ಒಂದು ವಾರ ನಮ್ಮ ಮೆಟ್ರೋ ಸಂಚಾರ ಬಂದ್ !

Published : Mar 17, 2021, 04:33 PM IST
ಒಂದು ವಾರ  ನಮ್ಮ ಮೆಟ್ರೋ ಸಂಚಾರ ಬಂದ್ !

ಸಾರಾಂಶ

ಎಂಟು ದಿನಗಳ‌ ಕಾಲ  ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಮೈಸೂರು ರಸ್ತೆಯವರೆಗೂ ಮೆಟ್ರೋ ಸಂಚಾರ ಬಂದ್ ಆಗಲಿದೆ.

ಬೆಂಗಳೂರು, (ಮಾ.17): ಇದೇ ಮಾರ್ಚ್ 21 ರಿಂದ 28 ರವಗೂ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಮಾಗಡಿ ರಸ್ತೆಯಿಂದ ಮೈಸೂರು ರಸ್ತೆವರೆಗಿನ ಮಾರ್ಗದಲ್ಲಿ  ಸಿಗ್ನಲ್ ವ್ಯವಸ್ಥೆಗೆ ಸಂಬಂಧಿಸಿದ ಮಾರ್ಪಾಡು ಕಾಮಾಗಾರಿ ಕೈಗೊಳ್ಳಲಾಗುತ್ತಿದೆ.  ಈ ಹಿನ್ನೆಲೆಯಲ್ಲಿ ಎಂಟು ದಿನಗಳ‌ ಕಾಲ ನೇರಳೆ ಮಾರ್ಗದ ಮೆಟ್ರೋ ಸಂಚಾರ ಬಂದ್ ಆಗಲಿದೆ. 

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗುತ್ತಾ? ಇಲ್ಲಿದೆ ಸತ್ಯಾಸತ್ಯತೆ!

ನಾಡಪ್ರಭು ಕೆಂಪೇಗೌಡ ಬಸ್ ನಿಲ್ದಾಣದಿಂದ ಮೈಸೂರು ರಸ್ತೆಯವರೆಗೂ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ. ಆದ್ರೆ, ಬೈಯಪ್ಪನ ಹಳ್ಳಿಯಿಂದ ಮೆಜೆಸ್ಟಿಕ್ ವರೆಗೆ ಎಂದಿನಂತೆ ಮೆಟ್ರೋ ಸಂಚಾರ ಇರಲಿದೆ.

ನಾಡಪ್ರಭು ಕೆಂಪೇಗೌಡ ಬಸ್ ನಿಲ್ದಾಣದಿಂದ ಮೈಸೂರು ರಸ್ತೆಯವರೆಗೂ ಮೆಟ್ರೋ ಅವಲಂಬಿಸಿರುವ ಪ್ರಯಾಣಿಕರು ಈ ಎಂಟು ದಿನಗಳ ಕಾಲ ಬೇರೆ ಮಾರ್ಗ ಕಂಡುಕೊಳ್ಳಬೇಕಿದೆ.

PREV
click me!

Recommended Stories

Bigg boss 12 winner ‘ಗಿಲ್ಲಿ’ ನಟನಿಗೆ ಹೆಚ್‌ಡಿ ಕುಮಾರಸ್ವಾಮಿ ಅಭಿನಂದನೆ; ಮಂಡ್ಯದ ಮಣ್ಣಿನ ಮಗನ ಸಾಧನೆಗೆ ಮೆಚ್ಚುಗೆ!
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಗಾಯಾಳು; ಕಾರು ನಿಲ್ಲಿಸಿ ಆಸ್ಪತ್ರೆಗೆ ಸೇರಿಸಿದ ಸಚಿವ ಪ್ರಿಯಾಂಕ್ ಖರ್ಗೆ!