ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್‌ಗೆ ಇಂಜಿನಿಯರ್ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ.
ಬೆಂಗಳೂರು (ಅ.14): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್‌ಗೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಯಶವಂತಪುರ ಗಾರೆಪ್ಪನ ಪಾಳ್ಯ ರಸ್ತೆ ಮಾರ್ಗವಾಗಿ ಹೂವಿನ ಮಾರ್ಕೆಟ್ ಸಮೀಪ ಅಪಘಾತ ಸಂಭವಿಸಿದೆ. ಮುಂದೆ ಹೋಗುತ್ತಿದ್ದ ಬೈಕ್‌ಗೆ ಬಸ್ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ವಿದ್ಯಾರ್ಥಿಯ ತಲೆಯ ಮೇಲೆ ಬಸ್ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್‌ಗೆ ಶನಿವಾರ ಬೆಳಗ್ಗೆ ಕಾಲೇಜು ವಿದ್ಯಾರ್ಥಿ ಬಲಿಯಾಗಿದ್ದಾನೆ. ಗಂಗಾಧರ್ (21) ಬಿಎಂಟಿಸಿಗೆ ಅಪಘಾತದಿಂದ ಸ್ಥಳದಲ್ಲೇ ಬಲಿಯಾದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾನೆ. ಹೆಚ್‌ಎಎಲ್ ಗೆ ಇಂಟರ್ನ್‌ಶಿಪ್ ಸರ್ಟಿಫಿಕೇಟ್ ತರಲು ಗಂಗಾಧರ್ ಹೋಗುತ್ತಿದ್ದ ವೇಳೆ ಯಶವಂತಪುರ ಗಾರೆಪ್ಪನ ಪಾಳ್ಯ ರಸ್ತೆ ಮಾರ್ಗವಾಗಿ ಹೂವಿನ ಮಾರ್ಕೆಟ್ ಸಮೀಪ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಬೈಕ್‌ನಲ್ಲಿ ನಿಧಾನವಾಗಿ ಹೋಗುತ್ತಿದ್ದ ಗಂಗಾಧರ್‌ಗೆ ಬಿಎಂಟಿಸಿ ಬಸ್ ಹಿಂಭಾಗದಿಂದ ಬಂದು ಡಿಕ್ಕಿ ಹೊಡೆದಿದೆ.
ಭಾರತ, ಪಾಕಿಸ್ತಾನ ಪಂದ್ಯ ನೋಡೋರಿಗೆ ನಿರಾಸೆ: ಇಂದು ಕರೆಂಟ್ ಇರಲ್ಲ..!
ಇನ್ನು ಬೈಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಗಂಗಾಧರ್ ಮೇಲೆ ಬಸ್‌ನ ಚಕ್ರ ಹರಿದಿದೆ. ಬಸ್ ಹರಿಯುತ್ತಿದ್ದಂತೆ ದೇಹದ ಭಾಗಗಳು ಛಿದ್ರಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಎಂ.ಎಸ್.ರಾಮಯ್ಯ ಆಸ್ಪತ್ರೆ ಗೆ ರವಾನಿಸಲಾಗಿದೆ. ಅಪಘಾತದ ಸ್ಥಳಕ್ಕೆ ಯಶವಂತಪುರ ಸಂಚಾರ ಪೋಲಿಸರ ಭೇಟಿ ಪರಿಶೀಲನೆ ನೀಡಿ ಪರಿಶೀಲನೆ ಮಾಡಿದ್ದಾರೆ. ಅಪಘಾತ ಎಸಗಿದ್ದ ಬಿಎಂಟಿಸಿ ಬಸ್ ಚಾಲಕನಿಗೆ ಠಾಣೆಗೆ ಬರುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.
ದಸರಾ ಹಬ್ಬಕ್ಕೆ ಊರಿಗೆ ತೆರಳೋರಿಗೆ ಸಂತಸದ ಸುದ್ದಿ: ಕೆಎಸ್‌ಆರ್‌ಟಿಸಿಯಿಂದ 2000 ಹೆಚ್ಚುವರಿ ಬಸ್
ಪಟಾಕಿ ಫ್ಯಾಕ್ಟರಿ ಆಯ್ತು, ಈಗ ಅಗರಬತ್ತಿ ಫ್ಯಾಕ್ಟರಿಗೆ ಬೆಂಕಿ: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ವಿಜಯನಗರದ ಪೈಪ್ ಲೈನ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಗರಬತ್ತಿ ಫ್ಯಾಕ್ಟರಿಗೆ ಬಿದ್ದ ಬೆಂಕಿ ಬಿದ್ದಿದೆ,. ದೊಡ್ಡ ಪ್ರಮಾಣದ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇದನ್ನು ನೋಡಿದ ಜನರು ಭಯಭೀತರಾಗಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ 2 ಅಗ್ನಿಶಾಮಕ ವಾಹನಗಳು ಕಾರ್ಯಚರಣೆ ನಡೆಸಿ ಬೆಂಕಿಯನ್ನು ನಂದಿಸಲಾಗುತ್ತಿದೆ. ಇನ್ನು ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ಮಾಡುತ್ತಿದ್ದು, ಲಕ್ಷಾಂತರ ಮೌಲ್ಯದ ಅಗರಬತ್ತಿ ಹಾಗೂ ಇತರೆ ವಸ್ತುಗಳು ಹಾಳಾಗಿವೆ ಎಂದು ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದಾರೆ.