Belagavi Floods: ಕೇಂದ್ರ ನೆರೆ ಅಧ್ಯಯನ ತಂಡ ಭೇಟಿ, ಪರಿಶೀಲನೆ

Published : Sep 11, 2022, 09:58 AM ISTUpdated : Sep 11, 2022, 10:05 AM IST
Belagavi Floods: ಕೇಂದ್ರ ನೆರೆ ಅಧ್ಯಯನ ತಂಡ ಭೇಟಿ, ಪರಿಶೀಲನೆ

ಸಾರಾಂಶ

ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯನ್ನು ಕೇಂದ್ರ ನೆರೆ ಅಧ್ಯಯನ ತಂಡವು ಶನಿವಾರ ಪರಿಶೀಲನೆ ನಡೆಸಿತು. ಕೇಂದ್ರ ಜಲ ಆಯೋಗದ ಜಲಶಕ್ತಿ ಸಚಿವಾಲಯದ ನಿರ್ದೇಶಕ ಅಶೋಕಕುಮಾರ ವಿ. ನೇತೃತ್ವದ ಕೇಂದ್ರ ಅಧ್ಯಯನ ತಂಡದಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯ ಅಧೀಕ್ಷಕ ಎಂಜಿನಿಯರ್‌ ವಿ.ವಿ. ಶಾಸ್ತ್ರಿ ಹಾಗೂ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹಿರಿಯ ಸಲಹೆಗಾರ ಡಾ. ಜಿ.ಎಸ್‌. ಶ್ರೀನಿವಾಸ್‌ ರೆಡ್ಡಿ ಅವರು ಜತೆಗಿದ್ದರು.

ಬೆಳಗಾವಿ (ಸೆ.11) : ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯನ್ನು ಕೇಂದ್ರ ನೆರೆ ಅಧ್ಯಯನ ತಂಡವು ಶನಿವಾರ ಪರಿಶೀಲನೆ ನಡೆಸಿತು. ಕೇಂದ್ರ ಜಲ ಆಯೋಗದ ಜಲಶಕ್ತಿ ಸಚಿವಾಲಯದ ನಿರ್ದೇಶಕ ಅಶೋಕಕುಮಾರ ವಿ. ನೇತೃತ್ವದ ಕೇಂದ್ರ ಅಧ್ಯಯನ ತಂಡದಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯ ಅಧೀಕ್ಷಕ ಎಂಜಿನಿಯರ್‌ ವಿ.ವಿ. ಶಾಸ್ತ್ರಿ ಹಾಗೂ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹಿರಿಯ ಸಲಹೆಗಾರ ಡಾ. ಜಿ.ಎಸ್‌. ಶ್ರೀನಿವಾಸ್‌ ರೆಡ್ಡಿ ಅವರು ಜತೆಗಿದ್ದರು.

Belagavi Rain: ಮನೆಯಲ್ಲಿ ಸಿಲುಕಿದ್ದ 12 ದಿನದ ಹಸುಗೂಸು, ಬಾಣಂತಿ ರಕ್ಷಿಸಿದ ಯುವಕರು!

ಬೆಳಗಾವಿ(Belagavi)ಯಿಂದ ಪ್ರವಾಸ ಆರಂಭಿಸಿದ ಕೇಂದ್ರ ತಂಡವು(Central Team) ಮೊದಲಿಗೆ ಯಳ್ಳೂರ(Yalluru) ರಸ್ತೆಯಲ್ಲಿ ಬತ್ತದ ಬೆಳೆಹಾನಿ ವೀಕ್ಷಿಸಿತು. ಇದಾದ ಬಳಿಕ ಖಾನಾಪುರ(Khanapura) ತಾಲೂಕಿನ ಶಿಂಗಿನಕೊಪ್ಪ(Shingina koppa) ಗ್ರಾಮದಲ್ಲಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಹಾನಿ ಪರಿಶೀಲಿಸಿ, ಮಾಹಿತಿ ಪಡೆದುಕೊಂಡಿತು.

ಗರ್ಲಗುಂಜಿ ಶಾಲಾ ಭೇಟಿ: ಗರ್ಲಗುಂಜಿ(Garlgunji)ಯ ಆದರ್ಶ ಬಾಲಕರ ಮರಾಠಿ ವಿದ್ಯಾಲಯದ 11ರಲ್ಲಿ ಏಳು ಕೊಠಡಿಗಳು ಮಳೆಯಿಂದ ಹಾನಿಗೊಳಗಾಗಿವೆ. 1ರಿಂದ 7 ನೇ ತರಗತಿಯ 150 ಮಕ್ಕಳು ಕಲಿಯುತ್ತಿದ್ದು, ಕೊಠಡಿಗಳು ಹಾನಿಗೆ ಒಳಗಾಗಿರುವುದರಿಂದ ಸಮುದಾಯ ಭವನ ಹಾಗೂ ಇರುವ ಕೊಠಡಿಗಳಲ್ಲಿ ತರಗತಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ(Nitesh Patil) ವಿವರಿಸಿದರು.

