ಬೆಳಗಾವಿ ಗಡಿ ವಿವಾದ: ವಿವಾದಾತ್ಮಕ ಹೇಳಿಕೆ ನೀಡಿದರೆ ಕಠಿಣ ಕ್ರಮ

By Suvarna NewsFirst Published Jan 3, 2020, 11:22 AM IST
Highlights

ವಿವಾದಾತ್ಮಕ ಹೇಳಿಕೆ ನೀಡುವವರು ಯಾರೇ ಆಗಿದ್ದರು. ಯಾವುದೇ ಮುಲಾಜಿಲ್ಲದೇ ಕಾನೂನು ರೀತಿ ಕಠಿಣ ಕ್ರಮ| ಬೆಳಗಾವಿ ನಗರ ಪೊಲೀಸ್ ಆಯುಕ್ತ, ಎಸ್ಪಿ ಎಚ್ಚರಿಕೆ|ಜಿಲ್ಲೆಯ ಗಡಿಭಾಗದಲ್ಲಿ ಹೆಚ್ಚಿನ ನಿಗಾವಹಿಸಲಾಗಿದೆ| ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆ|

ಬೆಳಗಾವಿ[ಜ.03]: ಬೆಳಗಾವಿ ನಗರ ಅಥವಾ ಜಿಲ್ಲೆಯಲ್ಲಿ ಕಾನೂನು ಸುವ್ಯಸ್ಥೆಗೆ ಧಕ್ಕೆ ತರುವ ನಿಟ್ಟಿನಲ್ಲಿ ವಿವಾದಾತ್ಮಕ ಹೇಳಿಕೆ ನೀಡುವವರು ಯಾರೇ ಆಗಿದ್ದರು. ಯಾವುದೇ ಮುಲಾಜಿಲ್ಲದೇ ಕಾನೂನು ರೀತಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶಕುಮಾರ ಹಾಗೂ ಎಸ್‌ಪಿ ಲಕ್ಷ್ಮಣ ನಿಂಬರಗಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. 

ನಗರದಲ್ಲಿ ಗುರುವಾರ ನಗರ ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶಕುಮಾರ ಹಾಗೂ ಎಸ್‌ಪಿ ಲಕ್ಷ್ಮಣ ನಿಂಬರಗಿ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದರು. ಗಡಿ, ಭಾಷೆ ವಿಷಯವನ್ನು ಮುಂದಿಟ್ಟುಕೊಂಡು ವಿವಾದಾತ್ಮಕ ಹೇಳಿಕೆ ನೀಡುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವಂತೆ ಮಾಡುತ್ತಿರುವುವರನ್ನು ಕಾನೂನಿನ ಅಡಿಯಲ್ಲಿ ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಇನ್ನೂ ಬೆಳಗಾವಿ ನಗರದಲ್ಲಿ ಮಹಾರಾಷ್ಟ್ರ ಸಚಿವರು ಎಂಇಎಸ್ ಹಾಗು ಶಿವಸೇನೆ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದಾರೆ ಎನ್ನಲಾಗುತ್ತಿರುವ ಸುದ್ದಿಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ವಿಚಾರಿಸಲಾಗಿದ್ದು, ಕೊಲ್ಲಾಪುರ ಜಿಲ್ಲೆಯ ಜಿಲ್ಲಾ ಪಂಚಾಯತಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆದಿರುವ ಹಿನ್ನೆಲೆಯಲ್ಲಿ 27 ಜಿಪಂ ಸದಸ್ಯರೊಂದಿಗೆ ನೆರೆಯ ಗೋವಾಕ್ಕೆ ತೆರಳಲಾಗಿತ್ತು. ಮರಳಿ ಕೊಲ್ಹಾಪುರಕ್ಕೆ ಹೋಗುತ್ತಿದ್ದ ವೇಳೆ ಮಹಾರಾಷ್ಟ್ರದ ಸಚಿವರ ಬೆಳಗಾವಿಯಲ್ಲಿ ಬಂದು ಖಾಸಗಿ ಹೊಟೇಲನಲ್ಲಿ ವಾಸ್ತವ್ಯಹೂಡಿ, ತಾವು ಅಲ್ಲಿಗೆ ಬಂದು ಜಿಪಂ ಸದಸ್ಯರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದರಿಂದ. ಹೊಟೇಲನಲ್ಲಿ ಸಭೆ ನಡೆಸಲಾಗಿದೆ ಹೊರತು, ಗಡಿ ವಿಷಯವಾಗಿ ಯಾವುದೇ ಚರ್ಚೆ ನಡೆಸಿಲ್ಲ ಎಂದು ತಿಳಿಸಿದ್ದಾರೆ ಎಂದರು. 

ಅಲ್ಲದೇ ಮಹಾರಾಷ್ಟ್ರದ ನಾಯಕರು ಇಂದು ಜಿಪಂ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಗೆ ಚುನಾವಣೆ ಇರುವುದರಿಂದ ಕೊಲ್ಲಾಪುರಕ್ಕೆ ತೆರಳುತ್ತಿದ್ದು, ಇಲ್ಲಿನ ಸಾರಿಗೆ ಸಂಸ್ಥೆ ಬಸ್ ಹಾಗೂ ಕರ್ನಾಟಕದ ಗಡಿ ದಾಟುವವರೆಗೆ ಭದ್ರತೆ ನೀಡುವಂತೆ ಲಿಖಿತವಾಗಿ ಪತ್ರ ನೀಡಿ ಮನವಿ ಮಾಡಿಕೊಂಡಿದ್ದರಿಂದ ಸಾರಿಗೆ ಸಂಸ್ಥೆ ಬಸ್‌ನಲ್ಲಿ ಜಿಪಂನ 27 ಸದಸ್ಯರನ್ನು ಪೊಲೀಸ್ ಭದ್ರತೆಯೊಂದಿಗೆ ಕಳುಹಿಸಿಕೊಡಲಾಗಿದೆ. ಆದರೆ ಬುಧವಾರ ಮಾಧ್ಯಮಗಳಲ್ಲಿ ಗಡಿ ವಿಷಯವಾಗಿ ಸಭೆ ನಡೆಸಲಾಗಿದೆ ಎಂದು ಸುದ್ದಿ ಪ್ರಕಟವಾಗಿದ್ದರಿಂದ, ಗಡಿ ವಿಷಯವಾಗಿ ಯಾವುದೇ ಚರ್ಚೆ ನಡೆದಿಲ್ಲ. ಹೊರತು ಕೊಲ್ಲಾಪುರ ಜಿಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಕುರಿತು ಚರ್ಚಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

