BMTC, Namma Metro ವೀಕೆಂಡ್‌ನಲ್ಲಿ ಬಿಎಂಟಿಸಿ, ನಮ್ಮ ಮೆಟ್ರೋ ಸಂಚಾರ ಯಥಾಸ್ಥಿತಿ

By Suvarna NewsFirst Published Jan 21, 2022, 8:47 PM IST
Highlights

* ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ಹಿಂಪಡೆದ ಸರ್ಕಾರ
* ಹಲವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ವಾಪಸ್
* ವೀಕೆಂಡ್‌ನಲ್ಲಿ ಬಿಎಂಟಿಸಿ ನಮ್ಮ ಮೆಟ್ರೋ ಸಂಚಾರ ಯಥಾಸ್ಥಿತಿ

ಬೆಂಗಳೂರು, (ಜ.21): ಕರ್ನಾಟಕದಲ್ಲಿ ವೀಕೆಂಡ್​ ಕರ್ಫ್ಯೂ (Weekend Curfew) ಹಿಂಪಡೆದಿದ್ದರಿಂದ  ನಮ್ಮ ಮೆಟ್ರೋ (Namma metro) ಹಾಗೂ ಬಿಎಂಟಿಸಿ  ಬಸ್ (BMTC Bus) ಸಂಚಾರ ನಾಳೆಯಿಂದ (ಜ.22) ಯಥಾಸ್ಥಿತಿ ಸಂಚರಿಸಲಿವೆ.

ಹೌದು.... ಪ್ರತಿ 5 ನಿಮಿಷಕ್ಕೆ ಒಂದರಂತೆ ಮೆಟ್ರೋ ರೈಲು ಸಂಚಾರ ಮಾಡಲಿದೆ. ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೂ ನಮ್ಮ ಮೆಟ್ರೋ ರೈಲುಗಳು ಕಾರ್ಯಾಚರಣೆ ನಡೆಸಲಿವೆ. ರಾತ್ರಿ 9 ಗಂಟೆಗೆ ಟರ್ಮಿನಲ್ ಸ್ಟೇಷನ್​ನಿಂದ‌ ಕೊನೆಯ ರೈಲು ಹೊರಡಲಿದೆ.

Covid Guidelines ಸಿಎಂ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳು, ಹೊಸ ಮಾರ್ಗಸೂಚಿ ಇಲ್ಲಿದೆ

ವೀಕೆಂಡ್ ಕರ್ಫ್ಯೂ ವೇಳೆ 30 ನಿಮಿಷಗಳಿಗೆ ಒಂದು ರೈಲು (Train) ಕಾರ್ಯಾಚರಣೆಯಾಗುತ್ತಿತ್ತು. ಸದ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದು ಮಾಡಿದ ಹಿನ್ನಲೆ ಮೊದಲಿನಂತೆ ಮೆಟ್ರೋ ಸಂಚಾರ ಇರಲಿದೆ.

ವೀಕೆಂಡ್ ಕರ್ಫ್ಯೂ​ ವೇಳೆ ನಮ್ಮ ಮೆಟ್ರೋ ಸಂಚಾರಕ್ಕೆ ಅಡ್ಡಿಯಿರಲಿಲ್ಲ. ಶನಿವಾರ ಮತ್ತು ಭಾನುವಾರ ಎಂದಿನಂತೆ ನಮ್ಮ ಮೆಟ್ರೋ ರೈಲು ಸಂಚರಿಸುತ್ತಿತ್ತು. ನಮ್ಮ ಮೆಟ್ರೋ ಹಸಿರು, ನೇರಳೆ ಮಾರ್ಗದಲ್ಲಿ ಯಾವುದೇ ಬದಲಾವಣೆ ಇರಲಿಲ್ಲ. ಆದರೆ ನಮ್ಮ ಮೆಟ್ರೋದಲ್ಲಿ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಅವಕಾಶ ಇತ್ತು. ಮೆಟ್ರೋ ರೈಲಿನಲ್ಲಿ  1800-1900 ಜನ ಪ್ರಯಾಣಿಸುತ್ತಿದ್ದರು. 

