ಕೇಂದ್ರ ಸಚಿವ ಗಡ್ಕರಿರವರು ವೈಮಾನಿಕ ಸಮೀಕ್ಷೆ ಜೊತೆಗೆ ಟೆಸ್ಟ್ ಡ್ರೈವ್ ಸಹ ಮಾಡಲಿದ್ದು, ಸಚಿವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇರಲಿದ್ದಾರೆ.
ರಾಮನಗರ(ಜ.04): ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯನ್ನು ಖುದ್ದಾಗಿ ಪರಿವೀಕ್ಷಣೆ ಮಾಡಲು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜ.5ರಂದು ರಾಮನಗರ ಸೇರಿದಂತೆ ಹಲವೆಡೆ ಭೇಟಿ ನೀಡಲಿದ್ದಾರೆ. ಕೇಂದ್ರ ಸಚಿವ ಗಡ್ಕರಿರವರು ವೈಮಾನಿಕ ಸಮೀಕ್ಷೆ ಜೊತೆಗೆ ಟೆಸ್ಟ್ ಡ್ರೈವ್ ಸಹ ಮಾಡಲಿದ್ದು, ಸಚಿವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇರಲಿದ್ದಾರೆ.
ನಿತಿನ್ ಗಡ್ಕರಿ ವೈಮಾನಿಕ ಸಮೀಕ್ಷೆ ನಡೆಸಲಿರುವ ಕಾರಣ ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿಯಲ್ಲಿ ಬಳಿ ಹೆಲಿ ಪ್ಯಾಡ್ ನಿರ್ಮಾಣ ಮಾಡಲಾಗಿದೆ. ಮೊದಲಿಗೆ ರಾಷ್ಟ್ರೀಯ ಹೆದ್ದಾರಿ ಕಚೇರಿಗೆ ಭೇಟಿ ನೀಡಲಿರುವ ಸಚಿವರು, ಆನಂತರ ಮಾಧ್ಯಮದವರನ್ನು ಉದ್ದೇಶಿಸಿ ಸುದ್ದಿಗೋಷ್ಠಿ ನಡೆಸುವರು. ಇದಾದ ಬಳಿಕ ಹೆದ್ದಾರಿಯನ್ನು ವೈಮಾನಿಕ ಸಮೀಕ್ಷೆ ಮಾಡಲಿದ್ದಾರೆ. ನಂತರ ಕಾರಿನಲ್ಲಿ ಸ್ವತಃ ಟೆಸ್ವ್ ಡ್ರೈವ್ ಮಾಡಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಎರಡು ಪ್ಯಾಕೇಜ್ ಗಳಲ್ಲಿ ನಡೆಯುತ್ತಿದ್ದು, ಮೊದಲ ಹಂತದಲ್ಲಿ ಕೆಂಗೇರಿ - ನಿಡಘಟ್ಟಹಾಗೂ ಎರಡನೇ ಹಂತದಲ್ಲಿ ನಿಡಘಟ್ಟ - ಮೈಸೂರುವರೆಗೆ ಕಾಮಗಾರಿ ನಡೆಯುತ್ತಿದೆ. ಈಗಾಗಲೇ ಮೊದಲ ಹಂತದ ನಿರ್ಮಾಣ ಕಾಮಗಾರಿಯು ಮುಕ್ತಾಯವಾಗಿದೆ.
ಉದ್ಯಮಿ ಆತ್ಮಹತ್ಯೆ: ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಎಫ್ಐಆರ್ ಪ್ರಶ್ನಿಸಿ ಪೊಲೀಸರಿಗೆ ಪ್ರಭಾವಿಗಳ ಕರೆ
ಮಾರ್ಚ್ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಹೆದ್ದಾರಿಯನ್ನು ಸಾರ್ವಜನಿಕರ ಉಪಯೋಗಕ್ಕೆ ಲೋಕಾರ್ಪಣೆ ಮಾಡಲಿದ್ದಾರೆ. ಕಳೆದ ಹಲವು ತಿಂಗಳ ಹಿಂದೆ ಸುರಿದ ಮಳೆಯಿಂದಾಗಿ ಬೆಂಗಳೂರು - ಮೈಸೂರು ನೂತನ ಹೆದ್ದಾರಿಯೂ ಸಾಕಷ್ಟುಸುದ್ದಿಯಾಗಿತ್ತು. ಮಳೆ ನೀರು ಸರಾಗವಾಗಿ ಹರಿದು ಹೋಗದೆ ಹೆದ್ದಾರಿಯೇ ಆವೃತವಾಗಿತ್ತು. ಸಮಸ್ಯೆ ಪರಿಹಾರದ ದೃಷ್ಟಿಯಿಂದಾಗಿ ಜಿಲ್ಲಾ ಪೊಲೀಸರು ವಾಹನ ಸಂಚಾರ ಮಾರ್ಗವನ್ನು ಬದಲಾಯಿಸಿದ್ದರು. ಜೊತೆಗೆ ಹೆದ್ದಾರಿಯಲ್ಲಿ ವಾಹನಗಳ ವೇಗಕ್ಕೆ ಮಿತಿ ಇಲ್ಲದಿರುವ ಕಾರಣ ಸಾಕಷ್ಟು ಅಪಘಾತಗಳು ಕೂಡ ಸಂಭವಿಸುತ್ತಿವೆ. ಇದೆಲ್ಲವುದರ ಬಗ್ಗೆಯೂ ಸಚಿವರು ಗಮನ ಹರಿಸಲಿದ್ದಾರೆ.