ಬೆಂಗಳೂರಿನ ನೈಸ್ ರಸ್ತೆಯಲ್ಲಿ ಬಕ್‌ನಲ್ಲಿ ಹೋಗುತ್ತಿದ್ದ ದಂಪತಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು, ದಂಪತಿ ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟಿದ್ದಾರೆ.
ಬೆಂಗಳೂರು (ನ.30): ರಾಜ್ಯ ರಾಜಧಾನಿಯಲ್ಲಿ ಟ್ರಾಫಿಕ್ ಮುಕ್ತ ಸಂಚಾರಕ್ಕೆ ನಿರ್ಮಾಣ ಮಾಡಲಾಗಿರುವ ನೈಸ್ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ದಂಪತಿಗೆ ಅತಿ ವೇಗವಾಗಿ ಬಂದ ಗೂಡ್ಸ್ ವಾಹನವು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಇನ್ನು ಗೂಡ್ಸ್ ವಾಹನ ಗುದ್ದಿದ ರಭಸಕ್ಕೆ ಮೇಲಕ್ಕೆ ಹಾರಿ ರಸ್ತೆಗೆ ಬಿದ್ದ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಎಲ್ಲ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಹೇಳತೀರದಷ್ಟು ಹೆಚ್ಚವಾಗಿದೆ. ಹೀಗಾಗಿ, ಹಣ ಪಾವತಿ ಮಾಡಿಯಾದರೂ ಸರಿ ಟ್ರಾಫಿಕ್ ಮುಕ್ತವಾಗಿ ತಾವು ಹೋಗಬೇಕಿದ್ದ ಸ್ಥಳಕ್ಕೆ ತಲುಪಲು ಹೆಚ್ಚಿನ ಜನರು ನೈಸ್ ರಸ್ತೆಯನ್ನು ಬಳಕೆ ಮಾಡುತ್ತಾರೆ. ಆದರೆ, ಈ ರಸ್ತೆಯಲ್ಲಿ ಅಪಘಾತಗಳ ಪ್ರಮಾಣವೂ ಹೆಚ್ಚಾಗಿದೆ ಎನ್ನುವುದು ಹೀಗೆ, ಹಣ ಪಾವತಿಸಿ ನೈಸ್ ರಸ್ತೆಯಲ್ಲಿ ಹೋಗುತ್ತಿದ್ದ ದಂಪತಿಗೆ ವೇಗವಾಗಿ ಬಂದ ಗೂಡ್ಸ್ ವಾಹನ ಸೀದಾ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದಂಪತಿ ರಸ್ತೆಗೆ ಬಿದ್ದು ತೀವ್ರ ರಕ್ತ ಸ್ರಾವದಿಂದ ಬಳಲಿ ಸಾವನ್ನಪ್ಪಿದ್ದಾರೆ.
undefined
ಇನ್ಫೋಸಿಸ್ ನಾರಾಯಣಮೂರ್ತಿಯ ಕಾಂಗ್ರೆಸ್ ಗ್ಯಾರಂಟಿ ಕುರಿತ ಹೇಳಿಕೆ ಬೆಂಬಲಿಸಿದ ಸಚಿವ ಪ್ರಿಯಾಂಕ ಖರ್ಗೆ!
