ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್

Published : Sep 17, 2021, 07:59 PM ISTUpdated : Sep 17, 2021, 10:11 PM IST
ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್

ಸಾರಾಂಶ

* ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್ * ಬೆಂಗಳೂರು ನಮ್ಮ ಮೆಟ್ರೋ ರೈಲು ಸೇವೆಯ  ಸಮಯವನ್ನು ವಿಸ್ತರಣೆ * ಮೆಟ್ರೋ ಅವಧಿಯನ್ನು ವಿಸ್ತರಿಸುವಂತೆ ಪತ್ರ ಬರೆದಿದ್ದ ಮಾಜಿ ಸಚಿವ ಸುರೇಶ್ ಕುಮಾರ್

ಬೆಂಗಳೂರು, (ಸೆ.17): ಜನರ ಪ್ರಯಾಣಕ್ಕೆ ಅನುಕೂಲವಾಗುವಂತೆ ಬೆಂಗಳೂರು ನಮ್ಮ ಮೆಟ್ರೋ ಕಾರ್ಯನಿರ್ವಹಿಸುವ ಅವಧಿಯನ್ನು ಪರಿಷ್ಕರಿಸಲಾಗಿದೆ.

ಬೆಂಗಳೂರು ನಮ್ಮ ಮೆಟ್ರೋ ರೈಲು ಸೇವೆಯ  ಸಮಯವನ್ನು ಬೆಳಗ್ಗೆ 6 ರಿಂದ ರಾತ್ರಿ 10ರ ವರೆಗೆ ವಿಸ್ತರಣೆ ಮಾಡಲಾಗಿದೆ. ಕೊರೋನಾ ಕಾರಣದಿಂದ ಈ ಮೊದಲು ರೈಲು ಓಡಾಟದ ಅವಧಿ ಬೆಳಗ್ಗೆ 7 ಗಂಟೆಯಿಂದ ಸಂಜೆ 8 ಗಂಟೆ ವರೆಗೆ ಮಾತ್ರ ಇತ್ತು. ಇದೀಗ ರಾತ್ರಿ 10ರ ವರೆಗೆ ವಿಸ್ತರಿಸಲಾಗಿದೆ. 

ನೈಟ್ ಕರ್ಫ್ಯೂ: ಬೆಂಗಳೂರು ನಮ್ಮ ಮೆಟ್ರೋ ರೈಲು ಸಂಚಾರ ಸಮಯ ಬದಲಾವಣೆ

ನಮ್ಮ ಮೆಟ್ರೋ ಸೇವಾ ಅವಧಿಯನ್ನು ವಿಸ್ತರಿಸುವಂತೆ ಮಾಜಿ ಸಚಿವ ಸುರೇಶ್‌ಕುಮಾರ್‌ ಅವರು ಸಿಎಂ ಬಸವರಾಜ ಬೊಮ್ಮಾಯಿಗೆ
 ಪತ್ರ ಬರೆದಿದ್ದರು. 

ನೈಟ್ ಕರ್ಫ್ಯೂ ಹಿನ್ನೆಲೆ ರಾತ್ರಿ 9ರವರೆಗೆ ಮಾತ್ರ ಮೆಟ್ರೋ ಸಂಚಾರವಿದೆ. ರಾತ್ರಿ 9 ಗಂಟೆಯ ಬಳಿಕ ಮೆಟ್ರೋ ಸಂಚಾರ ಇರುವುದಿಲ್ಲ. ಇದರಿಂದ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ರಾತ್ರಿ 10 ಗಂಟೆಯವರೆಗೆ ಮೆಟ್ರೋ ಸೌಲಭ್ಯ ಕಲ್ಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಶಾಸಕ ಸುರೇಶ್‌ ಕುಮಾರ್ ಪತ್ರ ಬರೆದಿದ್ದರು.

ನೈಟ್ ಕರ್ಫ್ಯೂ 11 ಗಂಟೆಯ ನಂತರ ವಿಧಿಸುವ ಬಗ್ಗೆ ಪರಿಶೀಲನೆ ನಡೆಸಬೇಕು. ಲಾಕ್​ಡೌನ್ ಮುಂಚೆ ಮೆಟ್ರೋ ನಿಲ್ದಾಣಗಳಲ್ಲಿ ಎರಡು ಕಡೆ ದ್ವಾರಗಳು ಇದ್ದವು. ಈಗ ಒಂದು ಕಡೆ ಮಾತ್ರ ದ್ವಾರ ಇದ್ದು, ಸಮಸ್ಯೆಯಾಗುತ್ತಿದೆ. ಹೀಗಾಗಿ ಎರಡು ಕಡೆ ಪ್ರವೇಶ ದ್ವಾರ ತೆರೆದು ಸಾರ್ವಜನಿಕರಿಗೆ ಅನುಕೂಲ‌ ಮಾಡಿ ಕೊಡಿ‌ ಎಂದು ಸುರೇಶ್ ಕುಮಾರ್ ಬರೆದ ಪತ್ರದಲ್ಲಿ ವಿನಂತಿ ಮಾಡಿದ್ದರು. 

PREV
click me!

Recommended Stories

ನಾಳೆ ಬೆಂಗಳೂರಿನಲ್ಲಿ ವಿದ್ಯುತ್ ಕಡಿತ: ನಿಮ್ಮ ಏರಿಯಾ ಇದೆಯಾ ಚೆಕ್ ಮಾಡಿ?
ಮಕ್ಕಳಿಗಾಗಿ ಕೊನೆಗೂ ಒಂದಾದ್ರು ಲೀಲಾ-ಮಂಜು; ಚಿನ್ನೀ, ಬಂಗಾರಿ ಫ್ಲೇವರ್ ಬಿಟ್ಟುಕೊಟ್ಟ ಸಂತೋಷ್!