ಭಾನುವಾರ ಬೆಳಗ್ಗೆ 7 ಗಂಟೆಗೆ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆ ವ್ಯತ್ಯಯ!

Published : Jul 04, 2025, 07:48 PM IST
Namma metro

ಸಾರಾಂಶ

ಜುಲೈ 06, 2025 ರಂದು ಬೆಳಿಗ್ಗೆ 7:00 ರಿಂದ 8:00 ರವರೆಗೆ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ. ನಿರ್ವಹಣಾ ಕಾರ್ಯಗಳಿಂದಾಗಿ ಈ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರು ಪ್ರಯಾಣವನ್ನು ಅದಕ್ಕೆ ತಕ್ಕಂತೆ ಯೋಜಿಸಿಕೊಳ್ಳಬೇಕು.

ಬೆಂಗಳೂರು (ಜು.04): ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಆರ್‌ಸಿಎಲ್) ನಿಗದಿತ ನಿರ್ವಹಣಾ ಕಾಮಗಾರಿಗಾಗಿ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಡುವಿನ ನೇರಳೆ ಮಾರ್ಗದಲ್ಲಿ ಜುಲೈ 06, 2025 ರಂದು ಭಾನುವಾರ ಬೆಳಿಗ್ಗೆ 7:00 ರಿಂದ 8:00ರ ಒಂದು ಗಂಟೆಯವರೆಗೆ ಮೆಟ್ರೋ ಸೇವೆಗಳಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ.

ಭಾನುವಾರ ಬೆಳಗ್ಗೆ 7 ರಿಂದ 8 ಗಂಟೆವರೆಗೆ ಒಂದು ಗಂಟೆಯ ಅವಧಿಗೆ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವಿನ ನೇರಳೆ ಮಾರ್ಗದಲ್ಲಿ ಅಗತ್ಯ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಿದೆ. ಈ ಕಾಮಗಾರಿಗಳನ್ನು ನಿರ್ವಹಿಸಲು, ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ. ಈ ಮಾರ್ಗದಲ್ಲಿ ಬೆಳಗ್ಗೆ 8 ಗಂಟೆ ನಂತರ ರಿಂದ ಸಾಮಾನ್ಯ ಸೇವೆಗಳನ್ನು ಪುನರಾರಂಭಿಸುತ್ತದೆ.

ಇತರ ಎಲ್ಲಾ ಮಾರ್ಗಗಳಲ್ಲಿ ಮೆಟ್ರೋ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸಲಿದ್ದು, ಚಲ್ಲಘಟ್ಟದಿಂದ ಇಂದಿರಾನಗರ, ಬೈಯಪ್ಪನಹಳ್ಳಿಯಿಂದ ವೈಟ್‌ ಫೀಲ್ಡ್ (ಕಾಡುಗೋಡಿ), ಮತ್ತು ಮಾದಾವರದಿಂದ ರೇಷ್ಮೆ ಸಂಸ್ಥೆ ವರೆಗಿನ ಸೇವೆಗಳು ಬೆಳಗ್ಗೆ 7 ಗಂಟೆಯಿಂದ ನಿಗದಿತ ಸಮಯದಂತೆ ಕಾರ್ಯನಿರ್ವಹಿಸಲಿದೆ. ಪ್ರಯಾಣಿಕರು ಈ ತಾತ್ಕಾಲಿಕ ಬದಲಾವಣೆಯನ್ನು ಗಮನಿಸಿ ಅದಕ್ಕೆ ಅನುಗುಣವಾಗಿ ತಮ್ಮ ಪ್ರಯಾಣವನ್ನು ಯೋಜಿಸುವಂತೆ ವಿನಂತಿಸಲಾಗಿದೆ. ಇದರಿಂದ ಉಂಟಾಗುವ ಅನಾನುಕೂಲತೆಗೆ ಬಿಎಂಆರ್‌ಸಿಎಲ್ ವಿಷಾದಿಸುತ್ತದೆ ಮತ್ತು ಸಾರ್ವಜನಿಕ ಸಹಕಾರವನ್ನು ಕೋರುತ್ತದೆ.

PREV
Read more Articles on
click me!

Recommended Stories

ಹಿಂದುಗಳು ಜಾತಿ, ಮತಭೇದ ಮರೆತು ಒಂದಾಗಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ
ಮಲೆ ಮಹದೇಶ್ವರ ಬೆಟ್ಟದಲ್ಲಿ ನೀರಿನ ಸಂಕಷ್ಟ: ಅರಣ್ಯ ಇಲಾಖೆಯಿಂದ ವನ್ಯಜೀವಿಗಳಿಗೆ ಟ್ಯಾಂಕರ್ ನೀರು