ಮತದಾರರ ಪಟ್ಟಿಯಿಂದ ಮುಸ್ಲಿಂ ವೋಟರ್ಸ್ ಡಿಲೀಟ್; ಬಿಜೆಪಿ ಮುಖಂಡ ಡಾ. ರವಿ ಪಾಟೀಲ್‌ಗೆ ಪೊಲೀಸ್ ನೋಟಿಸ್!

Published : Oct 04, 2026, 11:45 AM IST
Belagavi SIR BJP Leader Ravi Pateel

ಸಾರಾಂಶ

ಬೆಳಗಾವಿಯಲ್ಲಿ ಅಕ್ರಮವಾಗಿ ಮುಸ್ಲಿಂ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲು ಯತ್ನಿಸಿದ ಆರೋಪದಡಿ ಬಿಜೆಪಿ ಮುಖಂಡ ಡಾ. ರವಿ ಪಾಟೀಲ್ ಅವರಿಗೆ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಈ ಸಂಬಂಧ ಆಸ್ಪತ್ರೆಯ ಇಬ್ಬರು ಸಿಬ್ಬಂದಿಯನ್ನು ವಶಕ್ಕೆ ಪಡೆಯಲಾಗಿದೆ.

ಬೆಳಗಾವಿ (ಅ.04): ಮತದಾರರ ಪಟ್ಟಿಯಿಂದ (SIR) ಅಕ್ರಮವಾಗಿ ಮುಸ್ಲಿಂ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲು ಯತ್ನಿಸಿದ ಆರೋಪ ಎದುರಿಸುತ್ತಿರುವ ಬಿಜೆಪಿ ಮುಖಂಡ ಡಾ. ರವಿ ಪಾಟೀಲ್ ಅವರಿಗೆ ಬೆಳಗಾವಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಇದೇ ವೇಳೆ, ಪ್ರಕರಣದ ತನಿಖೆ ಚುರುಕುಗೊಳಿಸಿರುವ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು, ವಿಚಾರಣೆಗೆ ಖುದ್ದು ಹಾಜರಾಗುವಂತೆ ಡಾ. ರವಿ ಪಾಟೀಲ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಪ್ರಕರಣದ ಹಿನ್ನೆಲೆ:

ಬೆಳಗಾವಿಯ ವಾರ್ಡ್ ನಂಬರ್ 12ರ ವ್ಯಾಪ್ತಿಯಲ್ಲಿ ಬರುವ ಬರೋಬ್ಬರಿ 198 ಮುಸ್ಲಿಂ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವಂತೆ (ಡಿಲೀಟ್ ಮಾಡಲು) ನಕಲಿ ದಾಖಲೆ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಲಾಗಿತ್ತು. ಈ ಮೂಲಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕದಡಲು ಯತ್ನಿಸಲಾಗಿದೆ ಎಂದು ಆರೋಪಿಸಿ ವಾರ್ಡ್ 12ರ ಬಿಎಲ್‌ಒ (BLO) ಅವರು ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದರು. ಈ ದೂರಿನನ್ವಯ ಬಿಜೆಪಿ ಮುಖಂಡ ಡಾ. ರವಿ ಪಾಟೀಲ್ ಸೇರಿದಂತೆ ಒಟ್ಟು 25 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ತಲೆಮರೆಸಿಕೊಂಡಿದ್ದ ಮುಖಂಡ, ಈಗ ಸಮನ್ಸ್:

ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗುತ್ತಿದ್ದಂತೆಯೇ ಡಾ. ರವಿ ಪಾಟೀಲ್ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದರು. ಬಳಿಕ ನ್ಯಾಯಾಲಯದ ಮೊರೆ ಹೋಗಿದ್ದ ಅವರಿಗೆ ಸದ್ಯ ಷರತ್ತುಬದ್ಧ ಜಾಮೀನು ದೊರೆತಿದೆ. ಇತ್ತ ತನಿಖಾಧಿಕಾರಿ ಜೆ.ಎಂ. ಕಾಲಿಮಿರ್ಚಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಮಾರ್ಕೆಟ್ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಡಾ. ರವಿ ಪಾಟೀಲ್ ಅವರಿಗೆ ನೋಟಿಸ್ ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಡಾ. ರವಿ ಪಾಟೀಲ್ ಅವರ ಒಡೆತನದ ಆಸ್ಪತ್ರೆಯ ಇಬ್ಬರು ಸಿಬ್ಬಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ.

PREV
Read more Articles on
click me!

Recommended Stories

ಪಾಸ್‌ಪೋರ್ಟ್ ಆಫೀಸ್ ಮಾದರಿಯಲ್ಲಿ ‘ಗ್ಯಾರಂಟಿ ಸೇವಾ ಕೇಂದ್ರ’: ಇ-ಖಾತಾ, ಟ್ರೇಡ್ ಲೈಸೆನ್ಸ್ 72 ಗಂಟೆಯಲ್ಲೇ ಕೈಗೆ!
ನಲ್ಲಿಯಲ್ಲಿ ನೀರಿಲ್ಲ, ಬರೀ ಗಾಳಿ! ಆದ್ರೂ ಗಿರಗಿರನೆ ತಿರುಗುತ್ತೆ ಮೀಟರ್: BWSSB ಅವಾಂತರ ಬಯಲು, ವಿಡಿಯೋ ವೈರಲ್!