ಬೆಂಗಳೂರು ರಾಮಯ್ಯ ಆಸ್ಪತ್ರೆ ಸ್ಟಾಫ್ ನರ್ಸ್ ಸಾವು; ಗಂಡನ ಕಿರುಕುಳ ಆರೋಪ

Published : Jan 23, 2025, 12:47 PM IST
ಬೆಂಗಳೂರು ರಾಮಯ್ಯ ಆಸ್ಪತ್ರೆ ಸ್ಟಾಫ್ ನರ್ಸ್ ಸಾವು; ಗಂಡನ ಕಿರುಕುಳ ಆರೋಪ

ಸಾರಾಂಶ

ಬೆಂಗಳೂರಿನಲ್ಲಿ ರಾಮಯ್ಯ ಆಸ್ಪತ್ರೆಯ ನರ್ಸ್ ವಿಜಯಕುಮಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡನಿಂದ ದೈಹಿಕ ಹಾಗೂ ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದರು ಎಂದು ಆರೋಪಿಸಲಾಗಿದೆ. ಕೊಡಿಗೇಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು (ಜ.23): ಮನೆಯಲ್ಲಿ ಗಂಡ ನನ್ನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿ, ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾನೆಂದು ಆರೋಪಿಸಿ ರಾಮಯ್ಯ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯ ಕುಮಾರಿ (38) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಆಗಿದ್ದಾಳೆ. ಗಂಡನಿಂದ ದೈಹಿಕ ಹಾಗೂ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದೆ. ಮೃತ ವಿಜಯಕುಮಾರಿ ಬೆಂಗಳೂರಿನ ಪ್ರತಿಷ್ಠಿತ ರಾಮಯ್ಯ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ, ಕೌಟುಂಬಿಕ ಕಲಹದಿಂದಾಗಿ ನಿನ್ನೆ ಬೆಳಗಿನ ಜಾವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದಿಬಂದಿದೆ.

ನರ್ಸ್ ವಿಜಯಕುಮಾರಿಗೆ ಗಂಡ ನಾಗರಾಜ್ ಪ್ರತಿನಿತ್ಯ ಹೊಡೆದು ಒಡೆದು ಕಿರುಕುಳ ಕೊಡುತ್ತಿದ್ದನಂತೆ. ಈ ಕುರಿತು ಪೋಷಕರ ಬಳಿ ಹೇಳಿಕೊಂಡಿದ್ದ ಮೃತ ವಿಜಯ ಕುಮಾರಿ. ಸದ್ಯ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಆಗಿದೆ. ದೂರು ದಾಖಲಿಸಿ ಪೊಲೀಸರು ಮೃತ ಮಹಿಳೆ ವಿಜಯ ಕುಮಾರಿಯ ಗಂಡ ನಾಗರಾಜ್ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

PREV
Read more Articles on
click me!

Recommended Stories

ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಡಿ.20ಕ್ಕೆ ಚಿತ್ರಕಲಾ ಸ್ಪರ್ಧೆ: ಎಲ್ಲಿ?
ವಿಶ್ವೇಶ್ವರಯ್ಯ ಟರ್ಮಿನಲ್‌ ರೈಲು ನಿಲ್ದಾಣ ವಿಸ್ತರಣೆ ಕಾರ್ಯ ಆರಂಭ: ಪ್ರಯಾಣಿಕರು ಕಾಯುವ ದುಸ್ಥಿತಿ