Bengaluru: ಗಣೇಶ ಹಬ್ಬಕ್ಕೆ 63 ಏಕಗವಾಕ್ಷಿ ಕೇಂದ್ರ ತೆರೆದ ಬಿಬಿಎಂಪಿ: ಇಲ್ಲಿದೆ ನೋಡಿ ಕೇಂದ್ರಗಳ ವಿವರ

By Sathish Kumar KH  |  First Published Sep 9, 2023, 1:04 PM IST

ಬೆಂಗಳೂರಿನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರಾಕ್ಷೇಪಣಾ ಪತ್ರಗಳನ್ನು ಅನುಕೂಲ ಆಗುವಂತೆ 63 ಏಕ ಗವಾಕ್ಷಿ ಕೇಂದ್ರಗಳನ್ನು ಬಿಬಿಎಂಪಿಯಿಂದ ತೆರೆಯಲಾಗಿದೆ.


ಬೆಂಗಳೂರು (ಸೆ.09): ಬೆಂಗಳೂರಿನಲ್ಲಿ ಗಣೇಶ ಹಬ್ಬ ಆಚರಣೆಗೆ ಅನುಕೂಲ ಆಗುವಂತೆ ಹಾಗೂ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಕೂಲ ಆಗುವಂತೆ ಅನುಮತಿಗಳನ್ನು ಪಡೆದುಕೊಳ್ಳಲು 63 ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 2023 ಸಾಲಿನ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿದ್ದು, ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ನಿರ್ಬಂಧಿಸುವುದರ ಕುರಿತು ಹಾಗೂ ಈ ರೀತಿಯ ವಸ್ತುಗಳನ್ನು ಬಳಸಿ ತಯಾರಿಕೆಯಾಗುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ ವಿಲೇವಾರಿ ಮಾಡುವ ಕುರಿತು ಹಾಗೂ ಹಬ್ಬಗಳ ಆಚರಣೆಯಿಂದ ಬರುವ ಹಸಿತ್ಯಾಜ್ಯವನ್ನು ಪಾಲಿಕೆಯ ಸಂಸ್ಕರಣಾ ಘಟಕಗಳಿಗೆ ಸಂಸ್ಕರಣೆಗಾಗಿ ಕಳುಹಿಸುವ ನಿಮಿತ್ತ ಹಾಗೂ ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ವಲಯ ಅಧಿಕಾರಿಗಳು ತೆಗೆದುಕೊಳ್ಳುವ ಮುಂಜಾಗ್ರತಾ ಕ್ರಮಗಳ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಕಛೇರಿ ಆದೇಶ ಹೊರಡಿಸಿದ್ದಾರೆ.

Tap to resize

Latest Videos

undefined

ಶುರುವಾಯ್ತು ಗಣಪನ ಕಲರವ..ಇಲ್ಲಿದೆ ಗಣೇಶನ ಪ್ರತಿಷ್ಠಾಪನೆಗೆ ಶುಭ ಸಮಯ, ಪೂಜಾ ವಿಧಾನ

ಗಣೇಶ ಚತುರ್ಥಿ ಆಚರಣೆಗೆ ಏಕಗವಾಕ್ಷಿ ಪದ್ದತಿಯಲ್ಲಿ ಅನುಮತಿ ಪಡೆಯುವ ಬಗ್ಗೆ: ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆಯ ಅಂಗವಾಗಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಕಾರ್ಯಕ್ರಮ ಆಯೋಜಿಸುವ ಸಂಬಂಧ, ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಹಾಗೂ ಆಗ್ನಿಶಾಮಕ ಇಲಾಖೆಗಳನ್ನು ಒಳಗೊಂಡಂತೆ 63 ಉಪ ವಿಭಾಗಗಳಲ್ಲಿ ಏಕಗವಾಕ್ಷಿ ಕೇಂದ್ರಗಳ ಮೂಲಕ ಪೂರ್ವಾನುಮತಿ ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಅಗತ್ಯ ದಾಖಲೆ ಸಲ್ಲಿಸಿ ನಿರಾಕ್ಷೇಪಣಾ ಪತ್ರ ಪಡೆಯಿರಿ:  ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಬರುವ ಅರ್ಜಿಗಳನ್ನು ಪರಿಶೀಲಿಸಿ ಶೀಘ್ರವಾಗಿ ಅನುಮತಿ ನೀಡುವ ಸಲುವಾಗಿ ಏಕಗವಾಕ್ಷಿ ಪದ್ದತಿ ಜಾರಿಗೊಳಿಸಲಾಗಿದೆ. ಸದರಿ ಏಕಗವಾಕ್ಷಿ ಕೇಂದ್ರಗಳಲ್ಲಿ ಆಯಾ ಇಲಾಖೆಗೆ ಸಂಬಂಧಿಸಿದ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಅಗತ್ಯ ದಾಖಲೆಗಳನ್ನು ಅರ್ಜಿಯೊಂದಿಗೆ ಒದಗಿಸಿ ಮುಚ್ಚಳಿಕೆ ಪತ್ರಕ್ಕೆ ಸಹಿ ಹಾಕಿ ನಿರಾಕ್ಷೇಪಣಾ ಪತ್ರ ಪಡೆಯಬಹುದಾಗಿರುತ್ತದೆ. 

ಬ್ರೇಕ್‌ ಫೇಲ್‌ ಆಗಿ ಕಂದಕಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್‌: 35 ಪ್ರಯಾಣಿಕರು ಜಸ್ಟ್‌ ಸೇಫ್‌

ಹೆಚ್ಚಿನ ಮಾಹಿತಿಗಾಗಿ ಕಛೇರಿ ಆದೇಶ, 63 ಏಕಗವಾಕ್ಷಿ ಕೇಂದ್ರಗಳ ಮಾಹಿತಿ ಹಾಗೂ ಇಲಾಖಾವಾರು ನೋಡಲ್ ಅಧಿಕಾರಿಗಳ ವಿವರಗಳು ಮತ್ತು ದೂರವಾಣಿ ಸಂಖ್ಯೆಯನ್ನು ಲಗತ್ತಿಸಿದೆ.

click me!