Latest Videos

ಬಕ್ರೀದ್ ಹಿನ್ನೆಲೆಯಲ್ಲಿ ಬೆಂಗಳೂರಿನ ಈ ರಸ್ತೆಗಳು, ಫ್ಲೈ ಓವರ್‌ಗಳಲ್ಲಿ ವಾಹನ ಸಂಚಾರ ನಿಷೇಧ

By Sathish Kumar KHFirst Published Jun 16, 2024, 9:15 PM IST
Highlights

ಬಕ್ರೀದ್ ಹಿನ್ನೆಲೆಯಲ್ಲಿ ಬೆಂಗಳೂರಿನ ಈ ರಸ್ತೆಗಳು ಮತ್ತು ಮೇಲ್ಸೇತುವೆಗಳಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರ ನಿಷೇಧಿಸಿ ಸಂಚಾರಿ ಪೊಲೀಸ್ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

ಬೆಂಗಳೂರು (ಜೂ.16): ರಾಜ್ಯದಲ್ಲಿ ನಾಳೆ ಸಂಭ್ರಮದಿಂದ ಬಕ್ರೀದ್ ಆಚರಣೆ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಬಕ್ರೀದ್ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರಿಗೆ ಪ್ರಾರ್ಥನೆ ತೆರಳಲು ಹಾಗೂ ಜನಸಂದಣಿ ಸೇರ್ಪಡೆಗೆ ತೊಂದರೆ ಆಗದಂತೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗುತ್ತಿದೆ. ವಾಹನ ಸವಾರರು ಬದಲಿ ಮಾರ್ಗ ಅನುಸರಿಸಿ ಸಂಚಾರ ಮಾಡುವಂತೆ ಬೆಂಗಳೂರು ಟ್ರಾಫಿಕ್ ಪೊಲೀಸ್ ಇಲಾಖೆಯಿಂದ ಮನವಿ ಮಾಡಲಾಗಿದೆ.

ಚಿಕ್ಕಪೇಟೆ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಮೈಸೂರು ರಸ್ತೆಯ ಬಿ.ಬಿ ಜಂಕ್ಷನ್ ಹತ್ತಿರದ ಮಸೀದಿ ಮತ್ತು ಚಾಮರಾಜಪೇಟೆ 1ನೇ ಮುಖ್ಯ ರಸ್ತೆಯ 7ನೇ ಅಡ್ಡರಸ್ತೆ ಬಳಿಯ ಬಿಬಿಎಂಪಿ ಆಟದ ಮೈದಾನದಲ್ಲಿ ಜೂ.17ರಂದು ಬಕ್ರೀದ್ ಪ್ರಯುಕ್ತ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಲು ಸೇರುವುದರಿಂದ ಮೈಸೂರು ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ, ಕೆಳಕಂಡಂತೆ ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ.

ಬೆಳಿಗ್ಗೆ 06-00 ಗಂಟೆಯಿಂದ ಪ್ರಾರ್ಥನೆ ಮುಗಿಯುವವರೆಗೆ ಈ ರಸ್ತೆ ಬಂದ್:

1. ಮೈಸೂರು ರಸ್ತೆಯ ಟೋಲ್‌ಗೇಟ್ ಜಂಕ್ಷನ್ ನಿಂದ ಬಿಬಿ ಜಂಕ್ಷನ್ ಮೂಲಕ ಬಿಜಿಎಸ್ ಪ್ರೈಓವರ್ ಮೇಲ್ಬಾಗದಿಂದ ಟೌನ್‌ ಹಾಲ್‌ ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

2. ಟೌನ್‌ ಹಾಲ್ ಕಡೆಯಿಂದ ಮೈಸೂರು ಕಡೆಗೆ ಬಿಜಿಎಸ್ ಪ್ರೈಓವರ್ ಮೇಲ್ಬಾಗದಿಂದ ಬಿಬಿ ಜಂಕ್ಷನ್ ಮಾರ್ಗವಾಗಿ ಟೋಲ್‌ ಗೇಟ್ ಜಂಕ್ಷನ್ ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಬಕ್ರೀದ್ ಕುರ್ಬಾನಿಗೆ ತಂದ ಮೇಕೆ ಮೇಲೆ ರಾಮನ ಹೆಸರು : ಸಿಟ್ಟಿಗೆದ್ದ ಜನ, ಮಾಂಸದಂಗಡಿ ಮಾಲೀಕನ ಬಂಧನ

