ಮಣಿಪುರದಲ್ಲಿ ಹೃದಯಾಘಾತದಿಂದ ಬೆಳಗಾವಿ ಮೂಲದ ಯೋಧ ಸಾವು

Kannadaprabha News   | Asianet News
Published : Jan 17, 2020, 01:13 PM IST
ಮಣಿಪುರದಲ್ಲಿ ಹೃದಯಾಘಾತದಿಂದ ಬೆಳಗಾವಿ ಮೂಲದ ಯೋಧ ಸಾವು

ಸಾರಾಂಶ

ಮಣಿಪುರದಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಬನೂರ ಗ್ರಾಮದ ಯೋಧ ಸಾವು| ಹೃದಯಾಘಾತದಿಂದ ಸಾವನ್ನಪ್ಪಿದ ಯೋಧ| ಆಸ್ಸಾಂ ರೈಫಲ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಧ|

ಮುನವಳ್ಳಿ(ಜ.17): ಆಸ್ಸಾಂ ರೈಫಲ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಬನೂರ ಗ್ರಾಮದ ಯೋಧರೊಬ್ಬರು ಮಣಿಪುರದಲ್ಲಿ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಮಬನೂರ ಗ್ರಾಮದ ಸತ್ಯಪ್ಪ ಶಿದ್ಲಿಂಗಪ್ಪ ನರಿ (29) ಹೃದಯಾ ಘಾತದಿಂದ ಮೃತಪಟ್ಟಿರುವ ಯೋಧ. 

ಹೃದಯಾಘಾತಕ್ಕೆ ಒಳಗಾದ ಸತ್ಯಪ್ಪ ಅವರನ್ನು ಕೋಲ್ಕತಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದರು. ಮೃತ ಯೋಧಗೆ ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ತಂದೆ ತಾಯಿ, ಸಹೋದರ, ಸಹೋದರಿ ಇದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮೃತರ ಪಾರ್ಥಿವ ಶರೀರ ಶುಕ್ರವಾರ ಬೆಳಗ್ಗೆ ಮಬನೂರ ಗ್ರಾಮ ತಲುಪಲಿದ್ದು, ಇಂದು ಮಧ್ಯಾಹ್ನ ಮಬನೂರ ಗ್ರಾಮದಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
 

PREV
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು