ಬೆಂಗಳೂರು ಮೆಟ್ರೋ ಸೇವೆ ವ್ಯತ್ಯಯ: ನೇರಳೆ ಮಾರ್ಗದ ದಕ್ಷಿಣ ಭಾಗದಲ್ಲಿ ಶುಕ್ರವಾರ ಮೆಟ್ರೋ ಸಂಚಾರ ಸ್ಥಗಿತ

By Sathish Kumar KH  |  First Published Sep 27, 2023, 7:11 PM IST

ನಮ್ಮ ಮೆಟ್ರೋ ನೇರಳೆ ಮಾರ್ಗದ ಕೆಂಗೇರಿಯಿಂದ ಚಲ್ಲಘಟ್ಟ ಮಟ್ರೋ ನಿಲ್ದಾಣಗಳ ನಡುವೆ ರೈಲ್ವೆ ಸುರಕ್ಷತಾ ಪರಿಶೀಲನೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಸೆ.29 ಶುಕ್ರವಾರ ಕೆಂಗೇರಿಯಿಂದ ಮೈಸೂರು ರಸ್ತೆವರೆಗಿನ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗುತ್ತಿದೆ.


ಬೆಂಗಳೂರು (ಸೆ.27): ಬೆಂಗಳೂರು ನಮ್ಮ ಮೆಟ್ರೋ ನೇರಳೆ ಮಾರ್ಗದ ಕೆಂಗೇರಿಯಿಂದ ಚಲ್ಲಘಟ್ಟ ಮಟ್ರೋ ನಿಲ್ದಾಣಗಳ ನಡುವೆ ರೈಲ್ವೆ ಸುರಕ್ಷತಾ ಪರಿಶೀಲನೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಸೆ.29 ಶುಕ್ರವಾರ ಕೆಂಗೇರಿಯಿಂದ ಮೈಸೂರು ರಸ್ತೆವರೆಗಿನ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗುತ್ತಿದೆ.

ರಾಜ್ಯ ರಾಜಧಾನಿ ಬೆಂಗಳೂರು ನಗರದ ಟ್ರಾಫಿಕ್‌ ರಹಿತ ಸಂಚಾರಕ್ಕೆ ಅನುಕೂಲವಾಗಿರುವ ಮೆಟ್ರೋ ನೇರಳೆ ಮಾರ್ಗದ ಕೆಂಗೇರಿಯಿಂದ ಮೈಸೂರು ರಸ್ತೆ ಮಾರ್ಗದಲ್ಲಿ ಸೆ.29ರ ಶುಕ್ರವಾರ ಮೆಟ್ರೋ ರೈಲು ಸಂಚಾರ ಇರುವುದಿಲ್ಲ. ಕೆಂಗೇರಿಯಿಂದ ಚಲ್ಲಘಟ್ಟ ಮಟ್ರೋ ನಿಲ್ದಾಣಗಳ ನಡುವೆ ಹೊಸದಾಗಿ ನಿರ್ಮಿಸಲಾದ ಮಾರ್ಗದ ಶಾಸನಬದ್ಧ ಸುರಕ್ಷತಾ ಪರಿಶೀಲನೆಯನ್ನು ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು (ದಕ್ಷಿಣ ವೃತ್ತ) ನಡೆಸುವುದರಿಂದ, ಮೆಟ್ರೋ ರೈಲು ಕಾರ್ಯಾಚರಣೆಗಳಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ.

Tap to resize

Latest Videos

undefined

ಮೈಸೂರು ಮನೆಯಲ್ಲಿ 9 ಬಗೆಯ ಹಾವುಗಳ ಸಾಕಣೆ: ದಾಳಿ ಬೆನ್ನಲ್ಲೇ ಬೆಚ್ಚಿಬಿದ್ದ ನೆರೆಹೊರೆಯವರು

ಇನ್ನು ನೇರಳೆ ಮಾರ್ಗದ ಮುಂದುವರೆದ ಭಾಗವಾದ ಮೈಸೂರು ರಸ್ತೆಯಿಂದ ಬೈಯಪ್ಪನಹಳ್ಳಿ ಹಾಗೂ ವೈಟ್ ಫೀಲ್ಡ್ (ಕಾಡುಗೋಡಿ) ಮತ್ತು ಕೃಷ್ಣರಾಜಪುರ ನಿಲ್ದಾಣಗಳ ನಡುವೆ ಪೂರ್ಣ ದಿನದಲ್ಲಿ ಮೆಟ್ರೋ ರೈಲು ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ. ಸಾಮಾನ್ಯ ದಿನಗಳಂತೆ ಬೆಳಗ್ಗೆಯಿಂದ ರಾತ್ರಿವರೆಗೆ ಮೆಟ್ರೋ ಸೇವೆ ಲಭ್ಯವಿರುತ್ತದೆ. ಉಳಿದಂತೆ ನಮ್ಮ ಮೆಟ್ರೋ ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕೆಂದು ಮಾಧ್ಯಮ ಪ್ರಕಟಣೆ ಮೂಲಕ ಮನವಿ ಮಾಡಿರುವ ಬೆಂಗಳೂರು ಮೆಟ್ರೋ ಅಧಿಕಾರಿಗಳು ಪ್ರಯಾಣಿಕರು ಮೆಟ್ರೋ ಸಂಸ್ಥೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. 

ಕರ್ನಾಟಕ ಬಂದ್‌ಗೆ ಮೆಟ್ರೋ ಸಂಚಾರ ಸ್ಥಗಿತವಿಲ್ಲ:  ಇನ್ನು ಕರ್ನಾಟಕ ಬಂದ್‌ ಅಥವಾ ಇನ್ಯಾವುದೇ ಕಾರಣದಿಂದ ಮೆಟ್ರೋ ಸಂಚಾರವನ್ನು ಸ್ಥಗಿತ ಮಾಡುವ ಬಗ್ಗೆ ಮಾಹಿತಿಯನ್ನು ನೀಡಿಲ್ಲ. ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳಿಂದ ಮಾತ್ರ ಕರೆ ನೀಡಲಾಗಿದ್ದು, ಸರ್ಕಾರದಿಂದ ಬಂದ್‌ಗೆ ಅನುಮತಿ ನೀಡಿರುವುದಿಲ್ಲ. ಜೊತೆಗೆ, ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯಾಗದಂತೆ ಬಂದ್‌ ಮಾಡಲಾಗುತ್ತಿದ್ದು, ಮೆಟ್ರೋ ಸಂಚಾರ ಸಾಮಾನ್ಯ ದಿನಗಳಂತೆ ಮೆಟ್ರೋ ಸೇವೆ ಲಭ್ಯವಿರುತ್ತದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. 

99 ಟ್ರಾಫಿಕ್‌ ನಿಯಮ ಉಲ್ಲಂಘಿಸಿದ ಬೆಂಗಳೂರಿನ ಬೈಕ್‌ ಸವಾರನನ್ನು ಬಂಧಿಸಿದ ಪೊಲೀಸರು, 56 ಸಾವಿರ ದಂಡ!

click me!