ಪರ್ಯಾಯ ಮಾರ್ಗಗಳು

  • * ಮೈಸೂರು ರಸ್ತೆ ಕಡೆಯಿಂದ ಟೌನ್ ಹಾಲ್ ಕಡೆಗೆ ಹೋಗುವ ವಾಹನಗಳು ಬ್ಯಾಟರಾಯನಪುರ ಸಂಚಾರ ಠಾಣಾ ಸರಹದ್ದಿನ ಕಿಸ್ಕೋ ಜಂಕ್ಷನ್‌ ನಲ್ಲಿ ಎಡತಿರುವು ಪಡೆದುಕೊಂಡು ವಿಜಯನಗರದ ಮೂಲಕ ಸಾಗಬಹುದು.
  • * ಟೌನ್‌ಹಾಲ್ ಕಡೆಯಿಂದ ಮೈಸೂರು ಕಡೆಗೆ ಹೋಗುವ ವಾಹನಗಳು ಬಿಜಿಎಸ್ ಪ್ರೈಓವರ್‌ ಕೆಳಗಡೆ ಸರ್ವಿಸ್ ರಸ್ತೆಯನ್ನು ಬಳಸಿಕೊಂಡು ವೆಟರ್ನರಿ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಗೂಡ್ಸ್ ಶೆಡ್ ರಸ್ತೆಯ ಮೂಲಕ ಅಥವಾ ಸಿರಸಿ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದುಕೊಂಡು ಜೆ.ಜೆ ನಗರ-ಟ್ಯಾಂಕ್‌ ಬಂಡ್ ರಸ್ತೆ ಬಿನ್ನಿಮಿಲ್ ಜಂಕ್ಷನ್- ಹುಣಸೇಮರ ಮೂಲಕ ಸಾಗುವುದು.
  • * ಬಸವನಗುಡಿ & ಚಾಮರಾಜಪೇಟೆ ಕಡೆಯಿಂದ ಮೆಜೆಸ್ಟಿಕ್ ಕಡೆಗೆ ಹೋಗುವಂತಹ ವಾಹನಗಳು ಚಾಮರಾಜಪೇಟೆ 1ನೇ ಮುಖ್ಯರಸ್ತೆ, 5ನೇ ಅಡ್ಡ ರಸ್ತೆ ಮೂಲಕ ಮೈಸೂರು ರಸ್ತೆ, ಸಿರ್ಸಿ ಸರ್ಕಲ್, ಬಿನ್ನಿಮಿಲ್ ರಸ್ತೆಯ ಮೂಲಕ/ಗೂಡ್ಸ್ ಶೆಡ್ ರಸ್ತೆಯ ಮೂಲಕ ಸಾಗುವುದು.

ಬನ್ನೇರುಘಟ್ಟ ಮುಖ್ಯ ರಸ್ತೆಯ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ:
ಜೂ.17ರಂದು ಬಕ್ರೀದ್ ಪ್ರಯುಕ್ತ ಬನ್ನೇರುಘಟ್ಟ ಮುಖ್ಯ ರಸ್ತೆಯ, ಗುರಪ್ಪನಪಾಳ್ಯ ಜಂಕ್ಷನ್‌ನಲ್ಲಿ ಹೆಚ್ಚಿನ ಜನರು ಪ್ರಾರ್ಥನೆ ಸಲುವಾಗಿ ಸೇರಲಿದ್ದು ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಪ್ರಾರ್ಥನೆ ಮುಗಿಯುವವರೆಗೆ ನಿರ್ಬಂಧಿಸಲಾಗಿದೆ. ಈ ಸಂಬಂಧವಾಗಿ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಠಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ.

ಸಂಚಾರ ನಿರ್ಬಂಧ :

  • * ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಸಾಗರ್ ಆಸ್ಪತ್ರೆ ಜಂಕ್ಷನ್ ನಿಂದ ಗುರಪ್ಪನಪಾಳ್ಯ ಜಂಕ್ಷನ್ ವರೆಗೆ.
  • * ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಜಿ.ಡಿ.ಮರ ಜಂಕ್ಷನ್ ನಿಂದ ಗುರಪ್ಪನಪಾಳ್ಯ ಜಂಕ್ಷನ್ ವರೆಗೆ.
  • * 39ನೇ ಕ್ರಾಸ್ ರಸ್ತೆಯಲ್ಲಿ ಗುರಪ್ಪನಪಾಳ್ಯ ಜಂಕ್ಷನ್ ನಿಂದ ರೆಡ್ಡಿ ಆಸ್ಪತ್ರೆ ಜಂಕ್ಷನ್ ವರೆಗೆ.

