Bengaluru Rains: ಮಳೆಯೆಂದು ಲಾರಿ ಕೆಳಗೆ ಕುಳಿತ್ತಿದ್ದವನ ಮೇಲೆಯೇ ಟ್ರಕ್‌ ಹರಿದು ಸಾವು

Published : Mar 22, 2022, 05:55 AM IST
Bengaluru Rains: ಮಳೆಯೆಂದು ಲಾರಿ ಕೆಳಗೆ ಕುಳಿತ್ತಿದ್ದವನ ಮೇಲೆಯೇ ಟ್ರಕ್‌ ಹರಿದು ಸಾವು

ಸಾರಾಂಶ

*  ಬೆಂಗಳೂರಿನ ವಿವೇಕನಗರದ 4ನೇ ಮುಖ್ಯರಸ್ತೆಯಲ್ಲಿ ನಡೆದ ಘಟನೆ *  ಲಾರಿ ಚಾಲಕನ ಬಂಧನ *  ಈ ಸಂಬಂಧ ಅಶೋಕನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು   

ಬೆಂಗಳೂರು(ಮಾ.22): ಮಳೆ ಸುರಿಯುತ್ತಿದ್ದ ಪರಿಣಾಮ ಲಾರಿ ಕೆಳಗೆ ಕುಳಿತಿದ್ದ ವ್ಯಕ್ತಿಯ ಮೇಲೆ ಲಾರಿ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಶೋಕನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಎಲ್‌.ಆರ್‌.ನಗರ ನಿವಾಸಿ ಇಮ್ಯಾನುವೆಲ್‌(40) ಮೃತ ದುರ್ದೈವಿ. ಭಾನುವಾರ ರಾತ್ರಿ ಕ್ರೇನ್‌ ಸ್ಥಳಾಂತರ ಮಾಡುವ ದೊಡ್ಡ ಲಾರಿಯನ್ನು ವಿವೇಕನಗರದ 4ನೇ ಮುಖ್ಯರಸ್ತೆಯಲ್ಲಿ ನಿಲುಗಡೆ ಮಾಡಲಾಗಿತ್ತು. ಈ ವೇಳೆ ಜೋರಾಗಿ ಮಳೆ ಬರುತ್ತಿದ್ದರಿಂದ ಇಮ್ಯಾನುವೆಲ್‌ ಲಾರಿಗೆ ಕೆಳಗೆ ಕುಳಿತಿದ್ದ. ಇದನ್ನು ಗಮನಿಸದ ಲಾರಿ ಚಾಲಕ ರಾತ್ರಿ 12 ಗಂಟೆ ಸುಮಾರಿಗೆ ಲಾರಿ ಚಲಾಯಿಸಿದ್ದಾನೆ. ಈ ವೇಳೆ ಲಾರಿ ಕೆಳಗೆ ಆಶ್ರಯ ಪಡೆದಿದ್ದ ಇಮ್ಯಾನುವೆಲ್‌ ಮೇಲೆಯೇ ಚಕ್ರ ಹರಿದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬಿಸಿಲ ಬೇಗೆಯ ಮಧ್ಯೆ ವರುಣ ಸಿಂಚನ, ಮಲೆನಾಡಿನ ಕೆಲವು ಭಾಗಗಳಲ್ಲಿ ವರ್ಷದ ಮಳೆ

ಘಟನೆ ಸಂಬಂಧ ಲಾರಿ ಚಾಲಕ ತಮಿಳುನಾಡು ಮೂಲದ ಅಂಜುಮಣಿ ಎಂಬಾತನನ್ನು ಬಂಧಿಸಿ, ಲಾರಿಯನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಅಶೋಕನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಬಿಎಂಪಿ ಕಸದ ಲಾರಿ ಹರಿದು ಬಾಲಕಿ ಸಾವು

ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆ(Hebbal Flyover) ಸಮೀಪ ಬಿಬಿಎಂಪಿ(BBMP) ಕಸದ ಲಾರಿಯಿಂದ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ವಾರ್ಷಿಕ ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ(Student) ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಹೆಬ್ಬಾಳದ ಕುಂತಿ ಗ್ರಾಮ ‘ಸಿ’ ಬ್ಲಾಕ್‌ ನಿವಾಸಿ ಅಕ್ಷಯಾ(14) ಮೃತ(death) ದುರ್ದೈವಿ. ಗಂಭೀರವಾಗಿ ಗಾಯಗೊಂಡಿರುವ ಬೈಕ್‌ ಚಾಲಕ ವಿಕಾಸ್‌(42) ಹಾಗೂ ಪಾದಚಾರಿ ಸೌಮ್ಯ(28) ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಕಸದ ಲಾರಿ ಚಾಲಕ, ಚಿಕ್ಕಬಳ್ಳಾಪುರ ಮೂಲದ ಮಂಜುನಾಥ್‌ ಎಂಬಾತನನ್ನು ಬಂಧಿಸಲಾಗಿದೆ(Arrest).

ಜೀವಕ್ಕೆ ಮಾರಕವಾದ ಅಂಡರ್‌ಪಾಸ್‌:

ಬಿಎಂಟಿಸಿ ಹೆಣ್ಣೂ ಡಿಪೋದ ಚಾಲಕ ನರಸಿಂಹಮೂರ್ತಿ, ತಮ್ಮ ಪತ್ನಿ ಗೀತಾ ಹಾಗೂ ಮಕ್ಕಳ ಜತೆ ಹೆಬ್ಬಾಳದಲ್ಲಿ ನೆಲೆಸಿದ್ದಾರೆ. ಈ ದಂಪತಿಯ ಮೂವರ ಮಕ್ಕಳ ಪೈಕಿ ಪುತ್ರಿ ಅಕ್ಷಯಾ, ಸದಾಶಿವನಗರದ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಳು. ಪ್ರತಿದಿನ ಶಾಲೆಗೆ ಬಸ್ಸಿನಲ್ಲೇ ಆಕೆ ಹೋಗಿ ಬರುತ್ತಿದ್ದಳು. ಸೋಮವಾರ ಮಧ್ಯಾಹ್ನ ಪರೀಕ್ಷೆ ಮುಗಿಸಿಕೊಂಡು ತನ್ನ ಮೂವರು ಸಹಪಾಠಿಗಳ ಜತೆ ಆಕೆ ಮನೆಗೆ ತೆರಳುತ್ತಿದ್ದಳು. ಆಗ ಹೆಬ್ಬಾಳ ಪೊಲೀಸ್‌ ಠಾಣೆ ಮುಂದಿನ ಅಂಡರ್‌ ಪಾಸ್‌ ಸಮೀಪ ರಸ್ತೆ ದಾಟುವಾಗ ಆ ಬಾಲಕಿ ಪಾಲಿಗೆ ಬಿಬಿಎಂಪಿ ಕಸದ ಲಾರಿಯು ಯಮದೂತನಾಗಿ ಪರಿಣಮಿಸಿದೆ.