ಬಿಎಂಟಿಸಿ ಬಸ್ ಸಂಚಾರ
ವೀಕೆಂಡ್ ಕರ್ಫ್ಯೂ ಸಡಿಲಗೊಳಿಸಿರುವ ಹಿನ್ನೆಲೆಯಲ್ಲಿ  ಬೆಂಗಳೂರಿನಲ್ಲಿ ವಾರಾಂತ್ಯದಲ್ಲಿ ಬಿಎಂಟಿಸಿ ಸೇವೆ ಎಂದಿನಂತೆ ಲಭ್ಯವಿರುತ್ತವೆ. ಈ ಹಿಂದೆ ವೀಕೆಂಡ್ ಕರ್ಫ್ಯೂ ವೇಳೆ ಬಿಎಂಟಿಸಿ ತುರ್ತು ಸೇವೆಗಳಿಗೆ ಮಾತ್ರ ಸಂಚರಿಸುತ್ತಿದ್ದವು. ಇದೀಗ ವೀಕೆಂಡ್ ಕರ್ಫ್ಯೂ ರದ್ದು ಮಾಡಿದ್ದರಿಂದ ಎಂದಿನಂತೆ ಬಿಎಂಟಿಸಿ ಬಸ್ ಸಂಚರಿಸಲಿವೆ.

ಸಿಎಂ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳು
ಹಲವರು ವಿರೋಧಿಸಿದ್ದರಿಂದ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಪ್ಯೂ ( Weekend Curfew ) ಹಿಂಪಡೆಯಲು ಸಭೆಯಲ್ಲಿ ತೀರ್ಮಾನವಾಗಿದೆ. 

* ರಾತ್ರಿ ಕರ್ಫ್ಯೂ ಅವಧಿ ವಾರದ 7 ದಿನಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ಜಾರಿಯಲ್ಲಿರಲಿದೆ.

* ಸಾರ್ವಜನಿಕ ಬೇಡಿಕೆ ಮೇರೆಗೆ ಹಾಗೂ ತಜ್ಞರೊಂದಿಗೆ ಚರ್ಚಿಸಿದ ಅಂಶಗಳನ್ನ ಆಧರಿಸಿ, ಈ ವಾರಾಂತ್ಯದಲ್ಲಿ ವಾರಾಂತ್ಯ ಕರ್ಫ್ಯೂ ಸದ್ಯಕ್ಕೆ ಹಿಂಪಡೆಯಲು ನಿರ್ಧರಿಸಲಾಗಿದೆ. ಆದ್ರೆ, ಮುಂದಿನ ವಾರ ಆಸ್ಪತ್ರೆಗೆ ದಾಖಲಾಗುವ ಪ್ರಮಾಣವನ್ನು ನೋಡಿಕೊಂಡು ನಿರ್ಬಂಧಗಳನ್ನ ವಿಧಿಸುವ ಬಗ್ಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು.

* ಆದ್ದರಿಂದ ಸಾರ್ವಜನಿಕರು ಜವಾಬ್ದಾರಿಯುತವಾಗಿ ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸುವುದು ಅತಿ ಅಗತ್ಯವಾಗಿದೆ.
* ಮಾಲ್, ಹೋಟೆಲ್, ಬಾರ್, ಕ್ಲಬ್, ಪಬ್ಮ ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ತೆರೆಯಲು ತೀರ್ಮಾನಿಸಲಾಗಿದೆ. ಹಾಗೂ ಎರಡೂ ಡೋಸ್ ಲಸಿಕೆ ಕಡ್ಡಾಯ.

ಸರ್ಕಾರದ ಹೊಸ ಮಾರ್ಗಸೂಚಿ ಇಂತಿದೆ.
* ಈ ಹಿಂದೆ ಜಾರಿಗೊಳಿಸಿದ್ದಂತ ಶುಕ್ರವಾರ ರಾತ್ರಿ 10 ರಿಂದ ಆರಂಭಗೊಂಡು ಸೋಮವಾರ ಬೆಳಿಗ್ಗೆ 5 ಗಂಟೆಗೆಯವರೆಗಿನ ವೀಕೆಂಡ್ ಕರ್ಪ್ಯೂವನ್ನು ವಾಪಾಸ್ ಪಡೆಯಲಾಗಿರೋದಾಗಿ ತಿಳಿಸಿದ್ದಾರೆ.

