ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಚಾರ; ಒಂದೇ ದಿನ 9.17 ಲಕ್ಷ ಜನ ಪ್ರಯಾಣ!

By Sathish Kumar KH  |  First Published Aug 15, 2024, 11:48 AM IST

ಆಗಸ್ಟ್ 14 ರಂದು ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ 9.17 ಲಕ್ಷ ಪ್ರಯಾಣಿಕರು ಸಂಚಾರ ಮಾಡುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ. 


ಬೆಂಗಳೂರು (ಆ.15): ಬೆಂಗಳೂರಿನ ನಮ್ಮ ಮೆಟ್ರೋ ರೈಲಿನಲ್ಲಿ ಆ.14ರಂದು 9.17 ಲಕ್ಷ ಪ್ರಯಾಣಿಕರು ಸಂಚಾರ ಮಾಡುವ ಮೂಲಕ ನಮ್ಮ ಮೆಟ್ರೋ ಇತಿಹಾಸದಲ್ಲಿಯೇ ಹೊಸ ದಾಖಲೆಯನ್ನು ನಿರ್ಮಿಸಲಾಗಿದೆ. 

ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ಸಂಸ್ಥೆಯು ಅಧಿಕೃತವಾಗಿ ಮಾಹಿತಿ ನೀಡಿದೆ. ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿರುವ ಬಿಎಂಆರ್‌ಸಿಎಲ್ ಅಧಿಕಾರಿಗಳು 'ನಮ್ಮ ಮೆಟ್ರೋ ಪ್ರಯಾಣಿಕರ ಸಂಚಾರದಲ್ಲಿ ಹೊಸ ದಾಖಲೆ ಬರೆದಿದೆ. ಆಗಸ್ಟ್ 14, 2024 ರಂದು ಒಂದೇ ದಿನ  ನಮ್ಮ ಮೆಟ್ರೋ ದಲ್ಲಿ 9.17 ಲಕ್ಷ ಪ್ರಯಾಣಿಕರ  ಸಂಚಾರ ಮಾಡಿದ್ದಾರೆ. ಎಲ್ಲಾ ಪ್ರಯಾಣಿಕರಿಗೆ  ನಮ್ಮ ಮೆಟ್ರೋ ವತಿಯಿಂದ ಧನ್ಯವಾದಗಳು. ಮುಂದಿನ ದಿನಗಳಲ್ಲಿ ಇನ್ನು ಉತ್ತಮ  ಸೇವೆ ನೀಡುತ್ತೇವೆ. ಸದಾ ನಿಮ್ಮ ಸೇವೆಯಲ್ಲಿ ಇರುವ ನಮ್ಮ ಮೆಟ್ರೋ ಎಂದು ಟ್ವೀಟ್ ಮಾಡಿಕೊಂಡಿದ್ದಾರೆ.

