ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್‌ಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ!

By Govindaraj S  |  First Published Jan 25, 2023, 10:50 PM IST

ಭಾರತ ಚುನಾವಣಾ ಆಯೋಗವು 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು, 'Nothing Like Voting, I Vote For Sure' 'ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ' ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸುವಂತೆ ನಿರ್ದೇಶನ ನೀಡಿದೆ.


ಉಡುಪಿ (ಜ.25): ಭಾರತ ಚುನಾವಣಾ ಆಯೋಗವು 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು, 'Nothing Like Voting, I Vote For Sure' 'ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ' ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸುವಂತೆ ನಿರ್ದೇಶನ ನೀಡಿದ್ದು,  ಅದರಂತೆ ರಾಜ್ಯ ಮಟ್ಟದಲ್ಲಿ ಇಂದು ಸರ್‌ ಪುಟ್ಟಣ್ಣಚೆಟ್ಟಿ ಪುರಭವನ ಬೆಂಗಳೂರು ಇಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗಿದೆ.

ಈ ಸಂದರ್ಭದಲ್ಲಿ ರಾಜ್ಯ ಮಟ್ಟದಲ್ಲಿ ವಿವಿಧ ವಿಭಾಗಗಲ್ಲಿ ಉತ್ತಮ ಸಾಧನೆ ಮಾಡಿದ ಅಧಿಕಾರಿ ಸಿಬ್ಬಂದಿಗಳನ್ನು ಆಯ್ಕೆ ಮಾಡಲಾಗಿದ್ದು, ಅದರಂತೆ 'ಜಿಲ್ಲಾ ಚುನಾವಣಾಧಿಕಾರಿ' ವಿಭಾಗದಲ್ಲಿ ಆಯ್ಕೆಯಾದ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರಿಗೆ ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರು ಪ್ರಶಸ್ತಿ ನೀಡಿದರು. 

Tap to resize

Latest Videos

undefined

ಹಾಲಕ್ಕಿ ಸಮುದಾಯದ ಬೇಡಿಕೆ ಈಡೇರದಿದ್ದರೆ ಚುನಾವಣೆಯಲ್ಲಿ ನೋಟಾ ಹಾಕುವುದಾಗಿ ಎಚ್ಚರಿಕೆ!

ಈ ಪ್ರಶಸ್ತಿ ಪಡೆಯುವಲ್ಲಿ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳ (ಬಿಎಲ್ಒ), ಮತಗಟ್ಟೆಮಟ್ಟದ ಅಧಿಕಾರಿಗಳ ಮೇಲ್ವಿಚಾರಕರ, ಸಹಾಯಕ ಮತದಾರರ ನೋಂದಣಾಧಿಕಾರಿಗಳ, ಮತದಾರರ ನೋಂದಣಿ ಅಧಿಕಾರಿಯವರ, ಸ್ವೀಪ್‌ ತಂಡ, ಕಾಲೇಜು ಪ್ರಾಂಶುಪಾಲರುಗಳು, ಜಿಲ್ಲೆಯ ಚುನಾವನಾ ಶಾಖೆಯ ಅಧಿಕಾರಿ, ಸಿಬ್ಬಂದಿಗಳು ಮತ್ತು ಜಿಲ್ಲೆಯಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ನೋಂದಣಿ ಮಾಡಿಕೊಂಡ ಯುವ ಮತದಾರರು ಮತ್ತು ಎಲ್ಲಾ ಜಿಲ್ಲೆಯ ಮತದಾರರ ಶ್ರಮವಿದ್ದು ಇವರೆಲ್ಲರನ್ನು ಅಭಿನಂದಿಸುತ್ತಾ, ಮುಂಬರುವ ಚುನಾವಣಾ ಪ್ರಕ್ರಿಯೆಗಳಲ್ಲಿ ಸಹ ಎಲ್ಲಾ ಸಹಕಾರವನ್ನು ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

click me!