ಈ ವೇಲೆ 65 ವರ್ಷದ ಶಾಲಾ ಕಟ್ಟಡವನ್ನು ತಂಡ ಪರಿಶೀಲಿಸಿತು. ಜುಲೈನಲ್ಲಿ ಕಟ್ಟಡ ಕುಸಿದಿದೆ. ಹಂತ ಹಂತವಾಗಿ ಇಡೀ ಶಾಲಾ ಕಟ್ಟಡ ಕುಸಿದಿದೆ ಎಂದು ಮಾಹಿತಿ ನೀಡಿದರು. ಶಾಲಾ ಕಟ್ಟಡ ಹಾನಿಯಾಗಿರುವ ಬಗೆಯ ಕುರಿತು ಶಾಲಾ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಮುಖ್ಯೋಪಾಧ್ಯಾಯರನ್ನು ಕೇಂದ್ರ ತಂಡದ ಸದಸ್ಯರು ವಿಚಾರಿಸಿದರು.

ಪ್ರತಿ ಕೊಠಡಿಗೆ ಭೇಟಿ ನೀಡಿದ ಪರಿಶೀಲಿಸಿದ ತಂಡದ ಸದಸ್ಯರು, ಮಕ್ಕಳ ಸುರಕ್ಷತೆ(Child safety) ದೃಷ್ಟಿಯಿಂದ ಎಚ್ಚರಿಕೆ ವಹಿಸುವಂತೆ ತಿಳಿಸಿದರು. ಪಕ್ಕದಲ್ಲಿರುವ ಹೊಸ ಕೊಠಡಿಗಳ ಮೇಲೆ ಇನ್ನಷ್ಟುಕೊಠಡಿಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ನರೇಗಾ(NREGA) ಯೋಜನೆಯಡಿ ಜಿಪಂ ವತಿಯಿಂದ ಪಾದಚಾರಿ ಬ್ಲಾಕ್ಸ್‌ ಅಳವಡಿಸಲಾಗಿದೆ ಎಂದು ಜಿಪಂ ಸಿಇಒ ದರ್ಶನ ತಿಳಿಸಿದರು.

ಶಾಲೆಯಲ್ಲಿ ಗೋದಿ ಉಪ್ಪಿಟ್ಟು ಸವಿದ ತಂಡ: ಕೇಂದ್ರ ತಂಡದ ಸದಸ್ಯರು ಗುರ್ಲಗಂಜಿ ಶಾಲಾ ಮುಖ್ಯೋಪಾಧ್ಯಾಯರ ಮನವಿಯ ಮೇರೆಗೆ ಗೋಧಿ ಉಪ್ಪಿಟ್ಟು ಸವಿದರು. ಶಾಲೆಯಲ್ಲಿ ತಯಾರಿಸುವ ಆಹಾರದ ಬಗ್ಗೆ ಮಾಹಿತಿ ಪಡೆದ ಅವರು, ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ತೋಪಿನಕಟ್ಟಿ(Topinakatti)ಯಲ್ಲಿ ಇತ್ತೀಚೆಗೆ ಮಳೆಯಿಂದ ಹಾನಿ(Rain damage)ಗೊಳಗಾದ ನಾಲ್ಕು ಮನೆಗಳನ್ನು ತಂಡ ವೀಕ್ಷಿಸಿತು. ಮೊದಲಿಗೆ ಶಾಂತಾ ಹೊಸೂರಕರ(Shanta hosurkar) ಅವರ ಮನೆ ಪರಿಶೀಲಿಸಿತು. ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಅವರು, ಸಂಪೂರ್ಣ ಕುಸಿತಗೊಂಡಿರುವುದರಿಂದ ಮೊದಲ ಕಂತಿನ .90 ಸಾವಿರ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು. ಸರ್ಕಾರ ನೀಡುವ .5 ಲಕ್ಷ ಬಳಸಿಕೊಂಡು ಉತ್ತಮ ಮನೆ ನಿರ್ಮಿಸಿಕೊಳ್ಳುವಂತೆ ತಂಡದ ಸದಸ್ಯರು ತಿಳಿಸಿದರು.

ಖಾನಾಪುರ ಅಂಗನವಾಡಿಗಳಿಗೆ ಭೇಟಿ: ಪಟ್ಟಣದ ಚಿರಮುರಕರ ಹಾಗೂ ಘೋಡೆ ಗಲ್ಲಿಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದ ತಂಡವು ಕಟ್ಟಡ ಪರಿಶೀಲಿಸಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಸವರಾಜ್‌, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮಮೂರ್ತಿ ಮತ್ತಿತರರು ಮಾಹಿತಿ ನೀಡಿದರು. ಕೊನೆಗೆ ಹಾರುರಿ ಬಳಿ ಶಿಂಧೂರ-ಹೆಮ್ಮಡಗಾ ರಸ್ತೆ ಹಾನಿ ಪರಿಶೀಲಿಸಲಾಯಿತು. ಇದಕ್ಕೂ ಮುನ್ನ ಬೆಳಗಾವಿ ಪ್ರವಾಸಿಮಂದಿರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಅವರು, ಇತ್ತೀಚಿನ ಅತಿವೃಷ್ಟಿಯಿಂದ ಉಂಟಾದ ಹಾನಿಯನ್ನು ಅಂಕಿ-ಅಂಶಗಳ ಸಮೇತ ವಿವರಿಸಿದರು.

