ಕೈ ಮುಖಂಡರ ವಿರುದ್ಧ ಎದುರಾಯ್ತು ಗಂಭೀರ ಆರೋಪ

Kannadaprabha News   | Asianet News
Published : Nov 13, 2020, 12:24 PM IST
ಕೈ ಮುಖಂಡರ ವಿರುದ್ಧ ಎದುರಾಯ್ತು ಗಂಭೀರ ಆರೋಪ

ಸಾರಾಂಶ

ಕಾಂಗ್ರೆಸ್ ಮುಖಂಡರೋರ್ವರ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. ಏನದು ಆರೋಪ..?

ಬೇಲೂರು (ನ.13): ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಬಿ.ಶಿವರಾಂ ಅವರು ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಬೇಲೂರು ತಾಲೂಕು ಯೂಥ್‌ ಕಾಂಗ್ರೆಸ್‌ ಅಧ್ಯಕ್ಷ ಪುನೀತ್‌ ಆರೋಪಿಸಿದರು.

ಅರೇಹಳ್ಳಿಯಲ್ಲಿ ಗುರುವಾರ ನಡೆದ ಯುವ ಕಾಂಗ್ರೆಸ್‌ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ, ಕಾಂಗ್ರೆಸ್‌ನಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಇದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳುವ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಬಿ.ಶಿವರಾಂ ಅವರು, ಕೇವಲ ಬರೀ ಮಾತಿನಲ್ಲಿ ಮಾತ್ರ ತಮ್ಮ ಹೇಳಿಕೆಗಳನ್ನು ನೀಡಿ ಕಾಂಗ್ರೆಸ್‌ನ ಹಿರಿಯರು, ಮುಖಂಡರು, ಕಾರ್ಯಕರ್ತರನ್ನು ಗಣನೆಗೆ ತೆಗದುಕೊಳ್ಳದೆ ತಮ್ಮದೇ ಆದ ಗುಂಪು ರಚನೆ ಮಾಡಿ ಅದರಲ್ಲಿ ಮಾತ್ರ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ ಎಂದು ದೂರಿದರು.

'ಸೌಮ್ಯಾ ರೆಡ್ಡಿ ಡಿಕೆಶಿಯೇ ಸಿಎಂ ಅಂತಿದ್ದಾರೆ-ಕುಸುಮಾ ಸೋಲಿಸಿದ್ದೆ ಸಿದ್ದರಾಮಯ್ಯ' .

ತಾಲೂಕಿನ ಅಭಿವೃದ್ಧಿ ಕಡೆ ಗಮನ ಕೊಡುವುದಾಗಲಿ ಅಥವಾ ಕಾಂಗ್ರೆಸ್‌ ಇನ್ನಷ್ಟುಸದೃಢವಾಗಿ ಬೆಳೆಸುವುದಾಗಲಿ ಇವರಿಗೆ ಯೋಚನೆ ಇಲ್ಲ. ಪೂರ್ಣೇಶ್‌ ಅವರ ಅಕಾಲಿಕ ಮರಣದಿಂದಾಗಿ ತೆರವಾಗಿದ್ದ ಅಧ್ಯಕ್ಷ ಸ್ಥಾನವನ್ನು ಕಳೆದ ಸಂಸದರ ಚುನಾವಣೆಯ ಸಮಯದಲ್ಲಿ ಬಿಜೆಪಿ ಜೊತೆಯಲ್ಲಿ ಗುರುತಿಸಿಕೊಂಡಿದ್ದ ನಿಶಾಂತ್‌ ಅವರನ್ನು ಯಾರ ಗಮನಕ್ಕೂ ತರದೆ ಅವರನ್ನು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಮಾಡಿದ್ದು ಯಾವ ಮಟ್ಟಕ್ಕೆ ಸರಿ ಎಂದು ಪ್ರಶ್ನಿಸಿದರು.

ಇದು ತಾಲೂಕಿನ ನಿಷ್ಠಾವಂತ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದ್ದಲ್ಲದೆ ಅನೇಕರು ತಮ್ಮ ಅಸಹನೆ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಇದನ್ನು ಯಾವ ರೀತಿಯಲ್ಲೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಹಾಗೆಯೇ ಕಾಂಗ್ರೆಸ್‌ ಸದಸ್ಯತ್ವ ನೋಂದಣಿ ಅತ್ಯಂತ ಚುರುಕಾಗಿ ನಡೆಯುತ್ತಿದೆ. ಗ್ರಾಮೀಣ ಭಾಗದ ಯುವಕರು ಉತ್ಸಾಹಿಯಾಗಿ ಸೇರ್ಪಡೆಗೊಳ್ಳುತ್ತಿರುವುದು ಸಂತೋಷದ ವಿಷಯವಾಗಿದೆ. ಪಕ್ಷವನ್ನು ಇನ್ನಷ್ಟುಬಲಪಡಿಸುವುದರ ಜೊತೆಗೆ ಎಲ್ಲರನ್ನೂ ಸಮಾನವಾಗಿ ನೋಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಿಸಾನ್‌ ಕೇತ್‌ನ ಮಾಜಿ ರಾಜ್ಯ ಸಂಚಾಲಕ ಎಚ್‌.ಡಿ. ತುಳಸೀದಾಸ್‌, ಹೋಬಳಿ ಅಧ್ಯಕ್ಷ ಮಲ್ಲೇಶ್‌ ಗೌಡ, ಕಾಂಗ್ರೆಸ್‌ ಮುಖಂಡರಾದ ನಿಂಗಾರಾಜ್‌, ಗೋಪಾಲ್‌, ಹಬೀಬ್‌, ಮುತಾಲಿಕ್‌ ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

PREV
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