ಬೆಂಗಳೂರು ನೀರಿನ ಸಮಸ್ಯೆ ನೀಗಿಸಿದ ಜಲಮಂಡಳಿ ಅಧ್ಯಕ್ಷರಿಗೆ ಎಫ್‌ಕೆಸಿಸಿಐ ಸನ್ಮಾನ

By Sathish Kumar KH  |  First Published May 16, 2024, 8:38 PM IST

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿ ಕಾವೇರಿ ನದಿಯಲ್ಲಿ ನೀರಿನ ಅಭಾವವಿದ್ದರೂ ಬೆಂಗಳೂರಿಗೆ ನೀರಿನ ಪೂರೈಕೆಯ ಸಮಸ್ಯೆ ಪರಿಹರಿಸಿದ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅವರಿಗೆ ಎಫ್‌ಕೆಸಿಸಿಐ ವತಿಯಿಂದ ಸನ್ಮಾನಿಸಲಾಯಿತು.


ಬೆಂಗಳೂರು (ಮೇ 16): ರಾಜ್ಯದಲ್ಲಿ ಕಳೆದ ವರ್ಷ ಆವರಸಿದ್ದ ಭೀಕರ ಬರಗಾಲದಿಂದಾಗಿ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಬೆಂಗಳೂರಿಗೆ ಕುಡಿಯುವ ನೀರಿನ ಪೂರೈಕೆಗೂ ಪರದಾಡುವಂತಹ ಪರಿಸ್ಥಿತಿ ಉಂಟಾಗಿತ್ತು. ಈ ವೇಳೆ ಬಿಬಿಎಂಪಿ ವಿಶೇಷ ಆಯುಕ್ತ ಹುದ್ದೆಯಿಂದ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾಗಿ ಬಂದ ಡಾ.ವಿ. ರಾಮ್ ಪ್ರಸಾತ್ ಮನೋಹರ್ ಬೆಂಗಳೂರಿಗೆ ನೀರು ಪೂರೈಕೆಯಲ್ಲಿ ಉಂಟಾಗುತ್ತಿದ್ದ ಸಮಸ್ಯೆಯನ್ನು ನೀಗಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ವತಿಯಿಂದ ಗೌರವಿಸಲಾಯಿತು.

ಈ ವೇಳೆ ಮಾತನಾಡಿದ ಎಫ್‌ಕೆಸಿಸಿಐ ಅಧ್ಯಕ್ಷ ರಮೇಶ್‌ ಚಂದ್ರ ಲಹೋಟಿ  ಅವರು, ಬೆಂಗಳೂರು ನಗರದಲ್ಲಿ ಎದುರಾಗಿದ್ದ ನೀರಿನ ಅಭಾವವನ್ನು ಸಮರ್ಪಕವಾಗಿ ಜಲಮಂಡಳಿ ನಿಭಾಯಿಸಿದೆ. ಇದರಲ್ಲಿ ಜಲಮಂಡಳಿ ಅಧ್ಯಕ್ಷರ ಪಾತ್ರವೂ ಹಿರಿದಾಗಿದೆ. ನೀರಿನ ಸದ್ಬಳಕೆ ಮತ್ತು ಉಳಿತಾಯ ಹಾಗೂ ಸಂಸ್ಕರಿಸಿದ ನೀರಿನ ಬಳಕೆಯನ್ನು ಪ್ರೋತ್ಸಾಹಿಸುವಂತಹ ಕ್ರಮಗಳನ್ನು ನಮ್ಮ ಕೈಗಾರಿಕಾ ಸಂಸ್ಥೆಯ ಸದಸ್ಯರು ಅಳವಡಿಸಿಕೊಳ್ಳಲಿದ್ದಾರೆ. ಮಳೆ ನೀರಿನ ಕೋಯ್ಲು ಹಾಗೂ ಮಳೆ ನೀರಿನಿಂದ ಅಂತರ್ಜಲ ಮರುಪೂರಣದಂತಹ ಕಾರ್ಯಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಜಲಮಂಡಳಿಯ ಜೊತೆಯಲ್ಲಿ ಕೈಜೋಡಿಸಲಿದ್ದೇವೆ ಎಂದರು. 

Tap to resize

Latest Videos

ಬೆಂಗಳೂರಿಗೆ ಬುದ್ಧಿ ಬಂತು: ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜು ಮತ್ತು ದೇಗುಲಗಳಿಗೆ ಮಳೆ ನೀರು ಕೊಯ್ಲು ಅಳವಡಿಕೆ!