Mandya Accident: ಪಿಲ್ಲರ್‌ಗೆ ಡಿಕ್ಕಿ ಹೊಡೆದ ಟಿಪ್ಪರ್‌ಗೆ ಬೆಂಕಿ: ಡ್ರೈವರ್‌ ಸಜೀವ ದಹನ

ಭಾನುವಾರ ಮಳೆ ಸುರಿದ ಪರಿಣಾಮ ಅಂಡರ್‌ ಪಾಸ್‌ನಲ್ಲಿ ನೀರು ನಿಂತಿದ್ದು, ಸಾರ್ವಜನಿಕರು ರಸ್ತೆ ದಾಟಿಯೇ ಸಾಗುತ್ತಿದ್ದಾರೆ. ಅದೇ ರೀತಿ ಸೋಮವಾರ ಮಧ್ಯಾಹ್ನ 12.30ರ ಸುಮಾರಿಗೆ ಶಾಲೆ(School) ಮುಗಿಸಿ ಮನೆಗೆ ಹೊರಟ್ಟಿದ್ದ ಅಕ್ಷಯಾ ಹಾಗೂ ಆಕೆ ಸ್ನೇಹಿತೆಯರು, ಅಂಡರ್‌ಪಾಸ್‌ ಸಮೀಪ ರಸ್ತೆ ದಾಟುತ್ತಿದ್ದರು. ಆ ಸಮಯಕ್ಕೆ ಮೇಖ್ರಿ ಸರ್ಕಲ್‌ ಕಡೆಯಿಂದ ಅತಿವೇಗವಾಗಿ ಬಿಬಿಎಂಪಿ ಕಸದ ಲಾರಿಯನ್ನು ಚಲಾಯಿಸಿಕೊಂಡು ಬಂದ ಚಾಲಕ ಮಂಜುನಾಥ್‌, ರಸ್ತೆ ದಾಟುತ್ತಿದ್ದ ಮಕ್ಕಳನ್ನು ಕಂಡು ವಿಚಲಿತನಾಗಿದ್ದಾನೆ. ಆ ಮಕ್ಕಳ ರಕ್ಷಿಸುವ ಭರದಲ್ಲಿ ಎಡಕ್ಕೆ ಲಾರಿಯನ್ನು ತಿರುಗಿಸಿದ್ದಾನೆ. ಈ ಹಂತದಲ್ಲಿ ಲಾರಿಗೆ ವಿದ್ಯಾರ್ಥಿನಿ ಬೆನ್ನಿಗೆ ಹಾಕಿಕೊಂಡಿದ್ದ ಸ್ಕೂಲ್‌ ಬ್ಯಾಗ್‌ ಸಿಕ್ಕಿಕೊಂಡು ಒಂದು ಸುತ್ತು ತಿರುಗಿ ಅಕ್ಷಯಾ ಕೆಳಗೆ ಬಿದ್ದಿದ್ದಾಳೆ. ಕೆಳಗೆ ಬಿದ್ದ ಆಕೆ ಮೇಲೆ ಲಾರಿಯ ಮುಂದಿನ ಚಕ್ರ ಹರಿದಿದೆ. ವಿದ್ಯಾರ್ಥಿನಿಗೆ ಗುದ್ದಿದ ಬಳಿಕ ಮತ್ತೊಬ್ಬ ಪಾದಚಾರಿ(ಸೌಮ್ಯಾ) ಹಾಗೂ ಬೈಕ್‌ ಮತ್ತು ಕಾರಿಗೆ ಲಾರಿ ಡಿಕ್ಕಿಯಾಗಿ ನಿಂತಿದೆ. ಇದರಿಂದ ಬೈಕ್‌ ಚಾಲಕ ವಿಕಾಸ್‌ ಅವರಿಗೆ ಸಹ ಪೆಟ್ಟಾಗಿದೆ. ಕೂಡಲೇ ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ(Hospital) ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ಉತ್ತರ ವಿಭಾಗ (ಸಂಚಾರ) ಡಿಸಿಪಿ ಸವಿತಾ ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಮೃತ ವಿದ್ಯಾರ್ಥಿನಿ ತಾಯಿ ಗೀತಾ ದೂರು ಆಧರಿಸಿ ಕಸದ ಲಾರಿ ಚಾಲಕನನ್ನು ಆರ್‌.ಟಿ.ನಗರ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
 

PREV
Read more Articles on
click me!

Recommended Stories

ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ
ಹಿಂದೂ, ಧರ್ಮವೇ ಅಲ್ಲ, ಅದೊಂದು ಬೈಗುಳ ಶಬ್ದ : ಬಿ.ಜಿ ಕೋಳ್ಸೆ