ಬೆಂಗಳೂರು ಮೆಟ್ರೋ ರೈಲು ಸಂಚಾರ ಸಮಯ ಬದಲಾವಣೆ; ಇಲ್ಲಿದೆ ಅಪ್ಡೇಟ್ ಮಾಹಿತಿ!

By Sathish Kumar KH  |  First Published Jan 10, 2025, 7:45 PM IST

ಬೆಂಗಳೂರು ಮೆಟ್ರೋ ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.


ಬೆಂಗಳೂರು (ಜ.10): ಕರ್ನಾಟಕದ ಏಕೈಕ ಮೆಟ್ರೋ ನಗರ ಬೆಂಗಳೂರಿನಲ್ಲಿ ಟ್ರಾಫಿಕ್‌ಮುಕ್ತವಾಗಿ ಸಂಚಾರ ಮಾಡುವುದಕ್ಕೆ ಇರುವ ಏಕೈಕ ಸಾರಿಗೆ ವ್ಯವಸ್ಥೆಯಾಗಿರುವ ಮೆಟ್ರೋ ರೈಲಿನ ಸೋಮವಾರದ ಸಂಚಾರದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಇನ್ನುಮುಂದೆ ಸೋಮವಾರ ದಿನದಂದು ಮಾತ್ರ ಮೆಟ್ರೋ ಸೇವೆ ಮುಂಜಾನೆ ಬೆಳಗ್ಗೆ 4.15ರಿಂಲದೇ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿ(ಬಿಎಂಆರ್‌ಸಿಎಲ್) ತಿಳಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್ ಸಂಸ್ಥೆಯು ಬೆಂಗಳೂರು ನಗರದಿಂದ ವಾರಾಂತ್ಯದಲ್ಲಿ ಊರಿಗೆ ತೆರಳಿ ನಂತರ ಸೋಮವಾರ ನಗರಕ್ಕೆ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ಸಿಟಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಕ್ಕೆ ಮುಂಜಾನೆ ಸಂಪರ್ಕವನ್ನು ಒದಗಿಸಬೇಕಿದೆ. ಈ ಹಿನ್ನೆಲೆಯಲ್ಲಿ, ನಮ್ಮ ಮೆಟ್ರೋ ನಿಗಮವು ಪ್ರತಿ ಸೋಮವಾರದಂದು ಮಾತ್ರ ಮೆಟ್ರೋ ಸೇವೆಯನ್ನು 2025ರ ಜ.13ರಿಂದ ಜಾರಿಗೆ ಬರುವಂತೆ ಬೆಳಗ್ಗೆ 4:15 ರಿಂದ ಪ್ರಾರಂಭಿಸಲಿದೆ. ಈಗ ಮುಂಜಾನೆ 5:00 ಮೆಟ್ರೋ ಸೇವೆ ಆರಂಭವಾಗುತ್ತಿದ್ದು, ಅದನ್ನು ಸೋಮವಾರ ಮಾತ್ರ 45 ನಿಮಿಷ ಮುಂಚಿತವಾಗಿ ಆರಂಭಿಸಲಾಗುತ್ತಿದೆ.

Tap to resize

Latest Videos

ಉಳಿದಂತೆ ವಾರದ ಉಳಿದ ಎಲ್ಲ ದಿನಗಳಂದು ಮೆಟ್ರೋ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಉಳಿದ ದಿನಗಳಲ್ಲಿ ಎಂದಿನಂತೆ ಬೆಳಗ್ಗೆ 5 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ. ಇನ್ನುಮುಂದೆ ಪ್ರತಿ ಸೋಮವಾರ ಬೆಳಗ್ಗೆ ಬೆಂಗಳೂರು ನಗರಕ್ಕೆ ಬರುವ ಸಾರ್ವಜನಿಕರು 4.15ರಿಂದಲೇ ಮೆಟ್ರೋ ಸೇವೆಯನ್ನು ಪಡೆದುಕೊಳ್ಳಬಹುದು. ಮೆಟ್ರೋ ಮಾರ್ಗದ ನಾಲ್ಕು ಡಿಪೋಗಳಿಂದ ಬೆಳಗ್ಗೆಯೇ ಮೆಟ್ರೋ ಸೇವೆ ಆರಂಭವಾಗಲಿದೆ. ಸಾರ್ವಜನಿಕರು ತಮ್ಮ ಸುಗಮ ಪ್ರಯಾಣಕ್ಕಾಗಿ ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಬಿಎಂಆರ್‌ಸಿಎಲ್ ಮನವಿ ಮಾಡಿದೆ.

click me!