* ವೀಕೆಂಡ್ ಕರ್ಪ್ಯೂ ಮಾತ್ರವೇ ರದ್ದುಗೊಳಿಸಲಾಗಿದೆ. ಕೊರೋನಾ ನಿಯಂತ್ರಣ ಕ್ರಮವಾಗಿ ಈ ಹಿಂದೆ ಜಾರಿಯಲ್ಲಿದ್ದಂತ ಎಲ್ಲಾ ನಿಯಮಗಳು ಮುಂದುವರೆಯಲಿವೆ. Rally, ಧರಣಿ, ಪ್ರತಿಭಟನೆ ಸೇರಿದಂತೆ ಸಾಮಾಜಿಕ, ಧಾರ್ಮಿಕ, ರಾಜಕೀಯ ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ.

* ಮದುವೆ ಸಮಾರಂಭಗಳಿಗೆ ಕೊರೋನಾ ಸೋಂಕಿನ ತೀವ್ರತೆಯ ನಡುವೆಯೂ ಅವಕಾಶ ನೀಡಲಾಗಿದೆ. ಓಪನ್ ಸ್ಥಳದಲ್ಲಿ ನಡೆಯೋ ಮದುವೆಗೆ 200 ಜನ. ಮುಚ್ಚಿದ ಪ್ರದೇಶದಲ್ಲಿ ನಡೆಯೋ ಮದುವೆಗೆ 100 ಜನರ ಮಿತಿಯನ್ನು ಮುಂದುವರೆಸಲಾಗಿದೆ.

* ಈ ಹಿಂದಿನಂತೆ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ರಾಜ್ಯಾದ್ಯಂತ ಮುಂದುವರೆಯಲಿದೆ.   ಎಲ್ಲಾ ದಿನಗಳಲ್ಲಿಯೂ ರಾತ್ರಿ ಕರ್ಪ್ಯೂ ಜಾರಿಯಲ್ಲಿ ಇರಲಿದೆ.

* ಎಲ್ಲಾ ಪಬ್, ಕ್ಲಬ್, ರೆಸ್ಟೋರೆಂಟ್, ಬಾರ್, ಹೋಟೆಲ್, ಊಟದ ಸ್ಥಳಗಳು ಸೇರಿದಂತೆ ಇತರೆ ಪ್ರದೇಶಗಳಲ್ಲಿ ಶೇ.50ರ ಜನರು ಸೇರುವ ಮಿತಿಯ ನಿರ್ಬಂಧ ವಿಧಿಸಲಾಗಿದೆ. ಕೊರೋನಾ ಮಾರ್ಗಸೂಚಿಯನ್ನು ಅನುಸರಿಸುವಂತೆ ಸೂಚಿಸಲಾಗಿದೆ. ಅಲ್ಲದೇ ಸಂಪೂರ್ಣ ಡೋಸ್ ಲಸಿಕೆ ಪಡೆದಂತವರಿಗೆ ಮಾತ್ರವೇ ಅವಕಾಶ ನೀಡಲಾಗಿದೆ.

* ಸಿನಿಮಾ, ಹಾಲ್, ಮಲ್ಟಿಪ್ಲೆಕ್ಸ್, ಚಿತ್ರಮಂದಿರ, ರಂಗಮಂದಿರ, ಆಡಿಟೋರಿಯಂ, ಹೆಚ್ಚು ಜನರು ಸೇರಿವಂತ ಸ್ಥಳದಲ್ಲಿ ಶೇ.50 ಜನರು ಸೇರುವಂತ ಮಿತಿಯನ್ನು ವಿಧಿಸಲಾಗಿದೆ.

* ಮಹಾರಾಷ್ಟ್ರ, ಕೇರಳ ಮತ್ತು ಗೋವಾ ಸೇರಿದಂತೆ ಗಡಿ ಭಾಗಗಳಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ಒಂದು ವೇಳೆ ನಿಯಮ ಮೀರಿದವರ ವಿರುದ್ಧ ಕೋವಿಡ್ ನಿಯಂತ್ರಣ ಕ್ರಮದಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಿದೆ.

click me!