ಬೈಯಪ್ಪನಹಳ್ಳಿ -ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳನ್ನು ಸಂಪರ್ಕವನ್ನು ಕಲ್ಪಿಸಲು ಸಿಗ್ನಲಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ ಜು.10 ರಿಂದ ಆ.09ರವರೆಗೆ ಮೆಟ್ರೋ ರೈಲು ಸಂಚಾರ ಸ್ಥಗಿತ ಮಾಡಲಾಗಿದೆ.
ಬೆಂಗಳೂರು (ಜು.07): ಬೆಂಗಳೂರು ನೇರಳೆ ಮಾರ್ಗದಲ್ಲಿನ ಬೈಯಪ್ಪನಹಳ್ಳಿ, ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳನ್ನು ಸಂಪರ್ಕವನ್ನು ಕಲ್ಪಿಸಲು ಸಿಗ್ನಲಿಂಗ್ ಹಾಗೂ ಇತರ ಸಂಬಂಧಿತ ಕಾಮಗಾರಿ ಕೈಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಜು.10 ರಿಂದ ಆ.09ರವರೆಗೆ ಬೈಯಪ್ಪನಹಳ್ಳಿ- ಎಸ್.ವಿ. ರಸ್ತೆ ಹಾಗೂ ಕೃಷ್ಣರಾಜಪುರ- ವೈಟ್‌ಫೀಲ್ಡ್ (ಕಾಡುಗೋಡಿ) ಮಾರ್ಗಗಳ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತ ಮಾಡಲಾಗುತ್ತಿದೆ.
ಬೆಳಗ್ಗೆ 2 ಗಂಟೆಗಳ ಕಾಲ ಮಾತ್ರ ಸ್ಥಗಿತ: ಬೆಂಗಳೂರು ನಮ್ಮ ಮೆಟ್ರೋ ನೇರಳೆ ಮಾರ್ಗದ ಕೆಲವು ನಿಲ್ದಾಣಗಳಲ್ಲಿ ರೈಲು ಸಂಚಾರ ಸ್ಥಗಿತವಾಗಲಿದೆ. ದಿನಾಂಕ 10.07.2023 ಸೋಮವಾರದಿಂದ 09.08.2023 ಬುಧವಾರದವರೆಗೆ ಬೆಳಿಗ್ಗೆ 05.00 ಗಂಟೆಯಿಂದ 700 ಗಂಟೆವರೆಗೆ ಬೈಯಪ್ಪನಹಳ್ಳಿ ಮತ್ತು ಎಸ್.ವಿ ರಸ್ತೆ ಹಾಗೂ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳ ನಡುವೆಯ ಮೆಟ್ರೋ ರೈಲು ಸೇವೆ ಸ್ಥಗಿತಗೊಳಿಸಲಾಗುತ್ತದೆ. ಬೆಳಿಗ್ಗೆ 7.00 ಗಂಟೆಯ ನಂತರ, ಬೈಯಪ್ಪನಹಳ್ಳಿ ಮತ್ತು ಕೆಂಗೇರಿ ಹಾಗೂ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣಗಳ ನಡುವೆ ವಾಣಿಜ್ಯ ರೈಲು ಸೇವೆಗಳು ಎಂದಿನಂತೆ ರಾತ್ರಿ 11.00 ಗಂಟೆಯವರೆಗೆ ಲಭ್ಯವಿರುತ್ತವೆ.
undefined
Karnataka Budget 2023: ಹೆಬ್ಬಾಳದಿಂದ ಸರ್ಜಾಪುರಕ್ಕೆ ಹೊಸ ಮೆಟ್ರೋ ಮಾರ್ಗ, ರಾಜಧಾನಿ ಅಭಿವೃದ್ಧಿಗೆ ಪಣ!
ನೇರಳೆ ಮಾರ್ಗದ ಉಳಿದ ನಿಲ್ದಾಣಕ್ಕೆ ಸಹಜ ಸಂಚಾರ: ಇನ್ನು ನೇರಳೆ ಮಾರ್ಗದಲ್ಲಿ ಮೇಲೆ ತಿಳಿಸಿದ ನಿಲ್ದಾಣಗಳ ನಡುವೆ ಮಾತ್ರ ರೈಲು ಸಂಚಾರ ಸ್ಥಗಿತ ಮಾಡಲಾಗುತ್ತಿದ್ದು, ಉಳಿದಂತೆ ನೇರಳೆ ಮಾರ್ಗದಲ್ಲಿನ ಸ್ವಾಮಿ ವಿವೇಕಾನಂದ ರಸ್ತೆ (ಬೈಯಪ್ಪನಹಳ್ಳಿ ನಿಲ್ದಾಣದ ಮೊದಲು ಒಂದು ನಿಲ್ದಾಣ) ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ರೈಲು ಸೇವೆಗಳು ಬೆಳಗ್ಗೆ 5.00 ಗಂಟೆಯಿಂದ 7.00 ಗಂಟೆಯವರೆಗೆ ಲಭ್ಯವಿರುತ್ತದೆ. ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಮ್ಮ ಮೆಟ್ರೋ ಪಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕೆಂದು ಕೋರಿದ. ಪುಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆ ಉಂಟಾಗಲಿದ್ದುಮ ಸಹಕರಿಸಬೇಕು ಎಂದು ಬೆಂಗಳೂರು ಮೆಟ್ರೋ ರೈಲ್ ಕಾರ್ಪರೇಷನ್ ಲಿ (ಬಿಎಂಆರ್‌ಸಿಎಲ್) ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಒಂದು ತಿಂಗಳಲ್ಲಿ ಸಿಗ್ನಲಿಂಗ್ ಕಾರ್ಯ ಪೂರ್ಣ: ಕಳೆದ ಮಾರ್ಚ್ ತಿಂಗಳಲ್ಲಿ ವೈಟ್‌ಫೀಲ್ಡ್-ಕೆಆರ್ ಪುರಂ ಮಾರ್ಗದಲ್ಲಿರುವ 12 ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸಂಚಾರ ಆರಂಭಿಸಲಾಗಿತ್ತು. ಈ ಮಾರ್ಗದಲ್ಲಿ ವೈಟ್‌ಫೀಲ್ಡ್, ಚನ್ನಸಂದ್ರ, ಕಾಡುಗೋಡಿ, ಪಟ್ಟಂದೂರು ಅಗ್ರಹಾರ, ಸದಾಮಂಗಲ, ನಲ್ಲೂರಹಳ್ಳಿ, ಕುಂದಹಳ್ಳಿ, ಸೀತಾರಾಮಪಾಳ್ಯ, ಹೂಡಿ ಜಂಕ್ಷನ್, ಗರುಡಾಚಾರ್ಪಾಳ್ಯ, ಮಹದೇವಪುರ ಮತ್ತು ಕೆಆರ್ ಪುರಂ ಮಾರ್ಗಗಳಿವೆ. ಇನ್ನು ಕೆಂಗೇರಿಯಿಂದ ಬೈಯಪ್ಪನಹಳ್ಳಿಗೆ ಸಂಪರ್ಕ ವಿರುವ ರೈಲು ಸೇವೆಯನ್ನು ಕೆಆರ್ ಪುರಂವರೆಗೆ ಸಂಪರ್ಕ ಮಾಡಲು ಇನ್ನೂ ಮೂರ್ನಾಲ್ಕು ತಿಂಗಳು ಕಾಲಾವಕಾಶ ಬೇಕು ಎಂದು ಬಿಎಂಆರ್‌ಸಿಎಲ್ ಸಂಸ್ಥೆ ತಿಳಿಸಿತ್ತು. ಅದರಂತೆ ಈಗ ಕೆಆರ್‌ಪುರ ಮತ್ತು ಬೈಯಪ್ಪನಹಳ್ಳಿ ನಡುವೆ 2-3 ಕಿ.ಮೀ ಮಾರ್ಗದ ಸಿಗ್ನಲಿಂಗ್ ಕಾಮಗಾರಿ ಮಾಡಲು ಮುಂದಾಗಿದ್ದು, ಈ ಎರಡೂ ಮಾರ್ಗಗಳನ್ನು ಸಂಪರ್ಕ ಮಾಡಲಾಗುತ್ತದೆ.
ಶಾಸಕನೆಂದು ಹೇಳಿ ವಿಧಾನಸಭೆ ಒಳಹೋದ ವಕೀಲ: ಪೊಲೀಸರ ಕೈಗೆ ಸಿಕ್ಕು ವಿಲವಿಲ
ಕೆಂಗೇರಿಯಿಂದ ವೈಟ್‌ಫೀಲ್ಡ್‌ಗೆ ನೇರ ಸಂಚಾರ: ಪ್ರಸ್ತುತ ಜುಲೈ 10 ರಿಂದ ಕೆಆರ್‌ಪುರ ಮತ್ತು ಬೈಯಪ್ಪನಹಳ್ಳಿ ಮಾರ್ಗದಲ್ಲಿ ಮೆಟ್ರೋ ರೈಲ್ವೆ ಸಿಗ್ನಲಿಂಗ್ ಕಾಮಗಾರಿ ಮಾಡುತ್ತಿದ್ದು, ಒಂದು ತಿಂಗಳ ಅವಧಿಯಲ್ಲಿ ಪೂರ್ಣಗೊಳ್ಳಲಿದೆ. ನಂತರ, ಕೇಂದ್ರ ರೈಲ್ವೆ ಸಚಿವಾಲಯದಿಂದ ಥರ್ಡ್‌ರೇಲ್ ಪರೀಕ್ಷೆ ಮಾಡಲಾಗುತ್ತದೆ. ಇದಾದ ನಂತರ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಕೆಂಗೇರಿಯಿಂದ ವೈಟ್‌ಫೀಲ್ಡ್‌ಗೆ ಒಂದೇ ರೈಲಿನಲ್ಲಿ ಪ್ರಯಾಣ ಮಾಡಲು ಸಾಧ್ಯವಾಗುತ್ತದೆ. ರಸ್ತೆ ಸಂಚಾರದ ಮೂಲಕ ಸುಮಾರು 2 ಗಂಟೆಗೂ ಅಧಿಕ ಸಮಯ ಪ್ರಯಾಣ ಮಾಡಬೇಕಾದ ಮಾರ್ಗವನ್ನು ಕೇವಲ 1 ಗಂಟೆಯೊಳಗೆ ತಲುಪಲು ಸಾಧ್ಯವಾಗಲಿದೆ. ಬೆಂಗಳೂರಿನ ಐಟಿ ಹಬ್ ಪ್ರದೇಶವಾದ ಕೆ.ಆರ್.ಪುರ ಹಾಗೂ ವೈಟ್‌ಫೀಲ್ಡ್‌ಗೆ ಮೆಟ್ರೋ ಮಾರ್ಗದ ಮೂಲಕ ಕೆಂಗೇರಿವರೆಗೆ ಒಟ್ಟು 35 ಕ್ಕೂ ಹೆಚ್ಚು ಸ್ಥಳಗಳಿಗೆ ಸಂಪರ್ಕ ಕಲ್ಪಿಸುತ್ತದೆ.