ಬೆಂಗಳೂರಿನಲ್ಲಿ 2.79 ಲಕ್ಷಕ್ಕೆ ಕುಸಿತಗೊಂಡ ಬೀದಿ ನಾಯಿಗಳ ಸಂಖ್ಯೆ: ಸಮೀಕ್ಷಾ ವರದಿ ಬಿಡುಗಡೆ ಮಾಡಿದ ಬಿಬಿಎಂಪಿ

By Sathish Kumar KHFirst Published Oct 4, 2023, 1:22 PM IST
Highlights

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿ ನಾಯಿಗಳ ಸಮೀಕ್ಷಾ ವರದಿಯನ್ನು ಬಿಬಿಎಂಪಿ ಬಿಡುಗಡೆ ಮಾಡಿದೆ. 2.79 ಲಕ್ಷ ಬೀದಿ ನಾಯಿಗಳಿವೆ.

ಬೆಂಗಳೂರು (ಅ.04): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಸಮೀಕ್ಷೆ ನಡೆಸಲಾಗಿದ್ದು 2,79,335 ಬೀದಿ ನಾಯಿಗಳ ವರದಿಯನ್ನು ಪಾಲಿಕೆ ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತ ಡಾ. ತ್ರಿಲೋಕ್ ಚಂದ್ರ ಬಿಡುಗಡೆ ಮಾಡಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 08 ವಲಯಗಳಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಮತ್ತು ಆಂಟಿರೇಬೀಸ್ ಲಸಿಕಾ ಕರ‍್ಯಕ್ರಮದ ಯಶಸ್ವಿ ಅನುಷ್ಟಾನದ ಬಗ್ಗೆ ವಸ್ತುನಿಷ್ಠ ಮಾಹಿತಿಯನ್ನು ಪಡೆಯಲು ಹಾಗೂ ಬೀದಿನಾಯಿಗಳ ಹಾವಳಿ ಹಾಗೂ ಅವುಗಳ ನಿಯಂತ್ರಣಕ್ಕೆ ಸೂಕ್ತ ಯೋಜನೆಗಳನ್ನು ರೂಪಿಸಲು NAPRE ಶಿಫಾರಸ್ಸು ಮಾಡಿರುವ Sight–Resight ವಿಧಾನವನ್ನು ಅಳವಡಿಸಿಕೊಂಡು ಬೀದಿನಾಯಿಗಳ ಸಮೀಕ್ಷೆಯನ್ನು ದಿನಾಂಕ:11/07/2023 ರಿಂದ 02/08/2023ರವರೆಗೆ ಕೈಗೊಳ್ಳಲಾಗಿರುತ್ತದೆ.

ಬೀದಿ ನಾಯಿ ಸಮೀಕ್ಷೆಯನ್ನು ICAR-NIVEDI, WVS(Mission Rabies)ಯ ಪ್ರಿನಿಪಾಲ್ ಸೈಂಟಿಸ್ಟ್(BIOSTATISTICS) ಡಾ. ಕೆ.ಪಿ.ಸುರೇಶ್ ಸಂಸ್ಥೆ, ಬಿಬಿಎಂಪಿ ಪಶುಪಾಲನಾ ವಿಭಾಗದ ಅಧಿಕಾರಿಗಳು-ಸಿಬ್ಬಂದಿಯವರು, ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆ ಬೆಂಗಳೂರು ನಗರ ಜಿಲ್ಲೆಯ ಅರೆತಾಂತ್ರಿಕ ಸಿಬ್ಬಂದಿಯವರ (ಒಟ್ಟು 100 ಸಮೀಕ್ಷೆದಾರರು ಹಾಗೂ 15 ಮೇಲ್ವಿಚಾರಕರು) ಒಟ್ಟು 50 ತಂಡಗಳ ಸಹಯೋಗದೊಂದಿಗೆ ಒಟ್ಟು 12 ದಿನಗಳಲ್ಲಿ ಬೀದಿನಾಯಿಗಳ ಸಮೀಕ್ಷೆಯನ್ನು ಕೈಗೊಳ್ಳಲಾಗಿರುತ್ತದೆ.

Bengaluru ಬಿಬಿಎಂಪಿಯಲ್ಲಿ 225 ವಾರ್ಡ್‌ ರಚಿಸಿದ ಸರ್ಕಾರ: ನಿಮ್ಮ ವಾರ್ಡ್‌ ಯಾವುದು?

ಬಿಬಿಎಂಪಿಯ 4 ವಿಭಾಗಗಳಾದ ವಸತಿ ಪ್ರದೇಶ, ಕೊಳಚೆ ಪ್ರದೇಶ, ವಾಣಿಜ್ಯ ಪ್ರದೇಶ ಹಾಗೂ ಕೆರೆಗಳನ್ನು 0.5 ಚ.ಕಿ.ಮೀ ವ್ಯಾಪ್ತಿಯ 6850 ಮೈಕ್ರೋಜೋನ್‌ಗಳನ್ನಾಗಿ ವಿಂಗಡಣೆ ಮಾಡಿದ್ದು, ಅದರಲ್ಲಿ ಶೇ.20ರಷ್ಟು ರ‍್ಯಾಂಡಂ ಸ್ಯಾಂಪಲ್‌ಗಳನ್ನು ಅಂದರೆ 1360 ಮೈಕ್ರೋಜೋನ್‌ಗಳನ್ನು ಸಮೀಕ್ಷೆ ಮಾಡಲು ಆಯ್ಕೆ ಮಾಡಲಾಗಿರುತ್ತದೆ. ಬೀದಿ ನಾಯಿ ಸಮೀಕ್ಷೆಯನ್ನು ಕ್ರಮಬದ್ಧವಾಗಿ ವ್ಯವಸ್ಥಿತವಾಗಿ ವಾರ್ಡ್ ವಾರು 50 ತಂಡಗಳ ಸಹಯೋಗದೊಂದಿಗೆ ದಿನಾಂಕ:11/07/2023 ರಿಂದ 02/08/2023ರವರೆಗೆ ನಿರ್ವಹಿಸಲಾಗಿರುತ್ತದೆ. 

