ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ 15 ಸಾವಿರಕ್ಕೂ ಅಧಿಕ ಕೈಗಾರಿಕೆಗಳಿಗೆ ಸಂಸ್ಕರಿಸಿದ ನೀರನ್ನು ಪೂರೈಸಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.
ಬೆಂಗಳೂರು (ಏ.06): ಉದ್ಯಾನ ನಗರಿ ಬೆಂಗಳೂರಿನಲ್ಲಿ ಸಂಸ್ಕರಿಸಿದ ನೀರಿನ ಬಳಕೆಯನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಕೈಗಾರಿಕೆಗಳಿಗೆ ಪ್ರತ್ಯೇಕ ಪೈಪ್‌ಲೈನ್ ಮೂಲಕ ಸಂಸ್ಕರಿಸಿದ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಜಲಮಂಡಳಿ ಚಿಂತನೆ ನಡೆಸುತ್ತಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.
'ಬೆಂಗಳೂರು ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಅವರು, ಬೆಂಗಳೂರು ನಗರದಲ್ಲಿ 1,480 ಎಂ.ಎಲ್.ಡಿ ತ್ಯಾಜ್ಯ ನೀರು ಉತ್ಪಾದನೆ ಆಗುತ್ತದೆ. ಪ್ರಸ್ತುತ 1,212 ಎಂ.ಎಲ್.ಡಿ ನೀರನ್ನು ಶುದ್ದೀಕರಿಸಲಾಗುತ್ತಿದೆ. ಇದರ ಬಳಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಲಮಂಡಳಿ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸಂಸ್ಕರಿಸಿದ ನೀರಿನ ಬಳಕೆಯನ್ನು ಮತ್ತಷ್ಟು ಹೆಚ್ಚಿಸುವ ಮೂಲಕ ಕಾವೇರಿ ನೀರಿನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ನಮ್ಮ ಗುರಿಯಾಗಿದ್ದು, ಈ ಹಿನ್ನಲೆಯಲ್ಲಿ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಪ್ರತ್ಯೇಕ ಪೈಪ್ ಲೈನ್ ಮೂಲಕ ಕೈಗಾರಿಕೆಗಳಿಗೆ ಸಂಸ್ಕರಿಸಿದ ನೀರನ್ನು ಪೂರೈಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ. ಈ ತರಹದ ಪ್ರಯತ್ನ ದೇಶದಲ್ಲೇ ಮೊದಲು ಎಂದು ತಿಳಿಸಿದರು.
undefined
ಛತ್ತೀಸ್‌ಘಡದಿಂದ ರಾಜ್ಯಕ್ಕೆ ಬೀಸಿದ ಉಷ್ಣ ಅಲೆಗಳು; 18 ಮುಂಜಾಗ್ರತೆ ಕ್ರಮಗಳ ಪಟ್ಟಿ ಬಿಡುಗಡೆ ಮಾಡಿದ ಹವಾಮಾನ ಇಲಾಖೆ
