Belagavi; ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಅಥಣಿ ಯುವಕ

By Suvarna NewsFirst Published Sep 30, 2022, 4:39 PM IST
Highlights

ಬೆಳಗಾವಿ ಜಿಲ್ಲೆಯ ಅಥಣಿ ಯುವಕ ಮನೆಯಲ್ಲಿ ಜಾರಿಬಿದ್ದು ಮೆದುಳು ನಿಷ್ಕ್ರೀಯಗೊಂಡಿದ್ದು ಹೀಗಾಗಿ ಆತನ ಕುಟುಂಬಸ್ಥರು ಅಂಗಾಂಗ ದಾನ ಮಾಡಿ, ಯುವಕನ ಸಾವಿನಂಚಿನಲ್ಲೂ ಸಾರ್ಥಕತೆ ಮೆರೆದು, ನಾಲ್ವರ ಬಾಳಿಗೆ ಬೆಳಕಾಗಿದ್ದಾರೆ.

ಬೆಳಗಾವಿ (ಸೆ.30): ಮನೆಯಲ್ಲಿ ಜಾರಿಬಿದ್ದು ಗಂಭೀರವಾಗಿ ಗಾಯಗೊಂಡ ಯುವಕನ ಮೆದುಳು ನಿಷ್ಕ್ರೀಯಗೊಂಡಿದ್ದು ಹೀಗಾಗಿ ಆತನ ಕುಟುಂಬಸ್ಥರು ಅಂಗಾಂಗ ದಾನ ಮಾಡಿ, ಯುವಕನ ಸಾವಿನಂಚಿನಲ್ಲೂ ಸಾರ್ಥಕತೆ ಮೆರೆದು, ನಾಲ್ವರ ಬಾಳಿಗೆ ಬೆಳಕಾಗಿರುವ ಮಾದರಿ ಕಾರ್ಯ ಜರುಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಂಗಳವಾರ ದಿನಾಂಕ 27 ರಂದು ಪ್ರಶಾಂತ ವಿಠ್ಠಲ ಮಲ್ಲೆವಾಡಿ (ಪೂಜಾರಿ)ಎನ್ನುವ 30 ವರ್ಷದ ಯುವಕ ಮನೆಯಲ್ಲಿ ಶೌಚಗ್ರಹಕ್ಕೆ ಹೋಗಿ ಮರಳುವ ವೇಳೆಯಲ್ಲಿ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದು ಆತನನ್ನು‌ ಪೋಷಕರು ಅಥಣಿಯ ಅನ್ನಪೂರ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಯುವಕ ಕೋಮಾಗೆ ತಲುಪಿದ್ದ ಎಷ್ಟೇ ಚಿಕಿತ್ಸೆ ನೀಡಿದರೂ ಆತ ಚೇತರಿಸಿಕೊಳ್ಳಲಿಲ್ಲ. ಅಲ್ಲದೆ ಆತನ ಮಿದುಳು ಕೂಡ ನಿಷ್ಕ್ರಿಯಗೊಂಡಿತ್ತು. ಈ ವೇಳೆ ಯುವಕನ ಪೋಷಕರು ಈ ವಿಷಯ ತಿಳಿದು ಮಗ ಜೀವಂತವಾಗಿ ಉಳಿಯೋದಿಲ್ಲ ಎಂದು ಅರಿತು ಡಾ ಅವಿನಾಶ ನಾಯಿಕ, ರಾಜನ ಸೋಮಯ್ಯ, ಡಾ ಚೌಗಲಾ, ಅವರ ಸಲಹೆಯ ಮೇರೆಗೆ ತಮ್ಮ ಮಗನ ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದರು. ಈ ಮೂಲಕ ನಾಲ್ಕೈದು ಜನರ ಜೀವಕ್ಕೆ ಬೆಳಕು‌ ನೀಡುವ ಮೂಲಕ, ಮಗನ ಸಾವಿನಲ್ಲೂ ಪೋಷಕರು ಸಾರ್ಥಕತೆ ಮೆರೆದರು.

 

 Chikkamagaluru: ಬಸ್ ನಿರ್ವಾಹಕನ ಬೇಜವಾಬ್ದಾರಿತನಕ್ಕೆ ಯುವತಿ ಬಲಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ

ಇನ್ನು ಮೃತ ಪ್ರಶಾಂತನ ಪೋಷಕರು‌ ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡುತ್ತಿದ್ದಂತೆಯೇ ಬೆಳಗಾವಿ ಕೆ.ಎಲ್.ಇ ಆಸ್ಪತ್ರೆಯ ವೈದ್ಯರು ಪರಿಶೀಲಿಸಿ, ಪ್ರಶಾಂತನ ದೇಹದಿಂದ ಲೀವರ್, 2 ಕಿಡ್ನಿ, ಹೃದಯ, ಚರ್ಮ, ಕಣ್ಣುಗಳನ್ನು ತೆಗೆದು ಬೇರೆಯವರಿಗೆ ಹಾಕಬಹುದು ಎಂದು ವೈದ್ಯ ಡಾ ಸಂತೋಷ ಪಾಟೀಲ ಅವರು ತಿಳಿಸಿದರು.

ಅಂಗಾಂಗ ದಾನ ಮಾಡಿದ ರಕ್ಷಿತಾ ಕುಟುಂಬಕ್ಕೆ ಸಚಿವ ಭೈರತಿ ಭೇಟಿ: 8 ಲಕ್ಷದ ಪರಿಹಾರದ ಚೆಕ್ ವಿತರಣೆ

ಅದೇನೇ ಇರಲಿ ಪ್ರಶಾಂತ ವಿಠ್ಠಲ ಮಲ್ಲೆವಾಡಿ(ಪೂಜಾರಿ) ತನ್ನ ಚಿಕ್ಕ ವಯಸ್ಸಿನಲ್ಲೇ ಇಹಲೋಕ ತ್ಯಜಿಸುತ್ತಿದ್ದರೂ ಕೂಡ ಈ ಯುವಕನ ಪೋಷಕರು ಮಗನ ಸಾವಿನ ನೋವಿನಂಚಿನಲ್ಲೂ ಕೈಗೊಂಡ ಮಗನ ಅಂಗಾಂಗ ದಾನದ ನಿರ್ಧಾರ, ನಾಲ್ಕೈದು ಜನರ ಬಾಳಿಗೆ ಬೆಳಕು ನೀಡಿದ್ದು ನಿಜಕ್ಕೂ ಶ್ಲಾಘನೀಯ ನಿರ್ಧಾರವಾಗಿದೆ ಎಂದು ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

click me!