ಬೆಂಗಳೂರಿನ ಜನರ ನಿದ್ದೆಗೆಡಿಸಿದ್ದ ಚಿರತೆ ಮೂರು ದಿನಗಳ ಕಾರ್ಯಾಚರಣೆ ಬಳಿಕ ಸೆರೆ

By Sathish Kumar KH  |  First Published Nov 1, 2023, 2:57 PM IST

ಬೊಮ್ಮನಹಳ್ಳಿ ಸಮೀಪದ ಕೂಡ್ಲುಗೇಟ್‌ನಲ್ಲಿ ಕಾಣಿಸಿಕೊಂಡ ಚಿರತೆಯನ್ನು ಸತತ ಮೂರು ದಿನ ಕಾರ್ಯಾಚರಣೆ ನಡೆಸಿದ ನಂತರ ಸೆರೆ ಹಿಡಿಯಲಾಗಿದೆ.


ಬೆಂಗಳೂರು (ನ.01): ಬೊಮ್ಮನಹಳ್ಳಿ ಸಮೀಪದ ಕೂಡ್ಲುಗೇಟ್‌ನಲ್ಲಿ ಕಾಣಿಸಿಕೊಂಡ ಚಿರತೆಯನ್ನು ಸೆರೆ ಹಿಡಿಯಲು ಸುಮಾರು 70 ಮಂದಿ ಅರಣ್ಯ ಇಲಾಖೆ ಅಧಿಕಾರಿಗಳು ಸತತ ಮೂರು ದಿನ ಕಾರ್ಯಾಚರಣೆ ನಡೆಸಿದ ನಂತರ ಸೆರೆಯಾಗಿದೆ. 

ಬೆಂಗಳೂರಿನ ಜನರನ್ನು ಕಳೆದ ಮೂರು ದಿನಗಳಿಂದ ನಿದ್ದೆಗೆಡಿಸಿದ ಚಿರತೆಯು ಬುಧವಾರ ಮಧ್ಯಾಹ್ನದ ವೇಳೆಗೆ ಸೆರೆ ಸಿಕ್ಕಿದೆ. ರಾತ್ರಿ ವೇಳೆ ಕಾಣಿಸಿಕೊಳ್ಳುವ ಚಿರತೆ ಹಗಲು ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಮಾಡುವ ವೇಳೆ ಸಿಗದೇ ತಪ್ಪಿಸಿಕೊಳ್ಳುತ್ತಿತ್ತು. ಲೆಪರ್ಡ್ಸ್ ಟಾಸ್ಕ್ ಫೋರ್ಸ್ ತಂಡ ಮತ್ತು ಥರ್ಮಲ್ ಡ್ರೋನ್ ಟೀಂ ಚಿರತೆಗಾಗಿ ತೀವ್ರ ಹುಡುಕಾಟ ನಡೆಸಿತ್ತು. ಆದರೆ ಎರಡು ದಿನವಾದರೂ ಚಿರತೆ ಪತ್ತೆಯಾಗದೆ ಇರುವುದು ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಾಗುವಂತೆ ಮಾಡಿತ್ತು. ಆದರೆ, ಮೂರು ದಿನಗಳ ನಂತರ ಈಗ ಚಿರತೆ ಸೆರೆಯಾಗಿದ್ದು, ಸ್ಥಳೀಯ ಜನರು ನಿಟ್ಟುಸಿರು ಬಿಡವಂತಾಗಿದೆ.

Tap to resize

Latest Videos

undefined

ಕಾಂಗ್ರೆಸ್‌ನಲ್ಲಿ ಮತ್ತೆ ಬಾಂಬ್ ಸಿಡಿಸಿದ ಸಚಿವ ರಾಜಣ್ಣ: ಡಿಕೆಶಿ ಸೇರಿ 2 ಡಜನ್‌ ಜನರು ಸಿಎಂ ಆಗಲು ಅರ್ಹರಿದ್ದಾರೆ!

