
ಬೆಂಗಳೂರು (ಅ.21): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 66/11 ಕೆವಿ ವಿಡಿಯಾ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ನಾಳಿದ್ದು ಅ.23ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಬೆಂಗಳೂರಿನ ವಿವಿಧ ಜನವಸತಿ ಪ್ರದೇಶಗಳಾದ ವಿನಾಯಕ ನಗರ, ವಿಕಾಸ್ ನಗರ, ಶೋಭಾ ಅಪಾರ್ಟ್‌ಮೆಂಟ್, 8 ನೇ ಮೈಲ್ ರಸ್ತೆ, ರಾಮಯ್ಯ ಲೇಔಟ್, ಹಾವನೂರು ಎಕ್ಸ್‌ಟೆನ್. ನಾರಾಯಣ ಲೇಔಟ್, ವಿಡಿಯಾ ಸ್ಕೂಲ್, ಕುವೆಂಪು ನಗರ, ವಿಡಿಯಾ ಬಸ್ ಸ್ಟಾಪ್, ರಿಲಯನ್ಸ್ ಫ್ರೆಶ್, ಮುನಿಕೊಂಡಪ್ಪ ಲೇಔಟ್, ಅಶೋಕ್ ನಗರ, ವಿದ್ಯಾ ನಗರ, ಡಿಫೆನ್ಸ್ ಕಾಲೋನಿ, ಹಾವನೂರು ಎಕ್ಸ್,. ಮಂಜುನಾಥ್ ನಗರ, ಮಹಾಲಕ್ಷ್ಮಿ ನಗರ, ಕಾಟರಾಯ ನಗರ, ಸೋಪ್ ಫ್ಯಾಕ್ಟರಿ ಲೇಔಟ್, ವಿಜಯಲಕ್ಷ್ಮಿ ಲೇಔಟ್, ಅಂದಾನಪ್ಪ ಲೇಔಟ್ , ಬಿಟಿಎಸ್ ಲೇಔಟ್, ಸಿದ್ದೇಶ್ವರ ಲೇಔಟ್, ಸಾಸುವೆಘಟ್ಟ, ಸೋಲದೇವನಹಳ್ಳಿಯ ಭಾಗಶಃ, ತರಬನಹಳ್ಳಿ ಮುಖ್ಯ ರಸ್ತೆ, , ಹಾವನೂರು ಎಕ್ಸ್‌ಟಿಎನ್., ಹೆಸರಘಟ್ಟ ಮುಖ್ಯ ರಸ್ತೆ, ಸಿಡೇದಹಳ್ಳಿ, ಭಾಗಶಃ ವಿಶ್ವೇಶರಯ್ಯ ಲೇಔಟ್, ರಾಯಲ್ ಎನ್‌ಕ್ಲೇವ್, ಬೈರವೇಶ್ವರ ವೃತ್ತ. ಮತ್ತು ಮೇಲೆ ಹೇಳಿದ ಪ್ರದೇಶದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.