ನೈಟ್ ಕರ್ಫ್ಯೂ: ಬೆಂಗಳೂರು ನಮ್ಮ ಮೆಟ್ರೋ ರೈಲು ಸಂಚಾರ ಸಮಯ ಬದಲಾವಣೆ

By Suvarna News  |  First Published Aug 6, 2021, 10:18 PM IST

* ರಾಜ್ಯಾದಂತ ನೈಟ್ ಕರ್ಫ್ಯೂ ಜಾರಿ
* ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಅವಧಿಯಲ್ಲೂ ಸಹ ಬದಲಾವಣೆ 
* ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಮಾಧ್ಯಮ ಪ್ರಕಟಣೆ 


ಕಲಬುರಗಿ, (ಆ.06): ಕೊರೋನಾ ನಿಯಂತ್ರಣಕ್ಕಾಗಿ ಗಡಿ ಜಿಲ್ಲೆಗಳಲ್ಲಿ ಇಂದಿನಿಂದಲೇ (ಆ.06) ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. 

ಅಲ್ಲದೇ ಕರ್ನಾಟಕ ರಾಜ್ಯಾದಂತ ನೈಟ್ ಕರ್ಫ್ಯೂ ಪ್ರತಿದಿನ ರಾತ್ರಿ 10ರ ಬದಲಿಗೆ 9ರಿಂದ ಬೆಳಗ್ಗೆ 5ರ ವರೆಗೆ ಜಾರಿ ಇರಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಅವಧಿಯಲ್ಲೂ ಸಹ ಬದಲಾವಣೆ ಮಾಡಲಾಗಿದೆ.

Tap to resize

Latest Videos

 ರಾತ್ರಿ 9ರಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ, ಮೆಟ್ರೋ ಕೊನೆಯ ರೈಲು ರಾತ್ರಿ 9 ಗಂಟೆ ಬದಲಾಗಿ 8 ಗಂಟೆಗೆ ಸಂಚರಿಸಲಿದೆ.

ರಾಜ್ಯದಲ್ಲಿ ನೈಟ್, ವೀಕೆಂಡ್‌ ಕರ್ಫ್ಯೂ ಜಾರಿ: ಇಲ್ಲಿದೆ ಹೊಸ ಮಾರ್ಗಸೂಚಿ

ಮೆಟ್ರೋ ಕೊನೆಯ ರೈಲು ರಾತ್ರಿ 8 ಗಂಟೆಗೆ ಹೊರಡಲಿದೆ. ಆ ಬಳಿಕ, ಮೆಟ್ರೋ ರೈಲು ಸೇವೆ ಇರುವುದಿಲ್ಲ. ಈ ಬದಲಾವಣೆ ನಾಳೆಯಿಂದ (ಆ.06) ಆಗಸ್ಟ್ 16ರವರೆಗೆ ಜಾರಿಯಲ್ಲಿರುತ್ತದೆ. 

ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು,  ಕೊವಿಡ್ 19 ಹರಡುವುದನ್ನು ತಡೆಯಲು ನಿಯಂತ್ರಣ ಕ್ರಮಗಳ ಆದೇಶದಂತೆ ಆಗಸ್ಟ್ 7 ರಿಂದ ಆಗಸ್ಟ್ 16ರ ವರೆಗೆ ರಾಜ್ಯದಲ್ಲಿ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಆ ಕಾರಣದಿಂದ ಕೊನೆಯ ಮೆಟ್ರೋ ರೈಲು ಸೇವೆಯೂ ಟರ್ಮಿನಲ್ ನಿಲ್ದಾಣಗಳಿಂದ ರಾತ್ರಿ 9 ಗಂಟೆಯ ಬದಲು ರಾತ್ರಿ 8 ಗಂಟೆಗೆ ಹೊರಡುತ್ತದೆ. ಈ ಬದಲಾವಣೆಯನ್ನು ಆಗಸ್ಟ್ 7 ರಿಂದ ಜಾರಿಗೊಳಿಸಲಾಗಿದೆ ಎಂದು ತಿಳಿಸಿದೆ.

click me!