Latest Videos

undefined

ನಮ್ಮ ಮೆಟ್ರೋ 12 ವರ್ಷದ ಬಳಿಕ ದಾಖಲೆಯ ರೈಡರ್‌ಶಿಪ್; ಒಂದೇ ದಿನ 8.26 ಲಕ್ಷ ಪ್ರಯಾಣಿಕರ ಸಂಚಾರ

ಕಳೆದ 2011ರಿಂದ ನಮ್ಮ ಮೆಟ್ರೋ ಸಂಚಾರ ಆರಂಭವಾದಾಗಿನಿಂದ ಈವರೆಗೆ ಪ್ರತಿನಿತ್ಯ ಸರಾಸರಿ 6.36 ಲಕ್ಷ ಜನರು ಸಂಚಾರ ಮಾಡುತ್ತಾರೆ. ಕಳೆದ 2024ರ ಆಗಸ್ಟ್6, 2024 ರಂದು ನಮ್ಮ ಮೆಟ್ರೋ ರೈಲಿನಲ್ಲಿ 8.26 ಲಕ್ಷ ಪ್ರಯಾಣಿಕರು ಸಂಚಾರ ಮಾಡಿ ಈವರೆಗಿನ ಅತ್ಯಧಿಕ ದಾಖಲೆ ನಿರ್ಮಿಸಲಾಗಿತ್ತು. ಆದರೆ, ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಆ.14ರಂದು ಊರಿನತ್ತ ಹೋಗುವವರ ಸಂಖ್ಯೆ ಹೆಚ್ಚಾಗಿದ್ದರಿಂದ ನಮ್ಮ ಮೆಟ್ರೋದಲ್ಲಿ ಸಂಚಾರ ಮಾಡಿದ ಪ್ರಯಾಣಿಕ ಸಂಖ್ಯೆಯೂ ಹೆಚ್ಚಾಗಿದೆ. ಜೊತೆಗೆ, ಲಾಲ್‌ಬಾಗ್‌ನಲ್ಲಿ ಆಯೋಜನೆ ಮಾಡಲಾಗಿರುವ ಫ್ಲವರ್ ಶೋ ಕಾರ್ಯಕ್ರಮ ವೀಕ್ಷಣೆಗೆ ಹೋಗುವವರ ಸಂಖ್ಯೆಯೂ ಅಧಿಕತವಾಗಿದೆ. ಈ ಹಿನ್ನೆಲೆಯಲ್ಲಿ ಆ.14ರಂದು ಬರೋಬ್ಬರಿ 9.17 ಲಕ್ಷ ಪ್ರಯಾಣಿಕರು ಸಂಚಾರ ಮಾಡುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ ಎಂದು ಬಿಎಂಆರ್‌ಸಿಎಲ್ ಸಿಬ್ಬಂದಿ ತಿಳಿಸಿದ್ದಾರೆ.

Independence Day: ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳ ಅಭಯ ನೀಡಿದ ಸಿಎಂ ಸಿದ್ದರಾಮಯ್ಯ!

ಪ್ರಯಾಣಿಕರು ಮತ್ತು ಬೋರ್ಡಿಂಗ್ ವಿವರ (ಆ.14ರಂತೆ): 
ಮೆಟ್ರೋ ಲೇನ್ -1 ಪ್ರಯಾಣಿಕರು - 4,43,343
ಮೆಟ್ರೋ ಲೇನ್ -2 ಪ್ರಯಾಣಿಕರು - ಸವಾರರು- 3,01,775
ಕೆಂಪೇಗೌಡ ನಿಲ್ದಾಣದಲ್ಲಿ ಟ್ರೇನ್ ಬದಲಿಸಿದ ಪ್ರಯಾಣಿಕರು - 1,72,247
ಒಟ್ಟಾರೆ ಮೆಟ್ರೋದಲ್ಲಿ ಪ್ರಯಾಣಿಕರ ಸಂಚಾರ - 9,17,365

ನಮ್ಮ ಮೆಟ್ರೋ ಪ್ರಯಾಣಿಕರ ಸಂಚಾರದಲ್ಲಿ ಹೊಸ ದಾಖಲೆ- ಆಗಸ್ಟ್ 14, 2024 ರಂದು ಒಂದೇ ದಿನ ನಮ್ಮ ಮೆಟ್ರೋ ದಲ್ಲಿ 9.17 ಲಕ್ಷ ಪ್ರಯಾಣಿಕರ ಸಂಚಾರ.
ಎಲ್ಲಾ ಪ್ರಯಾಣಿಕರಿಗೆ ನಮ್ಮ ಮೆಟ್ರೋದ ಧನ್ಯವಾದಗಳು. ಮುಂದಿನ ದಿನಗಳಲ್ಲಿ ಇನ್ನು ಉತ್ತಮ ಸೇವೆ ನೀಡುತ್ತೇವೆ. ಸದಾ ನಿಮ್ಮ ಸೇವೆಯಲ್ಲಿ ಇರುವ ನಮ್ಮ ಮೆಟ್ರೋ.

— ನಮ್ಮ ಮೆಟ್ರೋ (@OfficialBMRCL)
click me!