VCಗಾಗಿ ಪರೀಕ್ಷೆ ಬಹಿಷ್ಕರಿಸಿ ನ್ಯಾಷನಲ್ ಲಾ ಸ್ಕೂಲ್ ವಿದ್ಯಾರ್ಥಿಗಳ ಪ್ರತಿಭಟನೆ

By Web DeskFirst Published Sep 23, 2019, 3:21 PM IST
Highlights

ಕುಲಪತಿ ನೇಮಕಾತಿ ಪ್ರಕ್ರಿಯೆ ಮುಗಿದಿದ್ದರೂ ಘೋಷಣೆ ಹೊರಬಿದ್ದಿಲ್ಲ ಎಂದು ಬೆಂಗಳೂರಿನ ಲಾ ಸ್ಕೂಲ್ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. 

ಬೆಂಗಳೂರು [ಸೆ.23]:  ಹೊಸ ವಿಸಿ ನೇಮಕ ಮಾಡುವಂತೆ ಆಗ್ರಹಿಸಿ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಚಂದ್ರ ಲೇಔಟ್ ಬಳಿ ಇರುವ ನ್ಯಾಷನಲ್ ಲಾ ಸ್ಕೂಲ್ ಯೂನಿವರ್ಸಿಟಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಅಸಮಾಧಾನ ಹೊರಹಾಕಿದ್ದಾರೆ.

ವಿಸಿ ನೇಮಕ ವಿಚಾರದಲ್ಲಿ ವಿಳಂಭ ನೀತಿ ಅನುಸರಿಸಲಾಗುತ್ತಿದೆ. ನೇಮಕಾತಿ ಪ್ರಕ್ರಿಯೆ ಮುಗಿದಿದ್ದರೂ ಘೋಷಣೆ ಮಾತ್ರ ಹೊರಬಿದ್ದಿಲ್ಲ. ಕಾನೂನು ವಿದ್ಯಾರ್ಥಿಗಳಿಗೆ ಈಗಾಗಲೇ ಪರೀಕ್ಷೆಗಳು ಆರಂಭವಾಗಿದ್ದು,  ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. 

ಎಕ್ಸಿಕ್ಯೂಟಿವ್ ಕೌನ್ಸಿಲ್  ಈಗಾಗಲೇ ವಿಸಿ ಆಯ್ಕೆ ಮಾಡಿದೆ. ಶೀಘ್ರ ನೂತನ ಕುಲಪತಿ ಆಗಮಿಸಲಿ ಎಂದು ಪ್ರಭಾರಿ ವಿಸಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಎಂ.ಕೆ.ರಮೇಶ್ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳಿಗೆ ಓದಲು ಸರಿಯಾದ ವಾತಾವರಣ ಇಲ್ಲವೆಂದು ಬೆಳಿಗ್ಗೆ 10 ಗಂಟೆಗೆ ಶುರುವಾಗಬೇಕಿದ್ದ ಪರೀಕ್ಷೆ ಬಹಿಷ್ಕರಿಸಿಕಾಲೇಜು ಮುಂದೆ ಪ್ರತಿಭಟನೆ ನಡೆಸಿದ್ದಾರೆ. 

ಗಮನಹರಿಸುತ್ತೇವೆ :  ಇನ್ನು ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಇದು ಬಾರ್ ಕೌನ್ಸಿಲ್ ಇಂಡಿಯಾ ಅಡಿಯಲ್ಲಿ ಬರುತ್ತದೆ. ನಮ್ಮ ಕಡೆಯಿಂದ ಇಂಟರ್ ವೆನ್ಶನ್ ಇಲ್ಲ. ಪರೀಕ್ಷೆ ಬಾಯ್ ಕಟ್ ಮಾಡಿರುವುದು ನನ್ನ ಗಮನಕ್ಕೆ ಬಂದಿಲ್ಲ ಎಂದರು.

"

click me!