ಅತಿವೃಷ್ಟಿಯಿಂದ ಜಿಲ್ಲೆಯ ಸವದತ್ತಿ, ಖಾನಾಪುರ ಹಾಗೂ ನಿಪ್ಪಾಣಿಯಲ್ಲಿ ಮೂರು ಜನರಿಗೆ ಜೀವಹಾನಿಯಾಗಿದ್ದು, ತಲಾ ಐದು ಲಕ್ಷ ರು.ದಂತೆ ಪರಿಹಾರ ನೀಡಲಾಗಿದೆ. 34 ಜಾನುವಾರುಗಳ ಜೀವಹಾನಿಯಾಗಿದ್ದು, ಐದು ತಾಲೂಕಿನಲ್ಲಿ ಒಟ್ಟು 65 ಕುಟುಂಬಗಳು ಪ್ರವಾಹದಿಂದ ಬಾಧಿತವಾಗಿವೆ.

ಜಿಲ್ಲೆಯಲ್ಲಿ 14 ಮನೆಗಳು ಸಂಪೂರ್ಣ ಹಾನಿ: ಜಿಲ್ಲೆಯಲ್ಲಿ ಸಂಪೂರ್ಣ, ಭಾಗಶಃ ಸೇರಿದಂತೆ ಒಟ್ಟು 1562 ಮನೆಗಳಿಗೆ ಹಾನಿಯಾಗಿವೆ. ಅದರಲ್ಲಿ 14 ಮನೆಗಳು ಮಾತ್ರ ಸಂಪೂರ್ಣವಾಗಿ ಕುಸಿದಿವೆ ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ವಿವರಿಸಿದರು. 747 ಭಾಗಶಃ ಹಾಗೂ 801 ಮನೆಗಳಿಗೆ ಹೆಚ್ಚಿನ ಪ್ರಮಾಣದ ಹಾನಿಯಾಗಿದೆ. ಬತ್ತ, ಜೋಳ, ಗೋವಿನಜೋಳ, ಹೆಸರು, ಸೋಯಾಬಿನ್‌ ಸೇರಿದಂತೆ 27,341 ಹೆಕ್ಟೇರ್‌ ಬೆಳೆಯು ಪ್ರವಾಹದಿಂದ ಬಾಧಿತಗೊಂಡಿದೆ. ಅದೇ ರೀತಿ 127.81 ಹೆಕ್ಟೇರ್‌ ತೋಟಗಾರಿಕೆ ಬೆಳೆ ಕೂಡ ನಷ್ಟವಾಗಿದೆ. 1330 ಕಿ.ಮೀ. ರಸ್ತೆ, 23 ಸೇತುವೆ, 326 ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದೆ. ಈ ಎಲ್ಲ ಹಾನಿಗೆ ಸಂಬಂಧಿಸಿದಂತೆ ಛಾಯಾಚಿತ್ರ ಹಾಗೂ ವಿಡಿಯೋ ಮತ್ತಿತರ ದಾಖಲೆಗಳನ್ನು ಒದಗಿಸಲಾಗಿದ್ದು, ಇದನ್ನು ಪರಿಗಣಿಸಿ ಹೆಚ್ಚಿನ ಪರಿಹಾರ ಬಿಡುಗಡೆಗೆ ಕ್ರಮವಹಿಸಬೇಕು ಎಂದು ತಂಡದ ಸದಸ್ಯರಿಗೆ ಮನವಿ ಮಾಡಿಕೊಂಡರು.

Belagavi Border dispute : ಸುಪ್ರೀಂ ಕೋರ್ಟ್‌ನಲ್ಲಿ ನ.23ರಿಂದ ಅಂತಿಮ ವಿಚಾರಣೆ

ಇದೇ ವೇಳೆ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಗೆ ಸಂಬಂಧಿಸಿದ ಛಾಯಾಚಿತ್ರ ಪ್ರದರ್ಶನವನ್ನು ಕೇಂದ್ರ ಅಧ್ಯಯನ ತಂಡವು ವೀಕ್ಷಿಸಿತು. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಜಿಲ್ಲಾ ನಗರ ಯೋಜನಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಪಶುವೈದ್ಯಕೀಯ ಹಾಗೂ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ರಾಜೀವ್‌ ಕೂಲೇರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

PREV
Read more Articles on
click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಅಣ್ಣಾ, ಇನ್ನು ಎಷ್ಟೊತ್ತು ಎಂದ ಗ್ರಾಹಕನಿಗೆ ಇದು ಪ್ಲೇನ್ ಅಲ್ಲ ಅಂದ ಬೆಂಗ್ಳೂರು ಕ್ಯಾಬ್ ಡ್ರೈವರ್!