ಬೆಳಗಾವಿಯಲ್ಲಿ ಭೀಕರ ಆಕ್ಸಿಡೆಂಟ್‌, ಕಾರ್‌ ಮೇಲೆ ಉರುಳಿಬಿದ್ದ ಕಾಂಕ್ರೀಟ್‌ ಮಿಕ್ಸರ್‌ ಲಾರಿ, ಬದುಕುಳಿದ ಇಬ್ಬರು!

Published : Mar 15, 2025, 11:23 AM ISTUpdated : Mar 15, 2025, 11:35 AM IST
ಬೆಳಗಾವಿಯಲ್ಲಿ ಭೀಕರ ಆಕ್ಸಿಡೆಂಟ್‌, ಕಾರ್‌ ಮೇಲೆ ಉರುಳಿಬಿದ್ದ ಕಾಂಕ್ರೀಟ್‌ ಮಿಕ್ಸರ್‌ ಲಾರಿ, ಬದುಕುಳಿದ ಇಬ್ಬರು!

ಸಾರಾಂಶ

ಬೆಳಗಾವಿಯಲ್ಲಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರ್ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಉರುಳಿಬಿದ್ದಿದೆ. ಕಾರ್‌ನಲ್ಲಿದ್ದ ಮೂವರು ಪವಾಡಸದೃಶ್ಯವಾಗಿ ಪಾರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಿ ಮೂವರನ್ನು ರಕ್ಷಿಸಲಾಗಿದೆ.


ಬೆಳಗಾವಿ (ಮಾ.15): ಬೆಂಗಳೂರಿನ ನೆಲಮಂಗಲದಲ್ಲಿ ಕಳೆದ ಡಿಸೆಂಬರ್‌ನಲ್ಲಿ ನಡೆದಿದ್ದ ಭೀಕರ ಅಪಘಾತವನ್ನು ನೆನಪಿಸುವಂಥ ರೀತಿಯಲ್ಲಿ ಬೆಳಗಾವಿಯಲ್ಲಿ ಭೀಕರ ಆಕ್ಸಿಡೆಂಟ್‌ ಸಂಭವಿಸಿದೆ. ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರ್‌ನ ಮೇಲೆ ಕಾಂಕ್ರಿಟ್‌ ಮಿಕ್ಸರ್‌ ಲಾರಿ ಉರುಳಿಬಿದ್ದಿದೆ. ನೆಲಮಂಗಲದಲ್ಲಿ ನಡೆದಿದ್ದ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವು ಕಂಡಿದ್ದರೆ, ಬೆಳಗಾವಿ ಅಪಘಾತದಲ್ಲಿ ಕಾರ್‌ನ ಮೇಲೆ ಕಾಂಕ್ರಿಟ್‌ ಮಿಕ್ಸರ್‌ ಲಾರಿ ಬಿದ್ದರೂ, ಕಾರ್‌ನಲ್ಲಿದ್ದ ಇಬ್ಬರು ಪವಾಡಸದೃಶ್ಯವಾಗಿ ಪಾರಾಗಿದ್ದಾರೆ. KA25 MD 6506 ಸಂಖ್ಯೆಯ ಕಾರ್ ಮೇಲೆ ಕ್ಯಾಂಟರ್ ಬಿದ್ದಿದ್ದು, ಎಲ್ಲರೂ ಕೂಡಾ ಸಾವಿನಿಂದ ಪಾರಾಗಿದ್ದಾರೆ.

ಕಾರಿನ ಒಳಗೆ ಇಬ್ಬರು ಪ್ರಯಾಣಿಕರು ಸಿಕ್ಕಿಕೊಂಡಿರುವ ಮಾಹಿತಿ ಸಿಕ್ಕ ಬೆನ್ನಲ್ಲಿಯೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿತ್ತು. ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆ ಬಳಿಯ ಹೈವೇ ಪಕ್ಕದಲ್ಲಿ ಘಟನೆ ನಡೆದಿತ್ತು. ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ. ಕಾರಿನಲ್ಲಿ ಇದ್ದವರನ್ನ ರಕ್ಷಿಸಲು ದೊಡ್ಡ ಮಟ್ಟದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯಿತು. ಕ್ರೇನ್ ಮೂಲಕ ರಕ್ಷಣಾ  ಕಾರ್ಯಾಚರಣೆ ನಡೆದಿತ್ತು. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.