ಬೊಮ್ಮನಹಳ್ಳಿ ಸಮೀಪದ ಕೂಡ್ಲು ಹೊಸಪಾಳ್ಯ ಸೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿರತೆ ಓಡಾಟ ನಡೆಸಿದ್ದು, ಸೋಮವಾರದಿಂದ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದರು. ಆದರೆ ಎಲ್ಲೂ ಚಿರತೆ ಕಂಡುಬಂದಿಲ್ಲ. ಕೂಡ್ಲು ಸಮೀಪದ ಕೃಷ್ಣಾರೆಡ್ಡಿ ಇಂಡಸ್ಟ್ರಿಯಲ್ ಲೇಔಟ್‌ನ ಪಾಳು ಬಿದ್ದ ಬೃಹತ್ ಕಟ್ಟಡವೊಂದರಲ್ಲಿ ಅಧಿಕಾರಿಗಳು ಮಂಗಳವಾರ ಕಾರ್ಯಾಚರಣೆ ನಡೆಸಿದ್ದರು. ಆದರೆ ಚಿರತೆ ಈ ಕಟ್ಟಡದಲ್ಲಿ ಇಲ್ಲ ಎಂದು ಖಚಿತವಾದ ನಂತರ, ಅಲ್ಲಿ ಬೋನ್‌ ಅಳವಡಿಸಿ ಬೇರೆಡೆ ಕಾರ್ಯಾಚರಣೆ ವರ್ಗಾಯಿಸಲಾಗಿತ್ತ. ಮಂಗಳವಾರವೂ ಕಾರ್ಯಾಚರಣೆ ವಿಫಲವಾದ ಕಾರಣ, ಅರಣ್ಯ ಇಲಾಖೆಯಿಂದ ಬುಧವಾರ ಕಾರ್ಯಾಚರಣೆ ಮುಂದುವರಿಸಲಾಗಿತ್ತು. ಇಂದು ಚಿರತೆ ಸೆರೆಯಾಗಿದ್ದು, ಅದನ್ನು ಬೋನಲ್ಲಿ ಇರಿಸಿಕೊಂಡು ಸ್ಥಳಾಂತರ ಮಾಡಲಾಗಿದೆ. 

ಪಶುವೈದ್ಯರ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದ ಚಿರತೆ: ಬೊಮ್ಮನಹಳ್ಳಿ ಕೂಡ್ಲು ಗೇಟ್‌ ಬಳಿ ಬೀಡು ಬಿಟ್ಟಿದ್ದ ಚಿರತೆ ಪಶು ವೈದ್ಯರ ಮೇಲೆ ದಾಳಿ ನಡೆಸಿ ಪರಾರಿಯಾಗಿತ್ತು. ಬೊಮ್ಮನಹಳ್ಳಿ ಸಮೀಪದ ಕೃಷ್ಣಾ ರೆಡ್ಡಿ ಬಡಾವಣೆಯ ಪಾಳು ಬಿದ್ದ ಕಟ್ಟಡದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಚಿರತೆ ಸೆರೆ ಹಿಡಿಯಲು 45ಕ್ಕೂ ಹೆಚ್ಚು ತರಬೇತಿ ಪಡೆದ ಸಿಬ್ಬಂದಿಯನ್ನು ಕಳೆದ ಎರಡು ದಿನಗಳಿಂದ ಸ್ಥಳದಲ್ಲಿ ನಿಯೋಜಿಸಲಾಗಿದೆ. ಅರಣ್ಯಾಧಿಕಾರಿಗಳು ಡ್ರೋನ್ ಬಳಸಿ ಪ್ರಾಣಿಯನ್ನು ಪತ್ತೆ ಹಚ್ಚಲು ಬಲೆ ಬೀಸಲಾಗಿತ್ತು.

ಹೆಣ್ಣಿನಂತೆ ಅಳು, ರಕ್ಷಿಸುವಂತೆ ಮೊರೆ: ಪಕ್ಕದ ಮನೆಯವರು ನೀಡಿದ ದೂರು ಕೇಳಿ ಮನೆಗೆ ಬಂದ ಪೊಲೀಸರೇ ಶಾಕ್‌?

ಕಳೆದ 10 ತಿಂಗಳಲ್ಲು 500ಕ್ಕೂ ಅಧಿಕ ಚಿರತೆ ಹಾವಳಿ ದೂರುಗಳು ದಾಖಲು: ಜನವರಿ 2023 ರಲ್ಲಿ ಕರ್ನಾಟಕ ಅರಣ್ಯ ಇಲಾಖೆಯಿಂದ ರಚಿಸಲಾದ ಚಿರತೆ ಕಾರ್ಯಪಡೆ (ಎಲ್‌ಟಿಎಫ್) ಫೆಬ್ರವರಿಯಿಂದ ಚಿರತೆ ಹಾವಳಿಗೆ ಸಂಬಂಧಿಸಿದಂತೆ 500 ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಿದೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರಿನ ಟಿ ನರಸೀಪುರ ಪ್ರದೇಶದಲ್ಲಿ ಚಿರತೆ ದಾಳಿಗೆ ನಾಲ್ವರು ಬಲಿಯಾದ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆಯನ್ನು ರಚಿಸಲು ಅರಣ್ಯ ಇಲಾಖೆಗೆ ಸರ್ಕಾರ ಆದೇಶ ನೀಡಿತ್ತು.

click me!