Bengaluru: ಆ್ಯಸಿಡ್ ದಾಳಿ ಪ್ರಕರಣ: ಯುವತಿ ಆರೋಗ್ಯದಲ್ಲಿ ಸುಧಾರಣೆ

Published : Jul 09, 2022, 12:40 PM IST
Bengaluru: ಆ್ಯಸಿಡ್ ದಾಳಿ ಪ್ರಕರಣ: ಯುವತಿ ಆರೋಗ್ಯದಲ್ಲಿ ಸುಧಾರಣೆ

ಸಾರಾಂಶ

ಹೆಗ್ಗನಹಳ್ಳಿ ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಂಟ್ ಜಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಯುವತಿ ನಿರೀಕ್ಷೆ ಮೀರಿ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬೆಂಗಳೂರು (ಜು.09): ಹೆಗ್ಗನಹಳ್ಳಿ ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಂಟ್ ಜಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಯುವತಿ ನಿರೀಕ್ಷೆ ಮೀರಿ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. 72 ದಿನದ ಬಳಿಕ ಐಸಿಯು ವಾರ್ಡ್‌ನಿಂದ ನಾರ್ಮಲ್ ಸ್ಪೆಷಲ್ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ ಎಂದು ಯುವತಿ ಪೋಷಕರು ತಿಳಿಸಿದ್ದಾರೆ. ದೇಹದ ಮೇಲೆ ಆಸಿಡ್ ಬಿದ್ದ ಜಾಗದಲ್ಲಿ ಒಂದು ಹಂತದ ಪ್ಲಾಸ್ಟಿಕ್ ಸರ್ಜರಿ ಮುಕ್ತಾಯವಾಗಿದೆ. ಫಿಸಿಯೋಥೆರಪಿಸ್ಟ್ ಸ್ಪೆಷಲಿಸ್ಟ್ ಸಿಬ್ಬಂದಿಯಿಂದ ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಂದೇ ಡೈರಕ್ಷನ್‌ನಲ್ಲಿ ಮಲಗ್ತಿದ್ದ ಯುವತಿಗೆ ಕೈ ಕಾಲು ಆಡಿಸಲು, ಕುಳಿತುಕೊಳ್ಳಲು ಸಹಕಾರಿಯಾಗಿದೆ. 

ಸದ್ಯ ಯುವತಿಗೆ ಪೈಪ್ ಮೂಲಕ ಲಘು ನೀರಿನಾಂಶದ ಆಹಾರ ವೈದ್ಯರು ನೀಡುತ್ತಿದ್ದಾರೆ. ಯುವತಿಗೆ ಆರೋಗ್ಯದಲ್ಲಿ ಸುಧಾರಣೆ ಹಿನ್ನಲೆ ತಿಂಡಿ ಊಟ ನೀಡಲಾಗ್ತಿದೆ. ಸರ್ಜರಿ ಸ್ಥಳದಲ್ಲಿ ಇನ್ಫೆಕ್ಷನ್ ಆಗ್ತಿದ್ದ ಹಿನ್ನಲೆ ಚಿಕಿತ್ಸೆ ಮುಂದುವರೆದಿದೆ. ಇನ್ನೆರಡು ತಿಂಗಳು ಚಿಕಿತ್ಸೆ ಮುಂದುವರೆಸಬೇಕೆಂದು ಸೆಂಟ್ ಜಾನ್ಸ್  ವೈದ್ಯರು ಮಾಹಿತಿ ನೀಡಿದ್ದಾರೆ. ದಿನದಿಂದ ದಿನಕ್ಕೆ ಮಗಳ ಆರೋಗ್ಯದಲ್ಲಿ ಸುಧಾರಣೆ ಹಿನ್ನಲೆ ಪೋಷಕರಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಆರೋಪಿ ನಾಗೇಶ್ ಆ್ಯಸಿಡ್ ಹಾಕಿ ಪರಾರಿಯಾಗಿದ್ದ. ಬಳಿಕ ಕಾಮಾಕ್ಷಿಪಾಳ್ಯ ಪೊಲೀಸ್ರು ಆರೋಪಿ ಬಂಧಿಸಿದ್ದರು.

ಆ್ಯಸಿಡ್‌ ದಾಳಿ ಸಂತ್ರಸ್ತೆಗೆ ರಕ್ತದಾನ ಮಾಡಿ ಪೊಲೀಸರ ಮಾನವೀಯತೆ..!

