ಒಂದೇ ಕಾರ್ಡಲ್ಲಿ ಮೆಟ್ರೋ, ಬಿಎಂಟಿಸಿ ಬಸಲ್ಲಿ ಸಂಚರಿಸಿ

Kannadaprabha News   | Asianet News
Published : Mar 09, 2021, 07:16 AM IST
ಒಂದೇ ಕಾರ್ಡಲ್ಲಿ ಮೆಟ್ರೋ, ಬಿಎಂಟಿಸಿ ಬಸಲ್ಲಿ ಸಂಚರಿಸಿ

ಸಾರಾಂಶ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ  ಭರಪೂರ ಯೋಜನೆಗಳನ್ನು ಘೋಷಿಸಿದ್ದಾರೆ. ಇನ್ಮುಂದೆ ಪ್ರಯಾಣಿಕರು ಬಿಎಂಟಿಸಿ ಹಾಗೂ ಮೆಟ್ರೋಗೆ ಒಂದೇ ಕಾರ್ಡ್ ಬಳಸಬಹುದಾಗಿದೆ. 

ಬೆಂಗಳೂರು (ಮಾ.09):  ಮುಂಬರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಸಾರಿಗೆ, ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಸೇರಿದಂತೆ ಸಮಗ್ರ ಬೆಂಗಳೂರಿನ ನವಚೈತನ್ಯಕ್ಕೆ ಪೂರಕವಾದ 7,795 ಕೋಟಿ ಮೊತ್ತದ ಭರಪೂರ ಯೋಜನೆಗಳನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರಸಕ್ತ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಬಜೆಟ್‌ನಲ್ಲಿ ಬೆಂಗಳೂರಿನಲ್ಲಿ ಸಾರಿಗೆ ವ್ಯವಸ್ಥೆ ಸುಧಾರಣೆ, ವಿಸ್ತರಣೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. 

ಕರ್ನಾಟಕ ಬಜೆಟ್ 2021: ನಿಮ್ಮ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ನೋಡಿ

ಮೆಟ್ರೋ ರೈಲು ಹಾಗೂ ಬಿಎಂಟಿಸಿ ಬಸ್‌ಗಳಲ್ಲಿ ಸಂಚಾರಕ್ಕೆ 2021ರ ಆಗಸ್ಟ್‌ ವೇಳೆಗೆ ‘ಒಂದು ರಾಷ್ಟ್ರ ಒಂದು ಕಾರ್ಡ್‌’ ವ್ಯವಸ್ಥೆಯನ್ನು ಅಳವಡಿಸಲಾಗುವುದು ಎಂದು ತಿಳಿಸಲಾಗಿದೆ. 

ಅಲ್ಲದೆ, ಬಿಎಂಟಿಸಿಯಲ್ಲಿ ಸ್ವಯಂಚಾಲಿತ ದರ ಸಂಗ್ರಹ ವ್ಯವಸ್ಥೆ (ಆಟೋಮ್ಯಾಟಿಕ್‌ ಫೇರ್‌ ಕಲೆಕ್ಷನ್‌ ಸಿಸ್ಟಮ್‌) ಅನುಷ್ಠಾನಗೊಳಿಸಲಾಗುವುದು ಎಂದು ಘೋಷಿಸಲಾಗಿದೆ. ಆದರೆ, ಈ ಯೋಜನೆಯ ಪೂರ್ಣ ವಿವರ ನೀಡಲಾಗಿಲ್ಲ.

PREV
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಜಾಸ್ತಿ ಬೇಡ ಎರಡೇ ಮಕ್ಕಳನ್ನಷ್ಟೇ ಮಾಡಿಕೊಳ್ಳಿ: ನವದಂಪತಿಗಳಿಗೆ ಸಿಎಂ ಸಲಹೆ