ಜೆಡಿಎಸ್ ಮುಖಂಡ ಅಪ್ಪಾಜಿಗೌಡ ಕೊರೋನಾಗೆ ಬಲಿ

By Kannadaprabha NewsFirst Published Sep 3, 2020, 8:12 AM IST
Highlights

ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಇದೀಗ ಜೆಡಿಎಸ್ ಮುಖಂಡರೋರ್ವರು ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.

ಶಿವಮೊಗ್ಗ (ಸೆ.03): ಭದ್ರಾವತಿ ಕ್ಷೇತ್ರದ ಜೆಡಿಎಸ್‌ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಗೌಡ (66) ಬುಧವಾರ ರಾತ್ರಿ 11.30ರ ಸುಮಾರಿಗೆ ನಿಧನರಾದರು. 

"

ಅನಾರೋಗ್ಯಕ್ಕೀಡಾಗಿದ್ದ ಅವರು ಕಳೆದ ನಾಲ್ಕು ದಿನಗಳಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಸಂಜೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ನಗರದ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. 

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ಕ್ಷೇತ್ರದಿಂದ 3 ಬಾರಿ ಶಾಸಕರಾಗಿದ್ದರು. ಎರಡು ಬಾರಿ ಪಕ್ಷೇತರರಾಗಿ ಆಯ್ಕೆಯಾಗಿದ್ದ ಅವರು ಒಮ್ಮೆ ಜೆಡಿಎಸ್‌ನಿಂದ ಆಯ್ಕೆಯಾಗಿದ್ದರು.

ಕೊರೋನಾಗೆ ಪರಮೌಷಧ, ಗಂಭೀರ ರೋಗಿಗಳಿಗೂ ಬಳಸಲು ಸೂಚನೆ! ...

ಈಗಾಗಲೇ ಕೊರೋನಾ ಮಹಾಮಾರಿ ದೇಶದಲ್ಲಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಲಕ್ಷ ಲಕ್ಷ ಸಂಖ್ಯೆಯ ಜನರಿಗೆ ಕೊರೋನಾ ತಗುಲಿದೆ. ಸಾವಿವಾರು ಮಂದಿ ಭಾರತದಲ್ಲಿ ಕೊರೋನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. 

ರಾಜ್ಯದಲ್ಲಿಯೂ ಕೂಡ ದಿನದಿನವೂ ಕೊರೋನಾ ಭಿತಿ ದಿನವೂ ಹೆಚ್ಚಾಗುತ್ತಲೇ ಇದೆ. ಲಕ್ಷಾಂತರ ಸಂಖ್ಯೆಯಲ್ಲಿ ರೋಗಿಗಳು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಕೊರೋನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಕೂಡ ರಾಜ್ಯದಲ್ಲಿ ಏರಿಕೆಯಾಗುತ್ತಲೇ ಇದೆ.

 

ಉಕ್ಕಿನ ನಗರಿ ಭದ್ರಾವತಿಯ ಕಾರ್ಖಾನೆ ಕಾರ್ಮಿಕರ ಧ್ವನಿಯಾಗಿ ರಾಜಕೀಯ ಪ್ರವೇಶಿಸಿದ ಅಪ್ಪಾಜಿ ಗೌಡರ ನಿಧನ ಈ ನಾಡಿಗೆ ಮತ್ತು ಜೆಡಿಎಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ.
2/2

— H D Kumaraswamy (@hd_kumaraswamy)

ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಎಂ.ಜೆ. ಅಪ್ಪಾಜಿ (ಅಪ್ಪಾಜಿ ಗೌಡ್ರು) ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀರಾ ದು:ಖವಾಯಿತು.
ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
1/2

— H D Kumaraswamy (@hd_kumaraswamy)
click me!