ನೈಸ್ ರಸ್ತೆಯ ವಜ್ರಮುನೇಶ್ವರ ಅಂಡರ್ ಪಾಸ್ ಬಳಿ ಘಟನೆ ನಡೆದಿದೆ. ನಿರ್ಮಲಾ (45) ಬೈಯಣ್ಣ (55) ಮೃತ ದಂಪತಿ ಆಗಿದ್ದಾರೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಗೂಡ್ಸ್ ವಾಹನ ಅತಿವೇಗವಾಗಿ ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್‌ನಿಂದ ರಸ್ತೆಗೆ ಬಿದ್ದು ತೀವ್ರ ಗಾಯದಿಂದ ಬಳಲುತ್ತಿದ್ದ ಗಾಯಾಳು ದಂಪತಿಯನ್ನು ಆಸ್ಪತ್ರೆಗೆ ಕರೆದೊಯ್ಯಲೂ ಯಾರೊಬ್ಬರು ಕೂಡ ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಲಭ್ಯವಾಗಿಲ್ಲ. ಇನ್ನು ಗೂಡ್ಸ್ ವಾಹನದಲ್ಲಿಯೂ ಆವರನ್ನು ಆಸ್ಪತ್ರೆಗೆ ಸೇರಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿಯೇ ದಂಪತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಸಂಬಂಧ ತಲಘಟ್ಟಪುರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಮೃತದೇಹಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಎರಡು ಬಾರಿ ಅಪಘಾತವಾಗಿದ್ದರೂ ಬದುಕುಳಿದಿದ್ದ ಬೈಯಣ್ಣ: ದಂಪತಿ ಇಂದು ಬೆಳಗ್ಗೆ ಹಾರಗದ್ದೆಗೆ ಗೃಹ ಪ್ರವೇಶಕ್ಕೆ ಹೋಗಿದ್ದರು. 11 ಗಂಟೆಯಲ್ಲಿ ಗೃಹ ಪ್ರವೇಶ ಮುಗಿಸಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಕ್ಯಾಂಟರ್ ಬದಿಯಿಂದ ಬೈಕ್ ಡಿಕ್ಕಿ ಹೊಡೆದಿದೆ. ಇಬ್ಬರು ರಸ್ತೆಯಲ್ಲಿ ಹಾರಿ ಬಿದ್ದು, ತಲೆಗೆ ಪೆಟ್ಟಾಗಿತ್ತು. ಇವರು ವಿಜಯನಗರ ಮೂಲದ ದಂಪತಿಯಾಗಿದ್ದಾರೆ. ಇನ್ನು ಬೈಯ್ಯಣ್ಣ ಹೊಸಹಳ್ಳಿಯ ದೇವಸ್ಥಾನವೊಂದರ ಟ್ರಸ್ಟಿಯಾಗಿದ್ದರು. ಪತಿಗೆ ಒಂದು ಗಂಡು, ಒಂದು ಹೆಣ್ಣು ಮಕ್ಕಳಿದ್ದಾರೆ. ಇಬ್ಬರು ಕೂಡ ಇಂಜಿನಿಯರಿಂಗ್ ಪದವಿ ಮುಗಿಸಿದ್ದರು. ಬೈಯ್ಯಣ್ಣ ಈ ಹಿಂದೆ ಕೂಡ ಎರಡು ಬಾರಿ ಅಪಘಾತಕ್ಕೊಳಗಾಗಿದ್ದರು. ಎರಡು ಬಾರಿಯೂ ಗಂಭೀರ ಗಾಯವಾಗಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ, ಈಗ ಮೂರನೇ ಬಾರಿ ಇಂದು ಆಕ್ಸಿಡೆಂಟ್ ಆಗಿದ್ದು, ದಂಪತಿ ಸಮೇತ ಮೃತರಾಗಿದ್ದಾರೆ ಎಂದು ಮೃತರ ಸಂಬಂಧಿ ಗೋಪಾಲ್ ಹೇಳಿದ್ದಾರೆ.
4 ಲಕ್ಷಕ್ಕೆ ಹೆಣ್ಣು, 8 ಲಕ್ಷಕ್ಕೆ ಗಂಡು ಮಗು..! ಡಾಕ್ಟರ್‌ಗಳೇ ದಂಧೆಕೋರರ ಇನ್ಫಾರ್ಮರ್ಸ್..!
ಸಾವಿನಲ್ಲೂ ಸಾರ್ಥಕತೆ: ಅಪಘಾತದಲ್ಲಿ ಮೃತಪಟ್ಟ ದಂಪತಿ ಮಕ್ಕಳು ತಂದೆ-ತಾಯಿ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ತಂದೆ ತಾಯಿ ಇಬ್ಬರು ಕಣ್ಣು ದಾನ ಮಾಡಿದ್ದಾರೆ. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗುತ್ತಿದೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗುತ್ತದೆ.