ಈ ಬಾರಿ ಕೈಗೊಂಡಿರುವ ಸಮೀಕ್ಷೆಯಲ್ಲಿ ಪಾಲಿಕೆಯ 08 ವಲಯಗಳಲ್ಲಿ ಒಟ್ಟು 279335 ಬೀದಿನಾಯಿಗಳು ಕಂಡುಬಂದಿರುತ್ತದೆ. 2019 ನೇ ಸಾಲಿನ ಬೀದಿನಾಯಿಗಳ ಸಮೀಕ್ಷೆಯಲ್ಲಿ 3.10 ಲಕ್ಷ ಬೀದಿನಾಯಿಗಳು ಇರುವುದಾಗಿ ಮತ್ತು ಶೇಕಡ 51.16ರಷ್ಟು ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆಯಾಗಿರುವುದಾಗಿ ಅಂದಾಜಿಸಲಾಗಿತ್ತು. ಹಾಲಿ ಕೈಗೊಂಡಿರುವ ಸಮೀಕ್ಷೆಯಲ್ಲಿ ಒಟ್ಟು ಶೇಕಡ 71.85 ರಷ್ಟು ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆಯಾಗಿದ್ದು, ಒಟ್ಟಾರೆಯಾಗಿ ಶೇಕಡ 20 ರಷ್ಟು ಸಂತಾನಹರಣ ಶಸ್ತ್ರ ಚಿಕಿತ್ಸೆ ಪ್ರಮಾಣ ಹೆಚ್ಚಳವಾಗಿರುತ್ತದೆ ಹಾಗೂ ಬೀದಿನಾಯಿ ಮರಿಗಳ ಸಂಖ್ಯೆಯು ಕಡಿಮೆಯಾಗಿರುತ್ತದೆ.

ಪ್ರಸ್ತುತ ಸಾಲಿನ ಸಮೀಕ್ಷೆಯ ವರದಿಯಂತೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇಕಡ 10 ರಷ್ಟು ಬೀದಿನಾಯಿಗಳ ಸಂಖ್ಯೆ ಕಡಿಮೆಯಾಗಿರುತ್ತದೆ. ಪಾಲಿಕೆ ವ್ಯಾಪ್ತಿಯಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಕರ‍್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವುದರಿಂದ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸಿರುವುದರಿಂದ ಬೀದಿನಾಯಿಗಳ ಸಂಖ್ಯೆಯು ಇಳಿಕೆಯಾಗಿರುತ್ತದೆ. ಸದರಿ ಬೀದಿನಾಯಿಗಳ ಸಮೀಕ್ಷೆ ಮುಂದಿನ ದಿನಗಳಲ್ಲಿ ಪಾಲಿಕೆ 08 ವಲಯಗಳಲ್ಲಿ/ವಾರ್ಡ್ ಗಳಲ್ಲಿ ಬೀದಿನಾಯಿ ನಿಯಂತ್ರಣ ಮತ್ತು ಅವುಗಳಿಗೆ ಸಂಬಂದಿತ ಸಮಸ್ಯೆಗಳನ್ನು ಸಂದರ್ಭಕ್ಕನುಗುಣವಾಗಿ ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ಯೋಜನೆಗಳನ್ನು ನೀತಿಗಳನ್ನು ರೂಪಿಸಲು ಸಹಕಾರಿಯಾಗುತ್ತದೆ.

ಪರೀಕ್ಷೆಯಲ್ಲಿ ನಾನು ನಂದಿನಿ ಬೆಂಗಳೂರಿಗೆ ಬಂದೀನಿ ಹಾಡು ಬರೆದ ವಿದ್ಯಾರ್ಥಿ: ಫುಲ್‌ ಮಾರ್ಕ್ಸ್‌ ಕೊಡಬೇಕೆಂದ ನೆಟ್ಟಿಗರು!

ವಲಯವಾರು ಹಾಗೂ ಬೀದಿ ನಾಯಿಗಳ ಸಂಖ್ಯೆ
1. ಪೂರ್ವ 37,685
2. ಪಶ್ಚಿಮ 22,025
3. ದಕ್ಷಿಣ 23,241
4. ದಾಸರಹಳ್ಳಿ 21,221
5. ಆರ್.ಆರ್.ನಗರ 41,266
6. ಬೊಮ್ಮನಹಳ್ಳಿ 39,183
7. ಯಲಹಂಕ 36,343
8. ಮಹದೇವಪುರ 58,371
ಒಟ್ಟು 2,79,335

click me!