ಕೈಗಾರಿಕೆಗಳಿಗೆ ಯಾವುದೇ ರೀತಿಯಲ್ಲೂ ನೀರಿನ ಅಭಾವ ಆಗದೇ ಇರುವ ರೀತಿಯಲ್ಲಿ ಜಲಮಂಡಳಿ ಪರಿಸ್ಥಿತಿಯನ್ನು ನಿಭಾಯಿಸಿದೆ. ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಮೂರು ಬಾರಿ ಭೇಟಿ ನೀಡಿ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ. ರಾಸಾಯನಿಕ ತ್ಯಾಜ್ಯ ನೀರು ನಿರ್ವಹಣೆಯಲ್ಲೂ ಜಪಾನೀಸ್‌ ತಂತ್ರಜ್ಞಾನವನ್ನು ಅಳವಡಿಸುವ ನಿಟ್ಟಿನಲ್ಲಿ ಮುಂದಾಗಿದ್ದು ಬಹಳ ಉತ್ತಮ ಕಾರ್ಯವಾಗಿದೆ. ಬೆಂಗಳೂರು ಸುಸ್ಥಿರ ನಗರವನ್ನಾಗಿಸುವ ನಿಟ್ಟಿನಲ್ಲಿ ಎಲ್ಲಾ ಸಹಕಾರವನ್ನು ನೀಡುವ ಮೂಲಕ ವಾಟರ್‌ ಸರ್‌ಪ್ಲಸ್‌ ಬೆಂಗಳೂರನ್ನಾಗಿಸಲು ನಮ್ಮ ಸಹಕಾರವೂ ಇರಲಿದೆ ಎಂದು ಭರವಸೆ ನೀಡಿದರು.

ಬೆಂಗಳೂರು ವಾಟರ್‌ ಸರಪ್ಲಸ್‌ ಅಭಿಯಾನಕ್ಕೆ ಕೈ ಜೋಡಿಸಿ:  ಎಫ್‌ಕೆಸಿಸಿಐ ವತಿಯಿಂದ ಗೌರವ ಸ್ವೀಕರಿಸಿ ಮಾತನಾಡದ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ಅವರು, ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಕೊರತೆಯಿಲ್ಲ. ಮಳೆಯ ಅಭಾವದಿಂದ ಅಂತರ್ಜಲ ಮಟ್ಟ ಕಡಿಮೆಯಾದ ಪರಿಣಾಮ ಕೊಳವೆ ಬಾವಿಗಳು ಬತ್ತಿಹೋದ ಪರಿಣಾಮ ಕಾವೇರಿ ನೀರಿನ ಮೇಲೆ ಒತ್ತಡ ಹೆಚ್ಚಾಯಿತು. ಇದನ್ನ ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಹಾಗೂ ಭವಿಷ್ಯದ ಅವಶ್ಯಕತೆಗಳಿಗೆ ಸಿದ್ದವಾಗುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನ ಜಲಮಂಡಳಿಯ ವತಿಯಿಂದ ಕೈಗೊಳ್ಳಲಾಗಿದೆ. ನೀರು ಉಳಿತಾಯ, ನೀರಿನ ಸದ್ಬಳಕೆ, ಸಂಸ್ಕರಿಸಿದ ನೀರಿನ ಬಳಕೆ, ಅಂತರ್ಜಲ ಹೆಚ್ಚಳದ ಕ್ರಮಗಳ ಮೂಲಕ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲಾಗಿದೆ. ಆದರೆ, ಭವಿಷ್ಯದ ಸುಸ್ಥಿರ ಬೆಂಗಳೂರಿಗಾಗಿ ಹಾಗೂ ಕೈಗಾರಿಕೆಗಳ ಅಭಿವೃದ್ದಿಗಾಗಿ ಎಲ್ಲರ ಸಹಕಾರವೂ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೈಗಾರಿಕೋದ್ಯಮಿಗಳು ಜಲಮಂಡಳಿಯ ಬೆಂಗಳೂರು ವಾಟರ್‌ ಸರಪ್ಲಸ್‌ ಅಭಿಯಾನದಲ್ಲಿ  ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಬೆಂಗಳೂರು ಜಲಮಂಡಳಿಯಿಂದ ವಿಶೇಷ ಸಾಧನೆ; ಮಳೆಗಾಲಕ್ಕೂ ಮುನ್ನ 986 ಇಂಗು ಗುಂಡಿಗಳ ನಿರ್ಮಾಣ

ಜಲಮಂಡಳಿ ವತಿಯಿಂದ ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಪ್ರತ್ಯೇಕ ಪೈಪ್‌ಲೈನ್‌ ಮೂಲಕ ಸಂಸ್ಕರಿಸಿದ ನೀರು ನೀಡಲು ಅಗತ್ಯ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ. ಪೀಣ್ಯ ಕೈಗಾರಿಕಾ ಪ್ರದೇಶ ಹೊರತುಪಡಿಸಿ ಬೇರೆ ಪ್ರದೇಶಗಳಲ್ಲಿರುವ ಕೈಗಾರಿಕೆಗಳಿಗೆ ಟ್ಯಾಂಕರ್‌ ಮೂಲಕ ಕಡಿಮೆ ದರದಲ್ಲಿ ಸಂಸ್ಕರಿಸಿದ ನೀರನ್ನು ನೀಡಲು ಸಿದ್ದರಿದ್ದೇವೆ. ಜಲಮಂಡಳಿಯ ಬಳಿ ಸುಮಾರು 1200 ಎಂ.ಎಲ್‌.ಡಿ ಯಷ್ಟು ಸಂಸ್ಕರಿಸಿದ ನೀರು ಲಭ್ಯವಿದ್ದು ಇದರ ಸದ್ಬಳಕೆಯಿಂದ ಕಾವೇರಿ ನೀರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ಇದರಿಂದ ಸಣ್ಣ ಕೈಗಾರಿಕೆಗಳಿಗೆ ಹಣದ ಉಳೀತಾಯವೂ ಆಗಲಿದೆ ಎಂದು ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದರು.

click me!