಾಧ್ಯತೆ ಅರ್ಧಕ್ಕರ್ಧ ಇಳಿಕೆ
ನಗರದಲ್ಲಿ ಭಾನುವಾರ ನಡೆದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಕೊಡುವ ನಿಟ್ಟಿನಲ್ಲಿ ವೈಜ್ಞಾನಿಕವಾಗಿ ಅನುಮೋದನೆ ಆಗಿಲ್ಲ. ಅನುಮತಿ ನಮಗಿಲ್ಲ. ಆದರೆ, ಶಾಲೆಗಳಲ್ಲಿನ ಶಿಕ್ಷಕರು, ಇನ್ನಿತರೆ ಸಿಬ್ಬಂದಿ ಲಸಿಕೆ ಹಾಕಿಕೊಂಡಿರಬೇಕೆಂದು ಸೂಚನೆ ನೀಡಲಾಗಿದೆ. 3ನೇ ಅಲೆ ಎದುರಿಸಲು ಎಲ್ಲ ರೀತಿಯ ಸಿದ್ಧತೆ ಆಗಿದೆ ಎಂದರು.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona