ಭಾರೀ ಮಳೆಯಿಂದ ಚರಂಡಿಗೆ ತ್ಯಾಜ್ಯ ಕಟ್ಟಿಕೊಂಡು ರಸ್ತೆಯಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾಗಿ ತ್ಯಾಜ್ಯವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿದ ಸಂಚಾರ ಪೊಲೀಸರ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಬೆಂಗಳೂರು (ಸೆ.22): ಭಾರೀ ಮಳೆಯಿಂದ ಚರಂಡಿಗೆ ತ್ಯಾಜ್ಯ ಕಟ್ಟಿಕೊಂಡು ರಸ್ತೆಯಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾಗಿ ತ್ಯಾಜ್ಯವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿದ ಸಂಚಾರ ಪೊಲೀಸರ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಗುರುವಾರ ರಾತ್ರಿ ಸುರಿದ ಭಾರೀ ಮಳೆಗೆ ಸಾರಕ್ಕಿ ಜಂಕ್ಷನ್‌ನಲ್ಲಿ ರಸ್ತೆಯ ಬದಿ ಚರಂಡಿಯಲ್ಲಿ ತ್ಯಾಜ್ಯ ಕಟ್ಟಿಕೊಂಡು ಮಳೆ ನೀರು ರಸ್ತೆಯಲ್ಲಿ ನಿಂತ ಪರಿಣಾಮ ರಸ್ತೆ ಕೆರೆಯಂತಾಗಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿತ್ತು.
ಶುಕ್ರವಾರ ಬೆಳಗ್ಗೆ ಈ ಜಂಕ್ಷನ್‌ಗೆ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆಯ ಇಬ್ಬರು ಕಾನ್ಸ್‌ಟೇಬಲ್‌ಗಳು, ಬಿಬಿಎಂಪಿ ಸಿಬ್ಬಂದಿ ಬರುವವರೆಗೂ ಕಾಯದೆ ತಾವೇ ಕಟ್ಟಿಗೆ ತೆಗೆದುಕೊಂಡು ಚರಂಡಿಗೆ ಹಾಕಿ ತ್ಯಾಜ್ಯವನ್ನು ತೆರವುಗೊಳಿಸಿ ರಸ್ತೆಯಲ್ಲಿ ನಿಂತಿದ್ದ ನೀರು ಸರಾಗವಾಗಿ ಹರಿಯುವಂತೆ ಮಾಡಿದರು.
ಪಾಕಿಸ್ತಾನದ ಲಾಹೋರ್‌ನಲ್ಲಿ ಗಣೇಶ ಪ್ರತಿಷ್ಠಾಪಿಸುತ್ತೇವೆ: ಶಾಸಕ ಬಸನಗೌಡ ಯತ್ನಾಳ್
ಸಂಚಾರ ಕಾನ್ಸ್‌ಟೇಬಲ್‌ಗಳ ಈ ಕಾರ್ಯವನ್ನು ಸಾರ್ವಜನಿಕರೊಬ್ಬರು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ಸೂಚಿಸಿದ್ದರು. ಈ ವೀಡಿಯೊ ವೀಕ್ಷಿಸಿದ ಹಲವು ನೆಟ್ಟಿಗರ ಪೊಲೀಸರ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ತಮ್ಮ ಸಿಬ್ಬಂದಿಯ ಕರ್ತವ್ಯ ಪ್ರಜ್ಞೆ ಹಾಗೂ ಸಾಮಾಜಿಕ ಸೇವೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಮರ್ಪಕ ಚರಂಡಿ, ಯುಜಿಡಿ ಸೌಲಭ್ಯಕ್ಕಾಗಿ ಪ್ರತಿಭಟನೆ: ಮಳವಳ್ಳಿ ಪಟ್ಟಣದ 7ನೇ ವಾರ್ಡ್‌ಗೆ ಸಮರ್ಪಕ ಚರಂಡಿ ಮತ್ತು ಯುಜಿಡಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ನಿವಾಸಿಗಳು ಬುಧವಾರ ಪುರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಿವಾಸಿಗಳು ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಳೊಂದಿಗೆ ಕಚೇರಿ ಎದುರು ಧರಣಿ ನಡೆಸಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಎನ್.ಎಲ್.ಭರತ್ ರಾಜ್ ಮಾತನಾಡಿ, ಪಟ್ಟಣದ ಸರ್ಕಾರಿ ಐಟಿಐ ಕಾಲೇಜು ಹಿಂಭಾಗದ ನಿವಾಸಿಗಳ ಬಡಾವಣೆಗೆ ಪುರಸಭೆ ಇದುವರೆಗೂ ಸಮರ್ಪಕ ಚರಂಡಿ ಮತ್ತು ಯುಜಿಡಿ ಸೌಲಭ್ಯ ಕಲ್ಪಿಸುವಲ್ಲಿ ವಿಫಲವಾಗಿದೆ.
ನಮ್ಮನ್ನ ಕೆಣಕಿದರೆ ಮಸೀದಿಯಲ್ಲೂ ಗಣೇಶ ಪ್ರತಿಷ್ಠಾಪಿಸುತ್ತೇವೆ: ಪ್ರಮೋದ್ ಮುತಾಲಿಕ್ ಎಚ್ಚರಿಕೆ
ಇದರಿಂದ ಮಳೆಗೆ ಕಲುಷಿತ ನೀರು ಮನೆಗಳಿಗೆ ನುಗ್ಗಿ ಸಾಕಷ್ಟು ಅವಾಂತರ ಸೃಷ್ಟಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಅವ್ಯವಸ್ಥೆಯಿಂದ ಪರಿಸರ ಮಾಲಿನ್ಯ, ಜಲ ಮಾಲಿನ್ಯ, ವಾಯು ಮಾಲಿನ್ಯವಾಗಿ ಕೊಳಚೆ ಪ್ರದೇಶವಾಗಿ ಮಾರ್ಪಟ್ಟಿದೆ. ನಿವಾಸಿಗಳಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪುರಸಭೆಯು ವಿಫಲವಾಗಿದೆ ಎಂದು ದೂರಿದರು.