ಬೆಂಗಳೂರು ವಾಹನ ಸವಾರರೇ ಎಚ್ಚರ; 1 ವಾರ ರಿಂಗ್‌ ರೋಡ್ ಸಂಚಾರ ಬದಲು, ಪರ್ಯಾಯ ಮಾರ್ಗ ಇಲ್ಲಿದೆ ನೋಡಿ!

Published : Sep 18, 2025, 03:34 PM IST
Bengaluru ORR Traffic Diversion

ಸಾರಾಂಶ

ಬೆಂಗಳೂರಿನ ಹೊರವರ್ತುಲ ರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆ ನಿಯಂತ್ರಿಸಲು ಸೆಪ್ಟೆಂಬರ್ 19ರಿಂದ ಒಂದು ವಾರಗಳ ಕಾಲ ತಾತ್ಕಾಲಿಕ ಸಂಚಾರ ಬದಲಾವಣೆಗಳನ್ನು ಜಾರಿಗೊಳಿಸಲಾಗಿದೆ. ಮಾರತ್ತಹಳ್ಳಿ-ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆ ಪ್ರವೇಶ ನಿರ್ಬಂಧಿಸಲಾಗಿದ್ದು, ವಾಹನ ಸವಾರರಿಗೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ.

ಬೆಂಗಳೂರು (ಸೆ.18): ಟ್ರಾಫಿಕ್ ದಟ್ಟಣೆ ನಿಯಂತ್ರಿಸುವ ಸಲುವಾಗಿ ಬೆಂಗಳೂರಿನ ಹೊರವರ್ತುಲ ರಸ್ತೆಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ. ಸೆಪ್ಟೆಂಬರ್ 19, 2025 ರಿಂದ ಒಂದು ವಾರಗಳ ಕಾಲ ಈ ಹೊಸ ವ್ಯವಸ್ಥೆ ಜಾರಿಯಲ್ಲಿರುತ್ತದೆ ಎಂದು ಹೆಚ್.ಎ.ಎಲ್ ಏರ್‌ಪೋರ್ಟ್ ಸಂಚಾರ ಪೊಲೀಸ್ ಠಾಣೆ ಪ್ರಕಟಿಸಿದೆ. ಸಾರ್ವಜನಿಕರು ಮತ್ತು ವಾಹನ ಸವಾರರ ಅನುಕೂಲಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಯಾವ ರಸ್ತೆಗಳಲ್ಲಿ ನಿರ್ಬಂಧ?

ಲೇ ಅರೇಬಿಯಾ, ಬಿರಿಯಾನಿ ಜೋನ್, ಮತ್ತು ಕ್ರೋಮ್ ಜಂಕ್ಷನ್ ಬಳಿ ಹೊರವರ್ತುಲ ರಸ್ತೆಯಿಂದ ಮಾರತ್ತಹಳ್ಳಿ-ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆಗೆ ಪ್ರವೇಶಿಸುವ ಎಲ್ಲ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗ ಯಾವುದು?

ಮಹದೇವಪುರ ಕಾರ್ತಿಕ್‌ನಗರ ಕಡೆಯಿಂದ ಬರುವ ವಾಹನಗಳು:

ಈ ಮಾರ್ಗದಲ್ಲಿ ಬರುವ ವಾಹನ ಸವಾರರು ಕಡ್ಡಾಯವಾಗಿ ಕಲಾಮಂದಿರದ ಬಳಿಯ ಸರ್ವಿಸ್ ರಸ್ತೆಗೆ ತೆರಳಬೇಕು. ಅಲ್ಲಿಂದ ಮಾರತ್‌ಹಳ್ಳಿ ಕಾಂತಿ ಸ್ವೀಟ್ಸ್ ಅಂಡರ್‌ಪಾಸ್ ಬಳಿ 'ಯು-ಟರ್ನ್' ತೆಗೆದುಕೊಂಡು, ಮಾರತ್ ಹಳ್ಳಿ ಸೇತುವೆಯ ಬಳಿ ಎಡಕ್ಕೆ ತಿರುಗಿ ಮುನ್ನೇಕೊಳಾಲ, ಕಾಡುಬೀಸನಹಳ್ಳಿ ಜಂಕ್ಷನ್, ಪಣತ್ತೂರು ಮತ್ತು ಕರಿಯಮ್ಮನ ಅಗ್ರಹಾರ ಕಡೆಗೆ ಹೋಗಲು ಸರ್ವಿಸ್ ರಸ್ತೆಯನ್ನು ಬಳಸಬಹುದು.

ದೇವರಬೀಸನಹಳ್ಳಿ ಮತ್ತು ಬೆಳಂದೂರು ಕಡೆಗೆ ಹೋಗುವ ವಾಹನಗಳು: ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಕಡ್ಡಾಯವಾಗಿ ಹೊರವರ್ತುಲ ರಸ್ತೆಯ ಮೂಲಕವೇ ಮುಂದುವರಿಯಬೇಕು.

 

ಈ ಬದಲಾವಣೆಯು ಒಂದು ವಾರದ ಅವಧಿಗೆ ಮಾತ್ರ ಇರುವುದರಿಂದ ಸವಾರರು ಸಹಕರಿಸಬೇಕೆಂದು ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ. ಈ ಮಾರ್ಪಾಡುಗಳು ಸುಗಮ ಸಂಚಾರಕ್ಕೆ ಸಹಾಯ ಮಾಡಬಹುದೇ ಎಂದು ಪರಿಶೀಲಿಸಲು ಇದು ಒಂದು ಪ್ರಾಯೋಗಿಕ ಕ್ರಮವಾಗಿದೆ.

PREV
Read more Articles on
click me!

Recommended Stories

ಮದುವೆ ಮನೇಲಿ ಸ್ಮೈಲ್ ಪ್ಲೀಸ್ ಎನ್ನುತ್ತಾ ಫೋಟೋ ಕ್ಲಿಕ್ಕಿಸುತ್ತಿದ್ದಾಗಲೇ ಕೊನೆಯುಸಿರು ಬಿಟ್ಟ ಫೋಟೋಗ್ರಾಫರ್!
ಜೈ ಹನುಮಾನ್ ಮುಹೂರ್ತ ಬೆನ್ನಲ್ಲೇ ಮಂತ್ರಾಲಯಕ್ಕೆ ರಿಷಬ್ ಶೆಟ್ಟಿ ಭೇಟಿ, ರಾಯರ ಕುರಿತು ಸಿನಿಮಾ ಮಾಡ್ತಾರಾ ಡಿವೈನ್ ಸ್ಟಾರ್, ಹೇಳಿದ್ದೇನು?