ಏನಿದು ಪ್ರಕರಣ?: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಪ್ರೀತಿಸಿದ ಹುಡುಗಿಯ ಮೇಲೆ ಆಸಿಡ್‌ ದಾಳಿ ಮಾಡಿರುವ ದುರಂತ ಘಟನೆ ಬೆಂಗಳೂರಿನ ಸುಂಕದಕಟ್ಟೆಯಲ್ಲಿ ನಡೆದಿತ್ತು. 23 ವರ್ಷದ ಸಂತ್ರಸ್ಥೆಯ ಮೇಲೆ ಸುಂಕದಕಟ್ಟರ ಮುತ್ತೂಟು ಫಿನ್‌ಕಾರ್ಪ್‌ ಬಳಿ ಹುಚ್ಚು ಪ್ರೇಮಿ ನಾಗೇಶ್‌ ಆಸಿಡ್‌ ದಾಳಿ ನಡೆಸಿದ್ದ. ಮಾಹಿತಿಯ ಪ್ರಕಾರ ನಾಗೇಶ್‌ ಯುವತಿಯನ್ನು ಹಲವು ದಿನಗಳಿಂದ ಪ್ರೀತಿಸುವಂತೆ ಪೀಡಿಸುತ್ತಿದ್ದ. ಎಲ್ಲಿ ಹೋದರೂ ಹಿಂದೆ ಹಿಂದೆಯೇ ಸುತ್ತುತ್ತಿದ್ದ. ಹುಡುಗಿ ತನಗೆ ಇಷ್ಟವಿಲ್ಲ ಎಂದು ಎಷ್ಟು ಬಾರಿ ಹೇಳಿದರೂ ಕೇಳಲು ನಾಗೇಶ್‌ ಸಿದ್ಧನಿರಲಿಲ್ಲ. ಕಡೆಯಬಾರಿಗೆ ಪ್ರೀತಿಸುತ್ತೀಯಾ ಇಲ್ಲವಾ ಎಂದು ಧಮಕಿ ಹಾಕಿದ್ದಾನೆ.

ಹುಡುಗಿ ನಿರಾಕರಿಸಿದಾಗ ಆಸಿಡ್‌ ಎರಚಿದ್ದಾನೆ ಎಂದು ಸ್ಥಳೀಯ ಮೂಲಗಳು ಮಾಹಿತಿ ನೀಡಿವೆ. ಯುವತಿ ಇಂದು (ಗುರುವಾರ) ಬೆಳಗ್ಗೆ ಕಚೇರಿಗೆ ತೆರಳಲು ಮುತ್ತೂಟು ಫಿನ್‌ಕಾರ್ಪ್‌ ಬಳಿ ಹೋದಾಗ ವಿಕೃತ ಪ್ರೇಮಿ ನಾಗೇಶ್‌ ಈ ಕೃತ್ಯ ಎಸಗಿದ್ದ. ಸದ್ಯ ಯುವತಿಯನ್ನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಇಂದು ಸಂತ್ರಸ್ಥೆ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾಳೆ. ಘಟನೆಯ ಬಳಿಕ ನಾಗೇಶ್‌ ತಲೆಮರೆಸಿಕೊಂಡಿದ್ದ. ಆತನ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಹಲವು ವಿಶೇಷ ತಂಡಗಳನ್ನು ಸಹ ರಚಿಸಲಾಗಿತ್ತು. ಈ ಸಂಬಂಧ ಈಗಾಗಲೇ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

Bengaluru Acid Attack: ನನ್ನ ಹಾಗೆ ಆತನೂ ನರಳಬೇಕು: ಸಂತ್ರಸ್ತೆಯ ಆಕ್ರೋಶ

ಅಣ್ಣ ಅಂದಿದ್ದೇ ತಪ್ಪಾಯ್ತು: ಸಂತ್ರಸ್ಥ ಯುವತಿ ಮತ್ತು ನಾಗೇಶ್‌ಗೆ ಪರಿಚಯವೇನೋ ಇತ್ತು. ಆತ ಯಾವಾಗಲೂ ಪ್ರೀತಿಸು ಅನ್ನುತ್ತಿದ್ದ, ಆದರೆ ಈಕೆ ನೀನು ನನ್ನ ಅಣ್ಣನಂತೆ ಅಂದುಬಿಟ್ಟಿದ್ದಳು. ಇದೇ ಕಾರಣಕ್ಕೆ ಅವನ ಕೋಪ ಹೆಚ್ಚಾಗಿತ್ತು. ಯುವತಿ ಹೆಗ್ಗನಹಳ್ಳಿ ನಿವಾಸಿ. ಅವರ ಮನೆಯ ಪಕ್ಕದಲ್ಲೇ ನಾಗೇಶ್‌ ಕೂಡ ಬಾಡಿಗೆ ಮನೆಯಲ್ಲಿದ್ದ. ಹುಡುಗಿ ಎಂ ಕಾಂ ವಿದ್ಯಾಭ್ಯಾಸ ಮುಗಿಸಿ ಮುತ್ತೂಟು ಫಿನ್‌ಕಾರ್ಪ್‌ ಸೇರಿಕೊಂಡಿದ್ದಳು. 9 ತಿಂಗಳಿಂದ ಹಿಂದಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದಳು. 

PREV
Read more Articles on
click me!

Recommended Stories

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ರೆನಾಲ್ಟ್ ಡಸ್ಟರ್ ಕಾರು!
ಕೇಂದ್ರ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ: ಸಂಸದ ಯದುವೀರ್