
ಬೆಂಗಳೂರು (ಮೇ 24): ರಾಜಕಾಲವೆ ಕಾಮಗಾರಿ ವೇಳೆ ಅವಘಡ ನಡೆದಿದ್ದು, ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವೀಗಿಡಾಗಿದ್ದಾನೆ. ಶ್ರೀನಗರದ ಕಾಳಿದಾಸ ಲೇಔಟ್‌ನಲ್ಲಿ ಘಟನೆ ನಡೆದಿದೆ. ಮತ್ತಷ್ಟು ಕಾರ್ಮಿಕರು ಮಣ್ಣಿನಲ್ಲಿ ಸಿಲುಕಿರುವ ಸಾಧ್ಯತೆಯಿದ್ದು, ಸ್ಥಳಕ್ಕೆ ಗಿರಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಳುಗಳನ್ನು ಶ್ರೀನಗರ ನರ್ಸಿಂಗ್ ಹೋಂಗೆ ದಾಖಲಿಸಲಾಗಿದೆ. ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು ನಾಲ್ವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲಾ ಬಿಹಾರ ಮೂಲದ ಕಾರ್ಮಿಕರು ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ
ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು: ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ ವೇಳೆ ರಸ್ತೆಗೆ ಬಿದ್ದ ಸವಾರನ ಮೇಲೆ ಬಿಎಂಟಿಸಿ ಬಸ್ ಚಕ್ರ ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಪೀಣ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ: Chamarajnagar: ವಿದ್ಯುತ್ ಸ್ಪರ್ಶಿಸಿ 11 ತಿಂಗಳ ಮಗು ಸಾವು
ಸುಂಕದಕಟ್ಟೆ ನಿವಾಸಿ ಮಂಜುನಾಥ್(23) ಮೃತ ಸವಾರ. ಗದಗ ಮೂಲದ ಈತ ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಭಾನುವಾರ ರಾತ್ರಿ ಸ್ನೇಹಿತನನ್ನು ಜಾಲಹಳ್ಳಿ ಕ್ರಾಸ್‌ಗೆ ಡ್ರಾಪ್ ಮಾಡಿ ಸುಂಕದಕಟ್ಟೆಯ ಮನೆಗೆ ವಾಪಸಾಗುವಾಗ ಮಾರ್ಗ ಮಧ್ಯೆ ರಾತ್ರಿ 9.30ರ ಸುಮಾರಿಗೆ ಈ ದುರ್ಘಟನೆ (Accident) ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.