ಅಲ್ಲದೇ ಜಿಲ್ಲೆಯ ಗಡಿಭಾಗದಲ್ಲಿ ಹೆಚ್ಚಿನ ನಿಗಾವಹಿಸಲಾಗಿದೆ. ಜತೆಗೆ ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ನಿಟ್ಟಿನಲ್ಲಿ ವಿವಾದಾತ್ಮಕ ಹೇಳಿಕೆ ನೀಡುವುದು ಹಾಗೂ ಸಾಮಾಜಿಕ ಜಾಲ ತಾಣಗಳಲ್ಲಿ ಸಂದೇಶಗಳನ್ನು ಹರಿಬಿಡದಂತೆ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

* ಗಡಿ, ಭಾಷೆ ವಿಷಯವನ್ನು ಮುಂದಿಟ್ಟುಕೊಂಡು ವಿವಾದಾತ್ಮಕ ಹೇಳಿಕೆ ನೀಡುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವಂತೆ ಮಾಡುತ್ತಿರುವುವರನ್ನು ಕಾನೂನಿನ ಅಡಿಯಲ್ಲಿ ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮಕೈಗೊಳ್ಳಲಾಗುವುದು. 

* ಇನ್ನೂ ಬೆಳಗಾವಿ ನಗರದಲ್ಲಿ ಮಹಾರಾಷ್ಟ್ರ ಸಚಿವರು ಎಂಇಎಸ್ ಹಾಗು ಶಿವಸೇನೆ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದಾರೆ ಎನ್ನಲಾಗುತ್ತಿರುವ ಸುದ್ದಿಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ವಿಚಾರಿಸಲಾಗಿದ್ದು, ಕೊಲ್ಲಾಪುರ ಜಿಲ್ಲೆಯ ಜಿಲ್ಲಾ ಪಂಚಾಯತಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆದಿರುವ ಹಿನ್ನೆಲೆಯಲ್ಲಿ 27 ಜಿಪಂ ಸದಸ್ಯರೊಂದಿಗೆ ನೆರೆಯ ಗೋವಾಕ್ಕೆ ತೆರಳಲಾಗಿತ್ತು.

ಈ ಬಗ್ಗೆ ಮಾತನಾಡಿದ ಕರ್ನಾಟಕ ನವ ನಿರ್ಮಾಣ ಸೇನೆ ಅಧ್ಯಕ್ಷ ಭೀಮಾಶಂಕರ ಪಾಟೀಲ ಅವರು, ಬೆಳಗಾವಿಯಲ್ಲಿಂದು ನನ್ನ ವಿರುದ್ಧ ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರತಿಭಟಿಸಿ, ನನ್ನ ಪ್ರವೇಶ ನಿಷೇಧಿಸಬೇಕೆಂದು ಒತ್ತಾಯಿಸಿದೆ. ಭಾಷಾವಾರು ಪ್ರಾಂತ್ಯ ರಚನೆ ಸಮಯದಲ್ಲಿ ಮಹಾರಾಷ್ಟ್ರದಿಂದ ನಿರಾಶ್ರಿತರಾಗಿ ಇಲ್ಲಿಗೆ ಅಕ್ರಮವಾಗಿ ವಲಸೆ ಬಂದ ನೆಲೆ ಇಲ್ಲದವರು ಈ ನೆಲದ ಮಣ್ಣಿನಲ್ಲಿಯೇ ಹುಟ್ಟಿದ ನನ್ನನ್ನು ನಿಷೇಧಿಸಬೇಕೆನ್ನುತ್ತಿರುವುದು ಹಾಸ್ಯಾಸ್ಪದ. ನಮ್ಮ ಹೋರಾಟ ಗಡಿ ವಿವಾದದ ಹೆಸರಿನಲ್ಲಿ ಭಯ ಹುಟ್ಟಿಸುತ್ತಿರುವ ಈ ಭಯೋತ್ಪಾದಕ ಎಂಇಎಸ್ ಮತ್ತು ಶಿವಸೇನೆ ವಿರುದ್ದ ಮಾತ್ರ. ಬೆಳಗಾವಿಯಲ್ಲಿ ಕನ್ನಡ, ಕನ್ನಡಿಗ, ಕರ್ನಾಟಕವನ್ನು ಗೌರವಿಸಿ ಬದುಕುತ್ತಿರುವ ಮುಗ್ದ ಮರಾಠಿಗರ ವಿರುದ್ಧವಲ್ಲ. ಈ ವೀರರ ನೆಲದಿಂದ ಬೇರು ಸಮೇತ ಇವರ ನೆಲೆಯನ್ನು ಕಿತ್ತೊಗೆಯುವರೆಗೂ ನಾವು ಹೋರಾಡುತ್ತೇವೆ. ರಾಜಿ ಮಾತೇ ಇಲ್ಲ ಎಂದು ತಿಳಿಸಿದ್ದಾರೆ. 

click me!