ತ್ಯಾಗ, ಬಲಿದಾನವನ್ನು ಸ್ಮರಿಸುವ ಮುಸಲ್ಮಾನರ ಪವಿತ್ರ ಹಬ್ಬ ಈದುಲ್ ಅಝ್ಹಾ

ಪರ್ಯಾಯ ಮಾರ್ಗಗಳು :
* ಡೈರಿ ಸರ್ಕಲ್ ನಿಂದ ಬರುವ ವಾಹನಗಳು ಸಾಗರ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ತಿಲಕ ನಗರ ಮುಖ್ಯ ರಸ್ತೆಯಲ್ಲಿ ಚಲಿಸಿ ಸ್ವಾಗತ್ ಜಂಕ್ಷನ್ ನಲ್ಲಿ ಎಡ ತಿರುವು ಪಡೆದು, ಈಸ್ಟ್ ಎಂಡ್ ಮುಖ್ಯ ರಸ್ತೆಯಲ್ಲಿ ಚಲಿಸಿ, ಈಸ್ಟ್ ಎಂಡ್ ಜಂಕ್ಷನ್ ನಲ್ಲಿ ಬಲ ತಿರುವು ಪಡೆದು 28ನೇ ಮೈನ್ ಜಂಕ್ಷನ್‌ನಲ್ಲಿ ಎಡಕ್ಕೆ ತಿರುವು ಪಡೆದು 8ನೇ ಮೇನ್ ರಸ್ತೆಯಲ್ಲಿ ಚಲಿಸಿ ನೇರ ಡಾಲ್ಮೀಯಾ ಜಂಕ್ಷನ್ ವರೆಗೆ ಚಲಿಸಿ, ಅಲ್ಲಿ ಎಡಕ್ಕೆ ಹೊರ ರಿಂಗ್ ರಸ್ತೆಯಲ್ಲಿ ಎಡಕ್ಕೆ ತಿರುವು ಪಡೆದು ಜಿ.ಡಿ ಮರ ಜಂಕ್ಷನ್ ಕಡೆಗೆ ಚಲಿಸಿ ಅಲ್ಲಿ ಬಲಕ್ಕೆ ಬನ್ನೇರುಘಟ್ಟ ಮುಖ್ಯ ರಸ್ತೆಗೆ ಸಂಪರ್ಕ ಪಡೆದು ಸಂಚರಿಸಬಹುದಾಗಿದೆ.

* ಬನ್ನೇರುಘಟ್ಟ ಮುಖ್ಯ ರಸ್ತೆ ಬಿಳೇಕಹಳ್ಳಿ ಕಡೆಯಿಂದ ಡೈರಿ ಜಂಕ್ಷನ್ ಕಡೆಗೆ ಬರುವ ವಾಹನ ಸವಾರರು ಜಿ.ಡಿ ಮರ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಹೊರ ರಿಂಗ್ ರಸ್ತೆಯಲ್ಲಿ ಚಲಿಸಿ, ಡಾಲ್ಟಿಯಾ ಜಂಕ್ಷನ್ ನಲ್ಲಿ ಬಲಕ್ಕೆ ತಿರುವು ಪಡೆದು 8ನೇ ಮೇನ್ ರಸ್ತೆಯಲ್ಲಿ ಚಲಿಸಿ 28ನೇ ಮುಖ್ಯ ರಸ್ತೆ ಜಂಕ್ಷನ್‌ನಲ್ಲಿ ಬಲಕ್ಕೆ ತಿರುವು ಪಡೆದು, ಈಸ್ಟ್ ಎಂಡ್ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಈಸ್ಟ್ ಎಂಡ್ ಮುಖ್ಯ ರಸ್ತೆಯ ಮುಖಾಂತರ ಸ್ವಾಗತ್ ಜಂಕ್ಷನ್ ತಲುಪಿ ಬಲ ತಿರುವು ಪಡೆದು, ಸಾಗರ್ ಜಂಕ್ಷನ್ ನಲ್ಲಿ ಎಡಕ್ಕೆ ತಿರುಗಿ ಬನ್ನೇರುಘಟ್ಟ ಮುಖ್ಯ ರಸ್ತೆಗೆ ಸಂಪರ್ಕ ಪಡೆದು, ಡೈರಿ ಜಂಕ್ಷನ್ ಕಡೆಗೆ ಸಂಚರಿಸಬಹುದಾಗಿದೆ.

click me!