ಬೆಂಗಳೂರಿಗೆ ಸೆ. 15 ರಿಂದ 3 ದಿನ ನೀರಿಲ್ಲ: ಸಂಚಾರಿ ಕಾವೇರಿ ಸೇವೆಯೂ ಸ್ಥಗಿತ, ತುರ್ತು ಸೇವೆಗೆ ಮಾತ್ರ ಬಳಕೆ

Published : Sep 12, 2025, 07:38 PM IST
BWSSB Cauvery water supply disruption

ಸಾರಾಂಶ

ಬೆಂಗಳೂರಿಗೆ ನೀರು ಪೂರೈಸುವ ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಾಗಾರಗಳಲ್ಲಿ ಸೆ.15, 16 ಮತ್ತು 17 ರಂದು ನಿರ್ವಹಣಾ ಕಾಮಗಾರಿ ಮಾಡಲಾಗುತ್ತದೆ. ಈ ವೇಳೆ 3 ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ತುರ್ತು ನೀರು ಸರಬರಾಜಿಗೆ ಸಂಚಾರಿ ಕಾವೇರಿ ಟ್ಯಾಂಕರ್‌ ಬಳಸಲು ಜಲಮಂಡಳಿ ಮುಂದಾಗಿದೆ.

ಬೆಂಗಳೂರು (ಸೆ.12): ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸೆ.15,16 ಮತ್ತು 17ರಂದು ಸ್ಥಗಿತಗೊಳಿಸಲಾಗುತ್ತಿದೆ. 

ಈ ಜಲರೇಚಕ ಯಂತ್ರಾಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆ ಮೂರು ದಿನಗಳಲ್ಲಿ ಸಂಚಾರಿ ಕಾವೇರಿಯ ಯೋಜನೆಯ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಸೇವೆಯನ್ನು ಸ್ಥಗಿತಗೊಳಿಸಿ, ಈ ಟ್ಯಾಂಕರ್‌ಗಳನ್ನು ತುರ್ತು ನೀರು ಸರಬರಾಜಿಗಾಗಿ ಬಳಸಿಕೊಳ್ಳಲಾಗುವುದು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಅವರು ತಿಳಿಸಿದ್ದಾರೆ.

ಗ್ರೇಟರ್‌ ಬೆಂಗಳೂರು ನಗರದ ಜನತೆಗೆ ಯಾವುದೇ ಅಡೆತಡೆಯಿಲ್ಲದೇ ಕುಡಿಯುವ ನೀರನ್ನು ಸರಬರಾಜು ಮಾಡಲು, ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಗಾರಗಳು ಮತ್ತು ಮುಖ್ಯ ಕೊಳವೆ ಮಾರ್ಗಗಳ ಸುಲಲಿತ ಚಾಲನೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸುಸ್ಥಿತಿಯಲ್ಲಿಡುವ ಉದ್ದೇಶದಿಂದ ಜಲಮಂಡಳಿಯ ವಿವಿಧೆಡೆ ನಿಯಮಿತ ತುರ್ತು ನಿರ್ವಹಣೆಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಕಾವೇರಿ 5ನೇ ಹಂತದ ಜಲರೇಚಕ ಯಂತ್ರಾಗಾರಗಳು(ಪಂಪಿಂಗ್‌ ಸ್ಟೇಶನ್) ಸೆ.15ರ ಬೆಳಗ್ಗೆ 1ರಿಂದ ಸೆ.17ರ ಮಧ್ಯಾಹ್ನ 1ರವರೆಗೆ ಒಟ್ಟು 60 ಗಂಟೆಗಳು. ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1,ಹಂತ-02,ಹಂತ-3, ಹಂತ-4 1ನೇ ಘಟ್ಟ ಮತ್ತು 2ನೇ ಘಟ್ಟಗಳ ಜಲರೇಚಕ ಯಂತ್ರಾಗಾರಗಳನ್ನು ಸೆ.16ರ ಬೆಳಗ್ಗೆ 6ರಿಂದ ಸೆ.17ರ ಬೆಳಗ್ಗೆ 6ರವರೆಗೆ ಒಟ್ಟು 24 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುತ್ತಿದೆ.

ಸಂಚಾರಿ ಕಾವೇರಿ ಯೋಜನೆ ಮೂರು ದಿನ ಸ್ಥಗಿತ:

ಸಂಚಾರಿ ಕಾವೇರಿಯ ಯೋಜನೆಯ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಸೇವೆಯನ್ನು ಸ್ಥಗಿತಗೊಳಿಸಿ, ಈ ಟ್ಯಾಂಕರ್‌ಗಳನ್ನು ತುರ್ತು ನೀರು ಸರಬರಾಜಿಗಾಗಿ ಬಳಸಿಕೊಳ್ಳಲಾಗುವುದು. ಸಂಚಾರಿ ಕಾವೇರಿ ಯೋಜನೆಯ ಸೇವೆಯಲ್ಲಿ ಈ 3 ದಿನಗಳ ಕಾಲ ವ್ಯತ್ಯವಾಗಲಿದೆ ಎಂದು ತಿಳಿಸಿರುವ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌, ಕಾವೇರಿ ನೀರು ಸರಬರಾಜಾಗುವ ಪ್ರದೇಶಗಳ ನಾಗರಿಕರು ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳಲು ಅವರು ಕೋರಿದ್ದಾರೆ.

PREV
Read more Articles on
click me!

Recommended Stories

ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ
ಡಿವೈಡರ್‌ಗೆ ಕಾರ್‌ ಡಿಕ್ಕಿ, ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