ಇಬ್ಬರಿಗೂ ಕೂಡ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಪ್ರಯಾಣಿಕರು ಪಾರಾದ ರೀತಿಗೇ ಜನರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅಶೋಕ್‌ ಲೇಲ್ಯಾಂಡ್‌ ಕಂಪನಿಯ ಕಾಂಕ್ರಿಟ್‌ ಲಾರಿ ಬಿದ್ದ ರಭಸಕ್ಕೆ ಇಡೀ ಕಾರು ಸಂಪೂರ್ಣವಾಗಿ ಜಖಂ ಆಗಿದೆ. ಈ ವೇಳೆ ಕಾರ್‌ನ ಒಳಗಡೆಯ ಇಬ್ಬರು ಪ್ರಯಾಣಿಕರಿದ್ದರು. ಘಟನೆ ನಡೆದ ಬೆನ್ನಲ್ಲಿಯೇ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ನಡೆಸಿದ್ದರು.

ರಕ್ಷಣೆಗೆ ಒಳಗಾದ ಮೂವರ ಪೈಕಿ ಇಬ್ಬರನ್ನು  ಪರಪ್ಪ ಬಾಳಿಕಾಯಿ, ನಿಂಗಪ್ಪ ಕೊಪ್ಪದ್ ಎಂದು ಗುರುತಿಸಲಾಗಿದೆ. ಧಾರವಾಡದಿಂದ ಬೆಳಗಾವಿಗೆ ಬರುವಾಗ ಈ ಘಟನೆ ನಡೆದಿದೆ. ಸಂಬಂಧಿಗಳ ಆಗಮನಕ್ಕಾಗಿ ಸರ್ವೀಸ್ ರಸ್ತೆ ಬದಿ ಕಾರು ಪಾರ್ಕ್ ಮಾಡಿ ಕಾಯುತ್ತಿದ್ದರು ಎನ್ನಲಾಗಿದೆ.

Mandya: ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವಾಗ ಆಕ್ಸಿಡೆಂಟ್‌; ತಾಯಿ ಸಾವು, ನಡುರಸ್ತೆಯಲ್ಲೇ ಮಕ್ಕಳ ಆಕ್ರಂದನ!

ಕೇವಲ 15 ನಿಮಿಷದಲ್ಲೇ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಸ್ಥಳೀಯ ಜನರು, ಎರಡು ಕ್ರೇನ್ ಬಳಸಿ ಕಾರ್‌ನಲ್ಲಿದ್ದವರನ್ನು ರಕ್ಷಿಸಲಾಗಿದೆ. ಲಾರಿಯನ್ನ ಮೊದಲಿಗೆ ಕ್ರೇನ್‌ ಮೂಲಕ ಮೇಲೆತ್ತಲಾಗಿದೆ. ಅನಂತರ ಲಾರಿ ಅಡಿಯಲ್ಲಿದ್ದ ಕಾರನ್ನ ಸಾರ್ವಜನಿಕರು ಹೊರಗೆ ತೆಗೆದಿದ್ದಾರೆ. ಇಬ್ಬರನ್ನ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬೆಳಗಾವಿಯಲ್ಲಿ ಮತ್ತೆ ಮರಾಠಿಗರ ಪುಂಡಾಟ; ಕಂಡಕ್ಟರ್ ಆಯ್ತು, ಈಗ ಪಿಡಿಓ

PREV
Read more Articles on
click me!

Recommended Stories

ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಹೊಸ ಮಾರ್ಗಗಳಿಗೆ ಬರಲಿವೆ ಚಾಲಕ ರಹಿತ ರೈಲು