ಬೆಂಗಳೂರು (ಆ.10): ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ 19 ಸೋಂಕಿನ ಪ್ರಮಾಣ ತಗ್ಗಿಸಲು ಸ್ವಾತಂತ್ರೊತ್ಸವ ದಿನಾಚರಣೆ ನಂತರ ವೈದ್ಯರ ನಡೆ ಸೋಂಕಿತರ ಮನೆ ಕಡೆ ವಿನೂತನ ಕಾರ್ಯಕ್ರಮ ಜಾರಿಗೆ ಬಿಬಿಎಂಪಿ ಮುಂದಾಗಿದೆ.
ನಗರದಲ್ಲಿ ಕೋವಿಡ್ ಸೋಂಕನ್ನು ಪ್ರಾರಂಭಿಕ ಹಂತದಲ್ಲಿಯೇ ನಿಯಂತ್ರಿಸುವ ನಿಟ್ಟಿನಲ್ಲಿ ಅ.16ರಿಂದ ಪಾಲಿಕೆ ವ್ಯಾಪ್ತಿಯಲ್ಲಿರುವ ಪ್ರತಿಯೊಂದು ಮನೆಗೂ ವೈದ್ಯರ ತಂಡವನ್ನು ಕಳುಹಿಸಿ ಆರೋಗ್ಯ ತಪಾಸಣೆ ನಡೆಸುವ ವಿನೂತನ ಯೋಜನೆ ಜಾರಿ ಗೊಳಿಸಲಾಗುತ್ತಿದೆ. ಈ ಸಂಬಂಧ ಪ್ರಾಯೋಗಿಕವಾಗಿ 108 ತಂಡಗಳನ್ನು ರಚಿಸಿದ್ದು ಈ ತಂಡಗಳನ್ನು ಮನೆ ಮನೆಗೆ ತಪಾಸಣೆಗೆ ಒಳಪಡಿಸಲು ಯೋಜಿಸಲಾಗಿದೆ.
undefined
ಕೋವಿಡ್ ಗುಣಮುಖರಲ್ಲಿ ಕ್ಷಯ ಪತ್ತೆಗೆ ಅಭಿಯಾನ
ಸೋಮವಾರ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ನಡೆದ ಸಭೆಯ ಬಳಿಕ ಕಂದಾಯ ಸಚಿವ ಅರ್ ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡಿದರು. ಪಾಲಿಕೆ ವ್ಯಕ್ತಿಯ ಬೊಮ್ಮನಹಲ್ಳಿ ಮಹದೇವಪುರ ಹಾಗು ಪೂರ್ವ ವಲಯ ಯಲಹಂಕ ವಿಧಾನ ಸಭಾ ಕ್ಷೇತ್ರಗಳಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳಿವೆ. ಆದ್ದರಿಂದ ಪಾಲಿಕೆಯಿಂದ ಈಗಿನಿಂದಲೇ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಪೈಕಿ ಪ್ರಾಯೋಗಿಕವಾಗಿ ಪ್ರತಿ ವಿಧಾನಸಭಾ ಕ್ಷೇತ್ರದ 2 ವಾರ್ಡ್‌ಗಳಲ್ಲಿ ಮನೆ ಮನೆಗೆ ವೈದ್ಯರ ತಂಡವನ್ನು ಕಳುಹಿಸಿ ಆರೋಗ್ಯ ತಪಾಸಣೆ ನಡೆಸಲಾಗುವುದು. ಅದಕ್ಕಾಗಿ ಹೆಚ್ಚುವರಿ ಯಾಗಿ ವೈದ್ಯರನ್ನು ನಿಯೋಜನೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಮನೆಗೆ ಭೇಟಿ ನೀಡುವ ವೇಳೆ ಏನೇನೋ ಪ್ರಶ್ನೆಗಳು ಕೇಳಹುದು ಎಂಬ ಪ್ರಶ್ನಾ ಪಟ್ಟಿ ಸಿದ್ಧ ಪಡಿಸಿಕೊಂಡು ಎಲ್ಲ ಮನೆಯಲ್ಲಿ ಸಂಗ್ರಹಿಸುವ ಮಾಹಿತಿಯನ್ನು ಶಾಶ್ವತವಾಗಿಡುವ ನಿಟ್ಟಿನಲ್ಲಿ ತಂತ್ರಾಂಶ ರೂಪಿಸಲು ಸಿದ್ಧತೆ ನಡೆಸಿದ್ದೇವೆ. ಜೊತೆಗೆ ನಾಗರಿಕರಲ್ಲಿ ಅರಿವು ಮೂಡಿಸುವ ಕರಪತ್ರ ನೀಡಲಾಗುವುದು. ಮನೆಗೆ ಭೇಟಿ ನೀಡುವ ವೇಳೆ ಲಸಿಕೆ ಪಡೆದಿರುವ ಬಗ್ಗೆ ಖಾತರಿ ಮತ್ತು ಸೋಂಕು ಲಕ್ಷಣಗಳಿದ್ದರೆ ಪರೀಕ್ಷೆ ನಡೆಸಿರುವ ಕುರಿತು ಮತ್ತು ಯಾವುದಾದರೂ ಕಾಯಿಲೆಗಳು ಇವೆಯೇ ಎಂಬುದು ಸೇರಿದಂತೆ ಇನ್ನಿತರೆ ಮಾಹಿತಿ ಇರಲಿದೆ.
ಇನ್ನು ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚು ಪ್ರಕರಣಗಳು ಕಂಡು ಬಂದ ಹಿನ್ನೆಲೆ ಅಪಾರ್ಟ್‌ಮೆಮಟ್ ಜಿಮ್, ಈಜುಕೊಳ ನಿರ್ಬಂಧ ಮಾಡಲಾಗಿದೆ.