ಕೈಗಾರಿಕೆಗಳಿಗೆ ಅಗತ್ಯ ನೀರು ಪೂರೈಸಲು ಜಲಮಂಡಳಿ ಬದ್ದ: ಬೆಂಗಳೂರು ನಗರದಲ್ಲಿರುವಂತಹ ಕೈಗಾರಿಕೆಗಳು ಹಾಗೂ ಕೈಗಾರಿಕಾ ಪ್ರದೇಶಗಳಿಗೆ ಅಗತ್ಯ ನೀರು ಪೂರೈಸಲು ಜಲಮಂಡಳಿ ಸಿದ್ದವಿದೆ. ಅದರಲ್ಲೂ, ಜಲಮಂಡಳಿಯ ಬಳಿ ಉತ್ತಮ ಗುಣಮಟ್ಟದ ಸಂಸ್ಕರಿಸಿದ ನೀರು ಲಭ್ಯವಿದೆ. ಭಾರತೀಯ ವಿಜ್ಞಾನ ಸಂಸ್ಥೆಯಿಂದ ಪ್ರಮಾಣೀಕೃತವಾದ ಸಂಸ್ಕರಿಸಿದ ನೀರನ್ನ ಕಡಿಯಲು ಹೊರತುಪಡಿಸಿ ಸ್ವಚ್ಚತೆ ಸೇರಿದಂತೆ ಬಹಳಷ್ಟು ಕಾರ್ಯಗಳಿಗೆ ಉಪಯೋಗಿಸಬಹುದಾಗಿದೆ. ಇದರ ಬಳಕೆಯನ್ನು ನಿಮ್ಮ ಪ್ರದೇಶದಲ್ಲಿ ಹೆಚ್ಚಿಸುವ ಅಗತ್ಯವಿದ್ದು, ಕೈಗಾರಿಕಾ ಸಂಸ್ಥೆಗಳು ಇದರ ಬಗ್ಗೆ ಕೈಗಾರಿಕೆಗಳಿಗೆ ಜಾಗೃತಿ ಮೂಡಿಸಿ ಜಲಮಂಡಳಿ ಅಧ್ಯಕ್ಷ ಡಾ. ವಿ ರಾಮ್ ಪ್ರಸಾತ್ ಮನೋಹರ್ ಹೇಳಿದರು.
ಕೊರತೆಯ ಸಮಯದಲ್ಲೂ ಸಮರ್ಪಕ ನೀರು ಪೂರೈಕೆ: ಪೀಣ್ಯ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಇದಲ್ಲಿ ಹೆಚ್ಚು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿವೆ. ಮಾರ್ಚ್ ತಿಂಗಳ ಮೊದಲ ವಾರದಲ್ಲೇ ಜಲಮಂಡಳಿಯೊಂದಿಗೆ ಸಭೆ ನಡೆಸಿ ನೀರಿನ ಪೂರೈಕೆಯಲ್ಲಿ ಕೊರತೆ ಆಗದಂತೆ ಮವಿ ಮಾಡಲಾಗಿತ್ತು. ಹೀಗಾಗಿ, ಅಂತರ್ಜಲ ಕುಸಿತದಿಂದ ಎದುರಾಗಿರುವ ನೀರಿನ ಕೊರತೆಯ ಸಮಯದಲ್ಲೂ ಪೀಣ್ಯ ಸೇರಿದಂತೆ ನಗರದ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಸಮರ್ಪಕವಾಗಿ ನೀರು ಪೂರೈಸುತ್ತಿದೆ ಎಂದು ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷರಾದ ಆರಿಫ್ ಹೆಚ್.ಎಂ ಹೇಳಿದರು.
Viral Video: ನೆಲಕ್ಕುರುಳಿದ ಬೆಂಗಳೂರು ಬಳಿಯ ಹುಸ್ಕೂರು ಮದ್ದೂರಮ್ಮ ಜಾತ್ರೆಯ 120 ಅಡಿ ತೇರು
ಈ ಸಭೆಯಲ್ಲಿ ಕೈಗಾರಿಕೋದ್ಯಮಿಗಳು, ಕೈಗಾರಿಕಾ ಸಂಸ್ಥೆಗಳಾದ ಪೀಣ್ಯ ಕೈಗಾರಿಕಾ ಸಂಸ್ಥೆ, ಎಫ್‌ಕೆಸಿಸಿಐ, ಕಾಸಿಯಾ ಪದಾಧಿಕಾರಿಗಳು, ಎಂಎಸ್‌ಎಂಇ ನಿರ್ದೇಶಕರಾದ ಡಾ. ವಿಜಯಮಹಾಂತೇಶ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮದ ನಿರ್ದೇಶಕರಾದ ಕುಮಾರ್ ಅವರು ಉಪಸ್ಥಿತರಿದ್ದರು.