ಸಿದ್ದರಾಮಯ್ಯ ಮನೆ ಪಕ್ಕದಲ್ಲೇ ಇರುವ ಖಾಸಗಿ ಶಾಲೆಯಿಂದ ಕನ್ನಡ ವಿರೋಧಿ ನಡೆ, ಕನ್ನಡ ಮಾತನಾಡಿದ ವಿದ್ಯಾರ್ಥಿಗಳಿಗೆ ದಂಡ?

Published : Sep 11, 2025, 06:21 PM IST
Bengaluru Private school accused of fining students

ಸಾರಾಂಶ

fining students for Speaking in kannada ಬೆಂಗಳೂರಿನ ಸಿಂಧಿ ಪ್ರೌಢಶಾಲೆಯಲ್ಲಿ ಕನ್ನಡ ಮಾತನಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರವು ತನಿಖೆಗೆ ಆದೇಶಿಸಿದೆ.

ಬೆಂಗಳೂರು (ಸೆ.11): ರಾಜಧಾನಿ ಬೆಂಗಳೂರಿನ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನಿವಾಸವಿರುವ ಕುಮಾರಕೃಪಾ ರಸ್ತೆಯಲ್ಲಿರುವ ಸಿಂಧಿ ಪ್ರೌಢ ಶಾಲೆಯು ಕನ್ನಡ ಮಾತನಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಶಾಲಾ ಆಡಳಿತ ಮಂಡಳಿ ಕೇವಲ ಇಂಗ್ಲಿಷ್‌ನಲ್ಲಿ ಮಾತ್ರ ಮಾತನಾಡಬೇಕು ಎಂದು ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಿದೆ ಎಂದು ವರದಿಯಾಗಿದೆ. ಈ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಶಾಲೆ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು, ಈ ಆರೋಪಗಳ ನೈಜತೆಯನ್ನು ಪರಿಶೀಲಿಸಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಈ ಘಟನೆಯ ಕುರಿತು ಪ್ರತಿಕ್ರಿಯೆ ನೀಡಲು ಸಿಂಧಿ ಶಾಲೆ ಆಡಳಿತ ಮಂಡಳಿ ನಿರಾಕರಿಸಿದೆ. ಕನ್ನಡ ಮಾತನಾಡಿದ ಕಾರಣಕ್ಕೆ ವಿದ್ಯಾರ್ಥಿಗಳಿಗೆ ದಂಡ ವಿಧಿಸಿದರೆ, ಅದು ಕನ್ನಡ ವಿರೋಧಿ ನೀತಿಯಾಗಲಿದ್ದು, ಪ್ರಾಧಿಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ.

ಪಠ್ಯದಲ್ಲಿ ತಮನ್ನಾ ಪಾಠ ನೀಡಿದ್ದ ಸಿಂಧಿ ಪ್ರೌಢ ಶಾಲೆ

ಸಿಂಧಿ ಪ್ರೌಢ ಶಾಲೆ ವಿಚಾರದಲ್ಲಿ ವಿವಾದಗಳು ಹೊಸತೇನಲ್ಲ. ಕಳೆದ ವರ್ಷದ ಜೂನ್‌ನಲ್ಲಿ ಹೆಬ್ಬಾಳದ ಸಿಂಧಿ ಪ್ರೌಢಶಾಲೆ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಕುರಿತ ಪಠ್ಯ ಅಳವಡಿಸಿಕೊಂಡಿತ್ತು. ಇದರ ವಿರುದ್ಧ ಪೋಷಕರು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಖ್ಯಾತ ನಟಿ ತಮನ್ನಾ ಭಾಟಿಯಾ ಅವರ ಕುರಿತ ಪಾಠವನ್ನು 7ನೇ ತರಗತಿಯ ಪಠ್ಯಕ್ರಮದಲ್ಲಿ ಸೇರಿಸಿರುವ ಬಗ್ಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ತಮನ್ನಾ ಅವರ ಕುರಿತ ಮಾಹಿತಿಯು ಮಕ್ಕಳ ವಯಸ್ಸಿಗೆ ಸೂಕ್ತವಲ್ಲದ ವಿಷಯಗಳ ಕಡೆಗೆ ಆಕರ್ಷಿಸಬಹುದು ಎನ್ನುವುದು ಪೋಷಕರ ಆತಂಕವಾಗಿತ್ತು.

ತಮನ್ನಾ ಕುರಿತು ಮಕ್ಕಳು ಆನ್‌ಲೈನ್‌ನಲ್ಲಿ ಹೆಚ್ಚಿನ ಮಾಹಿತಿ ಹುಡುಕಿದಾಗ, ಅವರಿಗೆ ಸೂಕ್ತವಲ್ಲದ ವಿಷಯಗಳು ಲಭ್ಯವಾಗುವ ಸಾಧ್ಯತೆ ಇದೆ. ಹೀಗಾಗಿ, ಈ ಪಾಠವನ್ನು ತಕ್ಷಣವೇ ಕೈಬಿಡುವಂತೆ ಶಾಲಾ ಆಡಳಿತ ಮಂಡಳಿಗೆ ಪೋಷಕರು ಮನವಿ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಶಾಲೆ, ಪಠ್ಯದಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಹೇಳಿತ್ತು. ಈ ಪಠ್ಯವು ಸಿಂಧಿ ಅಲ್ಪಸಂಖ್ಯಾತ ಸಮುದಾಯದ ಸಂಸ್ಕೃತಿ ಮತ್ತು ಇತಿಹಾಸವನ್ನು ಪರಿಚಯಿಸುವ ಉದ್ದೇಶ ಹೊಂದಿದೆ. 1947-1962ರ ಅವಧಿಯಲ್ಲಿ ಸಿಂಧ್ ವಿಭಜನೆಯ ನಂತರದ ಜೀವನ, ವಲಸೆ, ಮತ್ತು ಸಮುದಾಯದ ಕಲಹಗಳ ಬಗ್ಗೆ ಈ ಪಾಠದಲ್ಲಿ ವಿವರಿಸಲಾಗಿದೆ ಎಂದು ಸ್ಪಷ್ಟೀಕರಣ ನೀಡಿತ್ತು.

 

PREV
Read more Articles on
click me!

Recommended Stories

ನಾದಬ್ರಹ್ಮ ಇಡ್ಲಿ ಸೆಂಟರ್‌ ಮಾಲೀಕ, 28 ವರ್ಷದ ಸಂದೇಶ್‌ ಹೃದಯಾಘಾತದಿಂದ ಸಾವು
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